ಯೋಗದಿಂದ ಶಿಸ್ತು ಹಾಗೂ ಸಂಸ್ಕಾರಯುತ ಜೀವನ ಸಾಧ್ಯ

ಚಿಕ್ಕಮಗಳೂರಿನಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿದ್ದ ಯೋಗ ನಡಿಗೆ ಕಾರ್ಯಕ್ರಮಕ್ಕೆ ಶಾಸಕ ಎಚ್‌.ಡಿ.ತಮ್ಮಯ್ಯ ಚಾಲನೆ ನೀಡಿದರು..
ಚಿಕ್ಕಮಗಳೂರಿನಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿದ್ದ ಯೋಗ ನಡಿಗೆ ಕಾರ್ಯಕ್ರಮಕ್ಕೆ ಶಾಸಕ ಎಚ್‌.ಡಿ.ತಮ್ಮಯ್ಯ ಚಾಲನೆ ನೀಡಿದರು..
Published on

ಪ್ರಮುಖ ಮುಖ್ಯಾಂಶಗಳು

  • ಆರೋಗ್ಯ ಕಾಪಾಡಿಕೊಳ್ಳಲು ‘ಯೋಗ ಭಾಗ್ಯ’ ಅತ್ಯಗತ್ಯ
  • ಶಾಸಕ ಹೆಚ್.ಡಿ.ತಮ್ಮಯ್ಯ ಅಭಿಪ್ರಾಯ
ಚಿಕ್ಕಮಗಳೂರು: ‘ಆರೋಗ್ಯವೇ ಭಾಗ್ಯ’ ಎಂಬ ನಾಣ್ಣುಡಿಯಂತೆ ಆರೋಗ್ಯ ಕಾಪಾಡಿಕೊಳ್ಳಲು ‘ಯೋಗ ಭಾಗ್ಯ’ ಅತ್ಯಗತ್ಯ. ಯೋಗವು ಕೇವಲ ದೈಹಿಕ ವ್ಯಾಯಾಮವಲ್ಲ, ಅದು ಜೀವನಕ್ಕೆ ಶಿಸ್ತು, ನಡತೆ ಹಾಗೂ ಉತ್ತಮ ಸಂಸ್ಕಾರ ಕಲಿಸುವ ದಾರಿಯಾಗಿದೆ ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ಅಭಿಪ್ರಾಯಪಟ್ಟರು.
ನಗರದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಆಯುಷ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಯುವ ಸಬಲೀಕರಣ ಇಲಾಖೆ, ಸ್ಕೌಟ್ಸ್ ಮತ್ತು ಗೈಡ್ಸ್, ಮೇರಾ ಯುವ ಭಾರತ್, ಭಾರತ್ ಸೇವಾದಳ, ಎನ್‌ಎಸ್‌ಎಸ್ ಘಟಕ, ವಿವಿಧ ಯೋಗ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ’ ಧ್ಯೇಯ ವಾಕ್ಯದಡಿಯ ೧೨ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ‘ಯೋಗ ನಡಿಗೆ ಜಾಥಾ’ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪ್ರತಿ ವರ್ಷ ಜೂನ್ ೨೧ ರಂದು ಒಕ್ಕಲಿಗರ ಹಾಸ್ಟೆಲ್‌ನಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗುತ್ತಿತ್ತು. ಆದರೆ ಈ ಬಾರಿ ಕೆಲವು ತಾಂತ್ರಿಕ ಕಾರಣಗಳಿಂದಾಗಿ ಜೂನ್ ೨೧ರ ಭಾನುವಾರ ಬೆಳಿಗ್ಗೆ ೬ ಗಂಟೆಗೆ ಎಐಟಿ ವೃತ್ತದ ಬಳಿ ಇರುವ ಒಕ್ಕಲಿಗರ ಹಾಸ್ಟೆಲ್ ಆವರಣದ ‘ಬೆಳ್ಳಿ ಭವನ’ ದಲ್ಲಿ ಜಿಲ್ಲಾ ಮಟ್ಟದ ಯೋಗ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ. ಜಿಲ್ಲೆಯ ಸಾರ್ವಜನಿಕರು ಹಾಗೂ ಯುವ ಪೀಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಶಾಸಕರು ಮನವಿ ಮಾಡಿದರು.
