ಮಕ್ಕಳ ಉಜ್ವಲ ಭವಿಷ್ಯ ರೂಪಿಸಲು ಪಣ ತೊಡಬೇಕು Parents must resolve to shape

ಮೂಡಿಗೆರೆಯಲ್ಲಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಸುವರ್ಣಮಹೋತ್ಸವ ಕಾರ್ಯಕ್ರಮವನ್ನು ಶಾಸಕಿ ನಯನಾ ಮೋಟಮ್ಮ ಉದ್ಘಾಟಿಸಿದರು. ಸಂಸದ ಕೋಟ ಶ್ರೀನಿವಾಸ ಪೂಜಾರಿ, ಎಂ.ಕೆ.ಪ್ರಾಣೇಶ್, ಸತ್ಯಜಿತ್ ಸುರತ್ಕಲ್, ಆರ್.ಪದ್ಮರಾಜ್, ವೇದಕುಮಾರ, ಮನೋಜ್‌ಕುಮಾರ್ ಇತರರಿದ್ದರು.
ಮೂಡಿಗೆರೆಯಲ್ಲಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಸುವರ್ಣಮಹೋತ್ಸವ ಕಾರ್ಯಕ್ರಮವನ್ನು ಶಾಸಕಿ ನಯನಾ ಮೋಟಮ್ಮ ಉದ್ಘಾಟಿಸಿದರು. ಸಂಸದ ಕೋಟ ಶ್ರೀನಿವಾಸ ಪೂಜಾರಿ, ಎಂ.ಕೆ.ಪ್ರಾಣೇಶ್, ಸತ್ಯಜಿತ್ ಸುರತ್ಕಲ್, ಆರ್.ಪದ್ಮರಾಜ್, ವೇದಕುಮಾರ, ಮನೋಜ್‌ಕುಮಾರ್ ಇತರರಿದ್ದರು.
Published on: 

ಮೂಡಿಗೆರೆ: ಬ್ರಹ್ಮಶ್ರೀ ನಾರಾಯಣ ಗುರುಗಳ ಸಮಾಜದವರು ಇನ್ನಷ್ಟು ಶಕ್ತಿಶಾಲಿಯಾಗಿ ಸಂಘಟಿತರಾಗುವ ಜತೆಗೆ ಮುಂದಿನ 50 ವರ್ಷದಲ್ಲಿ ಈ ಸಮಾಜ ಉನ್ನತ ಮಟ್ಟದಲ್ಲಿ ಅಭಿವೃದ್ಧಿಯಾಗಬೇಕೆಂಬ ಕನಸಿಟ್ಟುಕೊಳ್ಳಬೇಕು ಎಂದು ಶಾಸಕಿ ನಯನಾ ಮೋಟಮ್ಮ ಹೇಳಿದರು.

ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು. ಕ್ಷೇತ್ರದ ಅಭಿವೃದ್ಧಿಗೆ ಹಿನ್ನಡೆಯಾಗಬಾರದೆಂಬ ಕಾರಣಕ್ಕೆ ನಾನು ಶಾಸಕಿಯಾಗಿ ಕೆಲವೊಂದು ಕಟಿಬದ್ಧವಾಗಿ ಕೆಲಸ ಮಾಡುತ್ತಿದ್ದೇನೆ. ಇದರಿಂದ ಎಷ್ಟೇ ಟೀಕೆಗಳು ಬಂದರೂ ಅದನ್ನು ಸ್ವೀಕಾರ ಮಾಡಿಕೊಂಡು ಎಲ್ಲ ಜನಾಂಗದ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುವ ಜತೆಗೆ ಮಾದರಿ ಕ್ಷೇತ್ರವನ್ನಾಗಿ ಮಾಡಲು ಶ್ರಮಿಸುತ್ತಿದ್ದೇನೆ. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವುದು ಮಾತ್ರವಲ್ಲ. ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸುವಂತಾಗಬೇಕು. ಪಾಲಕರು ಮಕ್ಕಳಿಗೆ ಉನ್ನತ ಶಿಕ್ಷಣ ನೀಡುವ ಮೂಲಕ ಐಎಎಸ್, ಕೆಎಎಸ್, ವೈದ್ಯರು ಹಾಗೂ ಉದ್ಯಮಿಗಳನ್ನಾಗಿ ಮಾಡಲು ಶ್ರಮಿಸಬೇಕೆಂದು ತಿಳಿಸಿದರು.

ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಸಮಾಜ ಕಟ್ಟುವಂತಹ ಉನ್ನತ ಮಟ್ಟದಲ್ಲಿ ನಮ್ಮ ಸಮಾಜದ ಜನರು ಬೆಳೆದು ನಿಂತಿರುವುದು ಶ್ಲಾಘನೀಯ. ನಮ್ಮ ಸಮಾಜ ಸಾಮಾಜಿಕವಾಗಿ ಸ್ವಾವಲಂಬಿಯಾಗಿ ನಿಲ್ಲುವಂಥ ಶಕ್ತಿ ಪಡೆದುಕೊಂಡಿದೆ. ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ, ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ, ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಸೇರಿದಂತೆ ಅನೇಕರು ಉನ್ನತ ಹುದ್ದೆ ಅಲಂಕರಿಸಿ ಸಮುದಾಯಕ್ಕೆ ಗೌರವ ತಂದುಕೊಟ್ಟಿದ್ದಾರೆ. ಬ್ರಹ್ಮಶ್ರೀ ನಾರಾಯಣಗುರು ಸಮಾಜದವರು ಸಮಾಜದಲ್ಲಿ ಎಲ್ಲ ರೀತಿಯ ಉನ್ನತ ಹುದ್ದೆಯನ್ನು ಅಲಂಕರಿಸಿದ್ದಾರೆ. ಇದೇ ರೀತಿಯಲ್ಲಿ ಪ್ರತಿ ಕುಟುಂಬದ ಸದಸ್ಯರೂ ಉನ್ನತ ಮಟ್ಟದಲ್ಲಿ ಬೆಳೆಯಬೇಕು. ಸರ್ವ ಜನಾಂಗದ ಅಭಿವೃದ್ಧಿಗಾಗಿ ಶ್ರಮಿಸಿದ ಬ್ರಹ್ಮಶ್ರೀ ನಾರಾಯಣಗುರು ಅವರ ಆದರ್ಶವನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಮಾಜಿ ಉಪಸಭಾಪತಿ ಎಂ.ಕೆ.ಪ್ರಾಣೇಶ್ ಮಾತನಾಡಿ, ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ ಸುವರ್ಣ ಮಹೋತ್ಸವ ಆಚರಿಸುವ ಮಟ್ಟಕ್ಕೆ ಬೆಳೆದಿದೆ ಎಂದರೆ ಹಿರಿಯರ ಶ್ರಮ ತಿಳಿದುಕೊಳ್ಳಬೇಕಾಗಿದೆ. ಮುಂದೆ ಈ ಸಮಾಜವನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲು ಹಾಗೂ ಅಭಿವೃದ್ಧಿಗೊಳಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು. ಆಧುನಿಕ ತಂತ್ರಜ್ಞಾನ ಯುಗದಲ್ಲಿ ಮಕ್ಕಳು ಮೊಬೈಲ್‌ಗಳಿಗೆ ಮಾರುಹೋಗುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಿ ಮಕ್ಕಳ ಉಜ್ವಲ ಭವಿಷ್ಯ ರೂಪಿಸಿಕೊಳ್ಳುವ ಕಾರ್ಯವನ್ನು ಪಾಲಕರು ಮಾಡಬೇಕು ಎಂದು ಹೇಳಿದರು.

ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಗಂಗನಮಕ್ಕಿ ಬಡಾವಣೆಯಲ್ಲಿ ಸಂಘದ ನೂತನ ಕಟ್ಟಡ ಉದ್ಘಾಟಿಸಿದರು. ಪಟ್ಟಣದ ಪ್ರವಾಸಿ ಮಂದಿರದಿಂದ ಗಂಗನಮಕ್ಕಿವರೆಗೆ ವಿವಿಧ ಕಲಾ ತಂಡಗಳೊಂದಿಗೆ ಮೆರವಣಿಗೆ ನಡೆಸಲಾಯಿತು.

ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್, ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದ ಕೋಶಾಧಿಕಾರಿ ಆರ್.ಪದ್ಮರಾಜ್, ಬಿಲ್ಲವರ ಅಸೋಸಿಯೇಶನ್ ಅಧ್ಯಕ್ಷ ವೇದಕುಮಾರ್, ಮನೋಜ್‌ಕುಮಾರ್, ಸುಷ್ಮಾ ವಿಭಾ, ಸುರೇಶ್ ಪೂಜಾರಿ, ಸುಪ್ರಿಯಾ, ದಯಾನಂದ್, ಯೋಗೇಶ್ ಪೂಜಾರಿ, ಸದಾನಂದ ಪೂಜಾರಿ, ಎಚ್.ಎಂ.ಸತೀಶ್, ದೀಪಕ್ ದೊಡ್ಡಯ್ಯ, ಪೃಥ್ವಿ ಸಾಗರ್, ಕೇಶವ ಸುವರ್ಣ, ಎಂ.ಜಿ.ನಾಗರತ್ನಾ, ಗಂಗಮ್ಮ, ಗಣೇಶ್ ಪೂಜಾರಿ, ಲಕ್ಷ್ಮಣ್ ಪೂಜಾರಿ, ಸುಂದರ್ ಪೂಜಾರಿ, ಭರತ್ ಪೂಜಾರಿ, ಯಶೋದಾ ರತ್ನಾಕರ, ರೂಪಾ ಅಶೋಕ್, ರೇವತಿ ನೀಲಯ್ಯ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net