ಅ. 11ರಿಂದ ಜಮಖಂಡಿಯಲ್ಲಿ ದಸರಾ ಧರ್ಮ ಸಮ್ಮೇಳನ

ದಸರಾ ಧರ್ಮ ಸಮ್ಮೇಳನ
ದಸರಾ ಧರ್ಮ ಸಮ್ಮೇಳನದ ಪೋಷಾಕಿನಲ್ಲಿ ರಂಭಾಪುರಿ ಶ್ರೀ.
ದಸರಾ ಧರ್ಮ ಸಮ್ಮೇಳನದ ಪೋಷಾಕಿನಲ್ಲಿ ರಂಭಾಪುರಿ ಶ್ರೀ.
Published on: 

ಬಾಳೆಹೊನ್ನೂರು: ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕು ಕೇಂದ್ರದಲ್ಲಿ ಅ.11ರಿಂದ 21ರವರೆಗೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳವರ 35ನೇ ವರ್ಷದ ಶರನ್ನವರಾತ್ರಿ ದಸರಾ ಧರ್ಮ ಸಮ್ಮೇಳನ ನಡೆಯಲಿದೆ ಎಂದು ಶ್ರೀಪೀಠದ ವಾರ್ತಾ ಸಂಯೋಜನಾಧಿಕಾರಿ ಸಿ.ಎಚ್.ಬಾಳನಗೌಡ ತಿಳಿಸಿದ್ದಾರೆ.

ಜಮಖಂಡಿಯ ಕಡಪಟ್ಟಿ ಶ್ರೀ ಬಸವಣ್ಣ ದೇವಸ್ಥಾನದ ಆವರಣದಲ್ಲಿ ನಿರ್ಮಿಸಲಾಗಿರುವ ಮಾನವ ಧರ್ಮ ಮಂಟಪದಲ್ಲಿ ಪ್ರತಿ ನಿತ್ಯದ ಕಾರ್ಯಕ್ರಮಗಳು ಶ್ರೀ ರಂಭಾಪುರಿ ಜಗದ್ಗುರುಗಳ ಸಾನ್ನಿಧ್ಯದಲ್ಲಿ ನಡೆಯುತ್ತದೆ. ಅ.11ರಂದು ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಂಸದ ಗೋವಿಂದ ಎಂ.ಕಾರಜೋಳ, ಮಾಜಿ ಸಚಿವ ಮುರುಗೇಶ ನಿರಾಣಿ ಭಾಗವಹಿಸುವರು.

12ರಂದು ಸಂಸದ ಬಸವರಾಜ ಬೊಮ್ಮಾಯಿ ಶ್ರೀ ರಂಭಾಪುರಿ ಶಿವಾನಂದ ಜಗದ್ಗುರುಗಳವರ ಜೀವನ ದರ್ಶನ ಕೃತಿ ಬಿಡುಗಡೆ ಮಾಡುವರು. ಇನ್ನುಳಿದಂತೆ ದಸರಾ ಧರ್ಮ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಡಾ. ಶರಣಪ್ರಕಾಶ ಪಾಟೀಲ, ಎಸ್.ಎಸ್.ಮಲ್ಲಿಕಾರ್ಜುನ, ಲಕ್ಷ್ಮಣ ಸವದಿ, ಅಜಯ್ ಧರ್ಮಸಿಂಗ್, ರುದ್ರಪ್ಪ ಲಮಾಣಿ, ಈಶ್ವರ ಖಂಡ್ರೆ, ವಿಜಯಾನಂದ ಕಾಶಪ್ಪನವರ, ಸಂಸದ ಜಗದೀಶ ಶೆಟ್ಟರ್, ವಿಆರ್‌ಎಲ್ ಸಂಸ್ಥೆ ಚೇರ್ಮನ್ ವಿಜಯ ಸಂಕೇಶ್ವರ, ವಿಧಾನಸಭಾಧ್ಯಕ್ಷ ಜಿ.ಎಸ್.ಪಾಟೀಲ, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ, ಸೇರಿದಂತೆ ಸಂಸದರು, ವಿಧಾನ ಪರಿಷತ್ ಸದಸ್ಯರು, ಶಾಸಕರು, ಮಾಜಿ ಸಚಿವರು, ಗಣ್ಯರು ಭಾಗವಹಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net