ವಿದ್ಯುತ್ ಶಾಕ್‌ನಿಂದ ಮೀನು ಹಿಡಿಯಲು ತೆರಳಿದ್ದ ಯುವಕ ಸಾವು

ದಾರದಹಳ್ಳಿ ಗ್ರಾಮದ ಹೇಮಾವತಿ ನದಿಯಲ್ಲಿ ವಿದ್ಯುತ್ ತಗುಲಿ ಮೃತಪಟ್ಟ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಸಾರ್ವಜನಿಕರು ಪ್ರತಿಭಟನೆ ನಡೆಸಿದರು.
ದಾರದಹಳ್ಳಿ ಗ್ರಾಮದ ಹೇಮಾವತಿ ನದಿಯಲ್ಲಿ ವಿದ್ಯುತ್ ತಗುಲಿ ಮೃತಪಟ್ಟ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಸಾರ್ವಜನಿಕರು ಪ್ರತಿಭಟನೆ ನಡೆಸಿದರು.
Published on
ಮೂಡಿಗೆರೆ: ದಾರದಹಳ್ಳಿ ಗ್ರಾಮದ ಹೇಮಾವತಿ ನದಿಯಲ್ಲಿ ಶುಕ್ರವಾರ ಮೀನು ಹಿಡಿಯಲು ತೆರಳಿದ್ದ ಮೂಡಿಗೆರೆ ಪಟ್ಟಣ ನಿವಾಸಿ ಸಂತೋಷ್(30) ವಿದ್ಯುತ್ ತಗುಲಿ ಮೃತಪಟ್ಟಿದ್ದಾರೆ. ಇದರಿಂದ ಆಕ್ರೋಶಗೊಂಡ ಸಾರ್ವಜನಿಕರು ನದಿ ಸಮೀಪ ಪ್ರತಿಭಟನೆ ನಡೆಸಿದರು.
ಜೋಗಣ್ಣಕೆರೆ ಗ್ರಾಮದ ಸಚಿನ್ ಹಾಗೂ ನಗರದ ನಿವಾಸಿ ಸಂತೋಷ್(30) ತನ್ನ ಪತ್ನಿಯೊಂದಿಗೆ ಹೇಮಾವತಿ ನದಿಗೆ ತೆರಳಿದ್ದರು. ಪತ್ನಿ ಬಟ್ಟೆ ತೊಳೆಯುತ್ತಿದ್ದಾಗ, ನದಿಯಲ್ಲಿ ಮೀನು ಹಿಡಿಯುತ್ತಿದ್ದ ಸಂತೋಷ್‌ಗೆ ನದಿಯ ನೀರಿನಲ್ಲಿ ತೇಲುತ್ತಿದ್ದ ತಂತಿಯಿಂದ ವಿದ್ಯುತ್ ಪ್ರವಹಿಸಿ ಸ್ಥಳದ ಮೃತಪಟ್ಟಿದ್ದಾರೆ. ವಿಷಯ ತಿಳಿದ ಕೂಡಲೇ ಸ್ಥಳದಲ್ಲಿ ನೂರಾರು ಮಂದಿ ಜಮಾಹಿಸಿ ಮೆಸ್ಕಾಂ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿ ಮೃತ ವ್ಯಕ್ತಿ ಕುಟುಂಬಕ್ಕೆ ಸ್ಥಳದಲ್ಲೇ 10ಲಕ್ಷ ರೂ. ಪರಿಹಾರ ನೀಡಬೇಕು. ಅಲ್ಲಿವರೆಗೂ ಮೃತ ದೇಹ ತೆರವುಗೊಳಿಸುವುದಿಲ್ಲ ಎಂದು ಪಟ್ಟು ಹಿಡಿದು ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಭೇಟಿ ನೀಡಿದ ಮೆಸ್ಕಾಂ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತವಾಯಿತು.
ಸಂಜೆವರೆಗೂ ಮೃತ ದೇಹದ ಸಮೀಪ ಸಾರ್ವಜನಿಕರು ಪ್ರತಿಭಟನೆ ನಡೆಸಿದರು. ನಂತರ ಪೊಲೀಸರ ಮಧ್ಯಸ್ಥಿಕೆಯಲ್ಲಿ ಮೆಸ್ಕಾಂ ಅಧಿಕಾರಿಗಳು ಮಾತುಕತೆ ನಡೆಸಿ 7.50 ಲಕ್ಷ ರೂ. ಪರಿಹಾರ ನೀಡುವುದಾಗಿ ಮೆಸ್ಕಾಂ ಅಧಿಕಾರಿಗಳು ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು. ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಯಿತು.
ಮೃತ ಸಂತೋಷ್ ಪತ್ನಿ ಶಿಲ್ಪ ನೀಡಿದ ದೂರಿನವೆರೆಗೆ ಮೂಡಿಗೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಪಿಐ ಕೆ.ವಿ.ರಾಜಶೇಖರ್, ಮೂಡಿಗೆರೆ ಪಿಎಸ್‌ಐ ಹರ್ಷವರ್ಧನ್, ಗೋಣಿಬೀಡು ಪಿಎಸ್‌ಐ ಶ್ರೀನಾಥ್ ರೆಡ್ಡಿ , ಮೆಸ್ಕಾಂ ಅಧಿಕಾರಿಗಳಾದ ಜಿತೇಂದ್ರ ಕುಮಾರ್, ರವಿ ಕುಮಾರ್, ಷಣ್ಮುಖ, ಬಿಜೆಪಿ ಮುಖಂಡ ಪಂಚಾಕ್ಷರಿ, ತಾಪಂ ಮಾಜಿ ಸದಸ್ಯ ಸುಂದರ್ ಕುಮಾರ್, ಕಾಂಗ್ರೆಸ್ ಮುಖಂಡ ಮಯೂರ, ಜಿಲ್ಲಾ ಕೆಡಿಪಿ ಸದಸ್ಯ ಸುಧೀರ್ ಚಕ್ರಮಣಿ, ಜೆಡಿಎಸ್ ಮುಖಂಡ ಸಿದ್ದೇಶ್, ಹರೀಶ್ ಕೆಲ್ಲೂರು, ಕರಿಯಪ್ಪ, ಮಹಮ್ಮದ್ ಅಲಿ, ಅಬ್ದುಲ್ ರಜಾಕ್, ಉತ್ತಮ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net