ಮಹಿಳೆಯರು ೪೦ ವರ್ಷಗಳ ವರೆಗೆ ತಮ್ಮ ಕುಟುಂಬದ ನಿರ್ವಹಣೆಯಲ್ಲಿ ತೊಡಗಲಿದ್ದು ನಂತರ ತಮ್ಮ ಆರೋಗ್ಯಕ್ಕೆ ಆದ್ಯತೆ ನೀಡುವ ಮೂಲಕ ಯೋಗ, ನಡಿಗೆ, ದ್ಯಾನ, ಪ್ರಾಣಾಯಾಮ ಮುಂತಾದವುಗಳನ್ನು ಪ್ರತಿ ದಿನ ಮಾಡುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ತಿಳಿಸಿದರು.
ಇದರ ಸದುಪಯೋಗವನ್ನು ಸಂಘದ ಎಲ್ಲಾ ಸದಸ್ಯರು ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದ ಅವರು ಇತ್ತೀಚೆಗೆ ನಡೆದ ಮಹಿಳಾ ಸಂಘದ ನೂತನ ಕಟ್ಟಡ ಉದ್ಘಾಟನೆ ಸಂದರ್ಭದಲ್ಲಿ ಪ್ರತ್ಯಕ್ಷವಾಗಿ, ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಹಾಗೂ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದಕ್ಕಾಗಿ ಧನ್ಯವಾದವನ್ನು ಅರ್ಪಿಸಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಇಶಾ ಫೌಂಡೇಶನ್‌ನ ಅಪೂರ್ವ ಮಾತನಾಡಿ, ಮಾನಸಿಕ ಒತ್ತಡಗಳ ನಿವಾರಣೆಗೆ ಯೋಗ, ದ್ಯಾನ, ಪ್ರಾಣಾಯಾಮ ಸಹಕಾರಿ ಎಂದು ಹೇಳಿದರು.
ಮಹಿಳೆಯರ ಬದುಕಿನಲ್ಲಿ ಬದಲಾವಣೆ ತರಬೇಕೆಂಬ ಉದ್ದೇಶದಿಂದ ಕಿನ್ನರಿ-ಕಿನ್ನರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಪ್ರತಿದಿನ ಯೋಗ, ಪ್ರಾಣಾಯಾಮ, ದ್ಯಾನ ಮಾಡುವುದರಿಂದ ಆರೋಗ್ಯ ಸುಧಾರಿಸುತ್ತದೆ ಎಂದು ಕಿವಿಮಾತು ಹೇಳಿದರು.
ಆಗಸ್ಟ್ ೨ ರಿಂದ ೬ ರ ವರೆಗೆ ರಾಮೇಶ್ವರ ನಗರದಲ್ಲಿರುವ ಸ್ವಚ್ಚ ಟ್ರಸ್ಟ್ನ ನಿರಂತರ ಭವನದಲ್ಲಿ ಇಶಾ ಫೌಂಡೇಶನ್ ವತಿಯಿಂದ ದ್ಯಾನ, ಪ್ರಾಣಾಯಾಮ ಯೋಗ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗವನ್ನು ಮಡೆದುಕೊಳ್ಳಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಎಐಟಿ ಯಲ್ಲಿ ಇಂಜಿನಿಯರ್ ಆಗಿರುವ ಕಿರಣ್, ಮಹಿಳಾ ಸಂಘದ ಉಪಾಧ್ಯಕ್ಷೆ ಕಾವ್ಯ ಸುಕುಮಾರ್, ಕಾರ್ಯದರ್ಶಿ ಅಮಿತಾ ವಿಜಯೇಂದ್ರ, ಸಹಕಾರ್ಯದರ್ಶಿ ಕೋಮಲಾ ರವಿ, ನಿರ್ದೇಶಕರಾದ ಶಕುಂತಲಾ ವೀರೇಗೌಡ, ಮಂಜುಳಾ ಹರೀಶ್, ವೇದ ಚಂದ್ರಶೇಖರ್ ಉಪಸ್ಥಿತರಿದ್ದರು.