ಮಳ್ಳೋಡಿ ಸಂಪರ್ಕ ರಸ್ತೆ ಅಭಿವೃದ್ಧಿಗೆ ಗ್ರಾಮಸ್ಥರ ಹರ್ಷ

ಸಂಸೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಳ್ಳೋಡಿ ರಸ್ತೆಯನ್ನು ಉದ್ಘಾಟಿಸಲಾಯಿತು.
ಸಂಸೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಳ್ಳೋಡಿ ರಸ್ತೆಯನ್ನು ಉದ್ಘಾಟಿಸಲಾಯಿತು.
Published on
ಕಳಸ: ಸಂಸೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಳ್ಳೋಡಿ ಭಾಗದ ಸಾರ್ವಜನಿಕರ ಹಲವು ವರ್ಷಗಳ ಪ್ರಮುಖ ಬೇಡಿಕೆಯಾಗಿದ್ದ ಸುಸಜ್ಜಿತ ರಸ್ತೆ ನಿರ್ಮಾಣದ ಕನಸು ಕೊನೆಗೂ ನನಸಾಗಿದ್ದು, ಹದಗೆಟ್ಟಿದ್ದ ಮಳ್ಳೋಡಿ ಸಂಪರ್ಕ ರಸ್ತೆಯನ್ನು ಕಾಂಕ್ರೀಟಿಕರಣಗೊಳಿಸಲಾಗಿದೆ.
ಮಳ್ಳೋಡಿಗೆ ಸಂಪರ್ಕ ಕಲ್ಪಿಸುವ ರಸ್ತೆ ಕಳೆದ ಹಲವಾರು ವಷರ್ಗಳಿಂದ ಶಿಥಿಲಾವಸ್ಥೆ ತಲುಪಿತ್ತು. ರಸ್ತೆಯಲ್ಲಿನ ಗುಂಡಿಗಳಿಂದ ವಾಹನ ಸವಾರರು, ಶಾಲಾ ಮಕ್ಕಳು ಹಾಗೂ ಅನಾರೋಗ್ಯ ಪೀಡಿತರು ಓಡಾಡಲು ಪ್ರತಿದಿನ ನರಕಯಾತನೆ ಅನುಭವಿಸುವಂತಾಗಿತ್ತು. ಈ ತೊಂದರೆ ನೀಗಿಸುವಂತೆ ಮಳ್ಳೋಡಿ ಭಾಗದ ಗ್ರಾಮಸ್ಥರು ಹಾಗೂ ಸ್ಥಳೀಯ ಕಾಂಗ್ರೆಸ್ ಮುಖಂಡರು ಶಾಸಕಿ ನಯನ ಮೋಟಮ್ಮ ಅವರಿಗೆ ಮನವಿ ಸಲ್ಲಿಸಿದ್ದರು.
ಗ್ರಾಮಸ್ಥರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ ಶಾಸಕಿ ನಯನ ಮೋಟಮ್ಮ ಅವರು, ತಕ್ಷಣ ರಸ್ತೆ ಅಭಿವೃದ್ಧಿಗೆ ವಿಶೇಷ ಕಾಳಜಿವಹಿಸಿ 5 ಕೋಟಿ ರೂ. ವೆಚ್ಚದಲ್ಲಿ ಮಳ್ಳೋಡಿ ರಸ್ತೆಯನ್ನು ಸಂಪೂರ್ಣ ಕಾಂಕ್ರೀಟಿಕರಣಗೊಳಿಸಲಾಗಿದೆ. ಈ ಮೂಲಕ ಈ ಭಾಗದ ಜನರ ದಶಕಗಳ ಆಸೆ ಈಡೇರಿದಂತಾಗಿದೆ.
ರಸ್ತೆ ಉದ್ಘಾಟನಾ ಸಮಾರಂಭದಲ್ಲಿ ಕಳಸ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎ.ಶ್ರೇಣಿಕೆ, ಮುಖಂಡರಾದ ಕೆ.ಆರ್. ಪ್ರಭಾಕರ್, ವಿಶ್ವನಾಥ, ವೀರೇಂದ್ರ ಜೈನ್, ಸುಜಿತ್‌ಬೆಳ್ಳ, ಉದಯ ಮುಳ್ಳೋಡಿ, ಅಬ್ದುಲ್ ಶುಕುರು, ಸಂಶುದ್ಧೀನ್, ಪ್ರವೀಣ್ ಸಂಸೆ, ಕೆ.ಸಿ.ಮಹೇಶ್, ಶ್ರೀನಿವಾಸ, ರಾಜಪ್ಪ ಗೌಡ ಇತರರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net