ನಮ್ಮ ದೇಶದಲ್ಲಿ ಸಾವಿರಾರು ವರ್ಷಗಳ ಇತಿಹಾಸವಿರುವ ಯೋಗ ಪರಂಪರೆಗೆ ಇಂದು ಜಾಗತಿಕವಾಗಿ ಮನ್ನಣೆ ಸಿಕ್ಕಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಸತತ ಪ್ರಯತ್ನದ ಫಲವಾಗಿ ಜೂನ್ ೨೧ ಅನ್ನು ವಿಶ್ವ ಸಂಸ್ಥೆಯು ’ಅಂತಾರಾಷ್ಟ್ರೀಯ ಯೋಗ ದಿನ’ ಎಂದು ಘೋಷಿಸಿತು. ಇಂದು ವಿಶ್ವದ ನೂರಕ್ಕೂ ಹೆಚ್ಚು ದೇಶಗಳಲ್ಲಿ ಏಕಕಾಲದಲ್ಲಿ ಯೋಗ ದಿನವನ್ನು ಆಚರಿಸಲಾಗುತ್ತಿರುವುದು ಪ್ರತಿಯೊಬ್ಬ ಭಾರತೀಯನೂ ಹೆಮ್ಮೆಪಡುವ ವಿಚಾರ. ನಮ್ಮ ದೇಶಕ್ಕಿಂತಲೂ ಹೆಚ್ಚಾಗಿ ವಿದೇಶಿಗರು ಯೋಗದ ಕಡೆಗೆ ಆಕರ್ಷಿತರಾಗುತ್ತಿದ್ದಾರೆ ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ಹೇಳಿದರು.
ಧ್ಯಾನದ ಮೂಲಕ ಮನಸ್ಸಿನಲ್ಲಿರುವ ಕಲ್ಮಶಗಳನ್ನು ಹೋಗಲಾಡಿಸಿ ಮಾನಸಿಕ ನೆಮ್ಮದಿ ಪಡೆಯಬಹುದು. ಪತಂಜಲಿ ಯೋಗ ಸಂಸ್ಥೆ ಮತ್ತು ಪ್ರಬೋಧಿನಿ ಸಂಸ್ಥೆಯ ಶಿವಪ್ಪ ಹಾಗೂ ತಂಡದವರು ಕಳೆದ ಹಲವು ವರ್ಷಗಳಿಂದ ಯೋಗವನ್ನು ಕಲಿಸುತ್ತಾ ಸಮಾಜಮುಖಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದ ಅವರು, ಯುವ ಪೀಳಿಗೆಯಲ್ಲಿ ಯೋಗದ ಬಗ್ಗೆ ಜಾಗೃತಿ ಮೂಡಿಸುವುದೇ ಈ ಯೋ
ಯೋಗದಿಂದ ಶಿಸ್ತು ಹಾಗೂ ಸಂಸ್ಕಾರಯುತ ಜೀವನ ಸಾಧ್ಯ
ಚಿಕ್ಕಮಗಳೂರು, ಜೂ.೧೯: ‘ಆರೋಗ್ಯವೇ ಭಾಗ್ಯ’ ಎಂಬ ನಾಣ್ಣುಡಿಯಂತೆ ಆರೋಗ್ಯ ಕಾಪಾಡಿಕೊಳ್ಳಲು ‘ಯೋಗ ಭಾಗ್ಯ’ ಅತ್ಯಗತ್ಯ. ಯೋಗವು ಕೇವಲ ದೈಹಿಕ ವ್ಯಾಯಾಮವಲ್ಲ, ಅದು ಜೀವನಕ್ಕೆ ಶಿಸ್ತು, ನಡತೆ ಹಾಗೂ ಉತ್ತಮ ಸಂಸ್ಕಾರ ಕಲಿಸುವ ದಾರಿಯಾಗಿದೆ ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ಅಭಿಪ್ರಾಯಪಟ್ಟರು.
ನಗರದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಆಯುಷ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಯುವ ಸಬಲೀಕರಣ ಇಲಾಖೆ, ಸ್ಕೌಟ್ಸ್ ಮತ್ತು ಗೈಡ್ಸ್, ಮೇರಾ ಯುವ ಭಾರತ್, ಭಾರತ್ ಸೇವಾದಳ, ಎನ್‌ಎಸ್‌ಎಸ್ ಘಟಕ, ವಿವಿಧ ಯೋಗ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ’ ಧ್ಯೇಯ ವಾಕ್ಯದಡಿಯ ೧೨ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ‘ಯೋಗ ನಡಿಗೆ ಜಾಥಾ’ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪ್ರತಿ ವರ್ಷ ಜೂನ್ ೨೧ ರಂದು ಒಕ್ಕಲಿಗರ ಹಾಸ್ಟೆಲ್‌ನಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗುತ್ತಿತ್ತು. ಆದರೆ ಈ ಬಾರಿ ಕೆಲವು ತಾಂತ್ರಿಕ ಕಾರಣಗಳಿಂದಾಗಿ ಜೂನ್ ೨೧ರ ಭಾನುವಾರ ಬೆಳಿಗ್ಗೆ ೬ ಗಂಟೆಗೆ ಎಐಟಿ ವೃತ್ತದ ಬಳಿ ಇರುವ ಒಕ್ಕಲಿಗರ ಹಾಸ್ಟೆಲ್ ಆವರಣದ ‘ಬೆಳ್ಳಿ ಭವನ’ ದಲ್ಲಿ ಜಿಲ್ಲಾ ಮಟ್ಟದ ಯೋಗ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ. ಜಿಲ್ಲೆಯ ಸಾರ್ವಜನಿಕರು ಹಾಗೂ ಯುವ ಪೀಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಶಾಸಕರು ಮನವಿ ಮಾಡಿದರು.
ನಮ್ಮ ದೇಶದಲ್ಲಿ ಸಾವಿರಾರು ವರ್ಷಗಳ ಇತಿಹಾಸವಿರುವ ಯೋಗ ಪರಂಪರೆಗೆ ಇಂದು ಜಾಗತಿಕವಾಗಿ ಮನ್ನಣೆ ಸಿಕ್ಕಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಸತತ ಪ್ರಯತ್ನದ ಫಲವಾಗಿ ಜೂನ್ ೨೧ ಅನ್ನು ವಿಶ್ವ ಸಂಸ್ಥೆಯು ’ಅಂತಾರಾಷ್ಟ್ರೀಯ ಯೋಗ ದಿನ’ ಎಂದು ಘೋಷಿಸಿತು. ಇಂದು ವಿಶ್ವದ ನೂರಕ್ಕೂ ಹೆಚ್ಚು ದೇಶಗಳಲ್ಲಿ ಏಕಕಾಲದಲ್ಲಿ ಯೋಗ ದಿನವನ್ನು ಆಚರಿಸಲಾಗುತ್ತಿರುವುದು ಪ್ರತಿಯೊಬ್ಬ ಭಾರತೀಯನೂ ಹೆಮ್ಮೆಪಡುವ ವಿಚಾರ. ನಮ್ಮ ದೇಶಕ್ಕಿಂತಲೂ ಹೆಚ್ಚಾಗಿ ವಿದೇಶಿಗರು ಯೋಗದ ಕಡೆಗೆ ಆಕರ್ಷಿತರಾಗುತ್ತಿದ್ದಾರೆ ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ಹೇಳಿದರು.
