ಅಂಗನವಾಡಿ ಕಾರ್ಯಕರ್ತೆಯರ ನೇಮಕ ಪಾರದರ್ಶಕ (Anganwadi )

ಅಂಗನವಾಡಿ ಕಾರ್ಯಕರ್ತೆ
ಕಡೂರು ತಾಪಂ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ಆಯೋಜಿಸಿದ್ದ ಸಮಾರಂಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಶಾಸಕ ಕೆ.ಎಸ್.ಆನಂದ್ ಆದೇಶಪತ್ರ ವಿತರಿಸಿದರು. ಕೃಷ್ಣಪ್ಪ, ಸಿ.ಆರ್.ಪ್ರವೀಣ್, ದೇವರಾಜ್, ಆಸಂಧಿ ಕಲ್ಲೇಶ್ ಮತ್ತಿತರಿದ್ದರು.
ಕಡೂರು ತಾಪಂ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ಆಯೋಜಿಸಿದ್ದ ಸಮಾರಂಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಶಾಸಕ ಕೆ.ಎಸ್.ಆನಂದ್ ಆದೇಶಪತ್ರ ವಿತರಿಸಿದರು. ಕೃಷ್ಣಪ್ಪ, ಸಿ.ಆರ್.ಪ್ರವೀಣ್, ದೇವರಾಜ್, ಆಸಂಧಿ ಕಲ್ಲೇಶ್ ಮತ್ತಿತರಿದ್ದರು.
Published on: 

ಕಡೂರು: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ನೇಮಕಾತಿಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸಲಾಗಿದೆ. ಯಾವುದೇ ಆಸೆ, ಆಮಿಷ ಅಥವಾ ಅಧಿಕಾರ ದುರುಪಯೋಗಕ್ಕೆ ಅವಕಾಶ ನೀಡದೆ, ಗರಿಷ್ಠ ಅಂಕ ಗಳಿಸಿದ ಅರ್ಹ ಅಭ್ಯರ್ಥಿಗಳನ್ನು ಮಾತ್ರ ಆಯ್ಕೆ ಮಾಡಲಾಗಿದೆ ಎಂದು ಶಾಸಕ ಕೆ.ಎಸ್.ಆನಂದ್ ತಿಳಿಸಿದರು.

ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ಆಯೋಜಿಸಿದ್ದ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಆದೇಶಪತ್ರಗಳನ್ನು ವಿತರಿಸಿ ಮಾತನಾಡಿದರು.

ಸಮೂಹದಲ್ಲಿ ಜನರಿಗೆ ಅತಿ ಸುಲಭವಾಗಿ ಸಿಗುವ ಮತ್ತು ಅತ್ಯಂತ ಹತ್ತಿರದಿಂದ ಸ್ಪಂದಿಸುವ ಸರ್ಕಾರಿ ಪ್ರತಿನಿಧಿಗಳೆಂದರೆ ಅಂಗನವಾಡಿ ಕಾರ್ಯಕರ್ತೆಯರು. ಸರ್ಕಾರದ ಎಲ್ಲ ಯೋಜನೆಗಳನ್ನು ಪ್ರತಿಯೊಂದು ಮನೆಗೆ ತಲುಪಿಸುವಲ್ಲಿ ಅವರ ಪಾತ್ರ ಮಹತ್ತರವಾದದ್ದು ಎಂದರು.

ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಆಸಂಧಿ ಕಲ್ಲೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೃಷ್ಣಪ್ಪ, ತಹಸೀಲ್ದಾರ್ ಸಿ.ಎಸ್.ಪೂರ್ಣಿಮಾ, ತಾಪಂ ಇಒ ಸಿ.ಆರ್.ಪ್ರವೀಣ್, ಸಿಡಿಪಿಒ ದೇವರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕರು ಹಾಗೂ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net