2 ಸಾವಿರ ನೀಡಿ ಮಹಿಳಾ ಸಬಲೀಕರಣ ಸಾಧ್ಯವಿಲ್ಲ

ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರ ಸ್ವಾಮಿ
ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರ ಸ್ವಾಮಿ
Published on

ಪ್ರಮುಖ ಮುಖ್ಯಾಂಶಗಳು

  • 1996ರಲ್ಲಿಯೇ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ನೀಡಿದ್ದು ಮಾಜಿ ಪ್ರಧಾನಿ ದೇವೇಗೌಡ
  • ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅಭಿಮತ
ಚಿಕ್ಕಮಗಳೂರು: ಹೋದಲ್ಲಿ ಬಂದಲ್ಲಿ ರಾಹುಲ್‌ ಗಾಂಧಿ ಅವರು ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡುತ್ತಾರೆ. ಕೇವಲ 2 ಸಾವಿರ ರು. ಕೊಟ್ಟು ನಿರಂತರವಾಗಿ ಮಹಿಳಾ ಸಬಲೀಕರಣ ಮಾಡುತ್ತೀರಾ ಎಂದು ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರ ಸ್ವಾಮಿ ಪ್ರಶ್ನಿಸಿದರು.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1996 ರಲ್ಲಿಯೇ ದೇವೇಗೌಡರು ಪ್ರಧಾನ ಮಂತ್ರಿ ಆಗಿರುವಾಗ ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ ಶೇ.33 ರಷ್ಟು ಮಹಿಳೆಯರಿಗೆ ಸ್ಥಾನ ಮೀಸಲಿಡಬೇಕು ಎಂದು ತೀರ್ಮಾನ ಮಾಡಿದ್ದರು. ಆಗಲೂ ಕಾಂಗ್ರೆಸ್‌ ವಿರೋಧ ವ್ಯಕ್ತಪಡಿಸಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈಗ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೋದಲ್ಲಿ, ಬಂದಲ್ಲಿ ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡುತ್ತಾರೆ. ಕೇವಲ 2 ಸಾವಿರ ಕೊಟ್ಟು ಮಹಿಳಾ ಸಬಲೀಕರಣ ಮಾಡುತ್ತೀರಾ?, ಮಹಿಳೆಯರ ಮೂಲಕವೂ ಆಡಳಿತ ನಡೆಸುವ ವ್ಯವಸ್ಥೆ ಮಾಡುವುದರಲ್ಲಿ ತಪ್ಪೇನಿದೆ ಎಂದು ಕೇಳಿದರು.
ಆದರೂ ಕಾಂಗ್ರೆಸ್‌ ಕ್ಷೇತ್ರ ಪುನರ್‌ ವಿಂಗಡಣೆಯನ್ನೇ ನೆಪವಾಗಿಟ್ಟುಕೊಂಡು ಮಹಿಳಾ ಮೀಸಲಾತಿ ವಿರೋಧಿಸುವ ಕಾಂಗ್ರೆಸ್‌ನ ಮನೋಸ್ಥಿತಿ ಏನು ಎಂಬುದನ್ನು ತಿಳಿಸುತ್ತಿದೆ. ಮಹಿಳೆಯರನ್ನು ಕೇವಲ ಮತ ಬ್ಯಾಂಕ್‌ಗಾಗಿಯೇ ಇಟ್ಟುಕೊಳ್ಳಬೇಕಾ ಎಂಬುದರ ಬಗ್ಗೆ ಕಾಂಗ್ರೆಸ್‌ ಅಲೋಚನೆ ಮಾಡಬೇಕು ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net