ಧ್ಯಾನದ ಮೂಲಕ ಮನಸ್ಸಿನಲ್ಲಿರುವ ಕಲ್ಮಶಗಳನ್ನು ಹೋಗಲಾಡಿಸಿ ಮಾನಸಿಕ ನೆಮ್ಮದಿ ಪಡೆಯಬಹುದು. ಪತಂಜಲಿ ಯೋಗ ಸಂಸ್ಥೆ ಮತ್ತು ಪ್ರಬೋಧಿನಿ ಸಂಸ್ಥೆಯ ಶಿವಪ್ಪ ಹಾಗೂ ತಂಡದವರು ಕಳೆದ ಹಲವು ವರ್ಷಗಳಿಂದ ಯೋಗವನ್ನು ಕಲಿಸುತ್ತಾ ಸಮಾಜಮುಖಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದ ಅವರು, ಯುವ ಪೀಳಿಗೆಯಲ್ಲಿ ಯೋಗದ ಬಗ್ಗೆ ಜಾಗೃತಿ ಮೂಡಿಸುವುದೇ ಈ ಯೋಗ ನಡಿಗೆಯ ಪ್ರಮುಖ ಉದ್ದೇಶವಾಗಿದ್ದು, ಯುವಕರು ಇದನ್ನು ತಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಮಾತನಾಡಿ, ಜೂನ್ ೨೧ ರಂದು ಆಯೋಜಿಸಲಾಗಿರುವ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಈಗಾಗಲೇ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು, ಜಿಲ್ಲೆಯ ನಾಗರಿಕರು, ಹಿರಿಯರು ಹಾಗೂ ಯುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ನಗರದ ತಹಶೀಲ್ದಾರ್ ಕಚೇರಿ ಆವರಣದಿಂದ ಆರಂಭವಾದ ಯೋಗ ನಡಿಗೆ ಜಾಥಾವು ಪ್ರಮುಖ ರಸ್ತೆಗಳ ಮೂಲಕ ಸಾಗಿ ಜಿಲ್ಲಾ ಕ್ರೀಡಾಂಗಣ ತಲುಪಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೀರ್ತನಾ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಎಸ್.ಗೀತಾ, ಡಿಹೆಚ್‌ಒ ಡಾ.ಅಶ್ವತ್ಥಾಮ, ಈಶ್ವರಿ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಡಾ.ಭಾಗ್ಯ, ಸುರೇಂದ್ರ, ಶಿವಪ್ಪ, ಅರಸು ಸಂಘದ ಅಧ್ಯಕ್ಷ ಜನಾರ್ದನ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಭಾಗವಹಿಸಿದ್ದರು.
ಗ ನಡಿಗೆಯ ಪ್ರಮುಖ ಉದ್ದೇಶವಾಗಿದ್ದು, ಯುವಕರು ಇದನ್ನು ತಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಮಾತನಾಡಿ, ಜೂನ್ ೨೧ ರಂದು ಆಯೋಜಿಸಲಾಗಿರುವ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಈಗಾಗಲೇ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು, ಜಿಲ್ಲೆಯ ನಾಗರಿಕರು, ಹಿರಿಯರು ಹಾಗೂ ಯುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ನಗರದ ತಹಶೀಲ್ದಾರ್ ಕಚೇರಿ ಆವರಣದಿಂದ ಆರಂಭವಾದ ಯೋಗ ನಡಿಗೆ ಜಾಥಾವು ಪ್ರಮುಖ ರಸ್ತೆಗಳ ಮೂಲಕ ಸಾಗಿ ಜಿಲ್ಲಾ ಕ್ರೀಡಾಂಗಣ ತಲುಪಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೀರ್ತನಾ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಎಸ್.ಗೀತಾ, ಡಿಹೆಚ್‌ಒ ಡಾ.ಅಶ್ವಥ್‌ ಬಾಬು, ಈಶ್ವರಿ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಡಾ.ಭಾಗ್ಯ, ಸುರೇಂದ್ರ, ಶಿವಪ್ಪ, ಅರಸು ಸಂಘದ ಅಧ್ಯಕ್ಷ ಜನಾರ್ದನ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಭಾಗವಹಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net