ಯಾವುದೇ ಸರ್ಕಾರವಿದ್ದರೂ ಶಿಕ್ಷಣಕ್ಕೆ ಒತ್ತು: ಶಾಸಕ ರವಿಕುಮಾರ್ ಗಣಿಗ ಹೇಳಿಕೆ

Chikkamandya School Anniversary mandya
Published on

ಮಂಡ್ಯ: ಎಲ್ಲ ಮಕ್ಕಳು ವಿದ್ಯಾವಂತರಾಗಬೇಕೆಂಬ ದೃಷ್ಟಿಯನ್ನಿಟ್ಟುಕೊಂಡು ಯಾವುದೇ ಸರ್ಕಾರ ಬಂದರೂ ಶಿಕ್ಷಣಕ್ಕೆ ಹೆಚ್ಚು ಹೊತ್ತು ನೀಡುತ್ತಾ ಬಂದಿವೆ ಎಂದು ಶಾಸಕ ರವಿಕುಮಾರ್ ಗಣಿಗ ಅಭಿಪ್ರಾಯಿಸಿದರು.

ತಾಲೂಕಿನ ಚಿಕ್ಕಮಂಡ್ಯ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ವಾರ್ಷಿಕೋತ್ಸವದಲ್ಲಿ ಮಾತನಾಡಿದ ಅವರು, ಮಕ್ಕಳು ಚೆನ್ನಾಗಿ ವಿದ್ಯಾಭ್ಯಾಸ ಮಾಡಿ ಪಾಲಕರಿಗೆ ಒಳ್ಳೆಯ ಹೆಸರು ತರಬೇಕು. ಸರ್ಕಾರಿ ಶಾಲೆಯಲ್ಲಿ ಓದಿ ಉನ್ನತ ಹುದ್ದೆ ಸೇರಿದ್ದಾರೆ. ಸರ್ಕಾರ ಉಚಿತವಾಗಿ ಶಿಕ್ಷಣ ನೀಡುತ್ತಿರುವುದು ವಿದ್ಯಾವಂತರಾಗಿ ಇಡೀ ದೇಶಕ್ಕೆ ಉತ್ತಮ ಪ್ರಜೆಯಾಗಲಿ ಎಂಬ ಆಶಯವಾಗಿದೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಮಹಾದೇವ ಮಾತನಾಡಿ, ಸರ್ಕಾರ ಕೋಟ್ಯಂತರ ರೂಗಳನ್ನು ಮಕ್ಕಳ ವಿದ್ಯಾಭ್ಯಾಸಕ್ಕೆ ಖರ್ಚು ಮಾಡುತ್ತಿದೆ. 32ಕ್ಕೂ ಹೆಚ್ಚು ಪ್ರೋತ್ಸಾಹದಾಯಕ ಯೋಜನೆಗಳನ್ನು ನೀಡುತ್ತಿದೆ. ಬಿಸಿಯೂಟ, ಕಬ್ಬಿನಾಂಶದ ಮಾತ್ರೆಯ ಹಾಲು, ರಾಗಿ, ಮಾಲ್ಟ್, ಪಠ್ಯ ಪುಸ್ತಕ, ಬೈಸಿಕಲ್, ವಿದ್ಯಾರ್ಥಿ ವೇತನ ಸೇರಿದಂತೆ ಹಲವು ಯೋಜನೆಗಳನ್ನು ನೀಡುತ್ತಾ ಬಂದಿದೆ. ಒಬ್ಬ ವಿದ್ಯಾರ್ಥಿಗೆ ಸರ್ಕಾರ ಎಂಟರಿಂದ ಹತ್ತು ಸಾವಿರ ರೂವರೆಗೆ ಖರ್ಚು ಮಾಡುತ್ತಿದೆ. ಇದನ್ನು ಬಳಸಿಕೊಂಡು ಸಾಧನೆ ಮಾಡಬೇಕು ಎಂದು ಸಲಹೆ ನೀಡಿದರು.

ಡಯಟ್ ಪ್ರಾಂಶುಪಾಲ ಪುರುಷೋತ್ತಮ್, ಬಿಇಒ ಚಂದ್ರಕಲಾ, ಅಕ್ಷರ ದಾಸೋಹದ ಅಧಿಕಾರಿ ಗಿರೀಶ್, ಎಸ್‌ಡಿಎಂಸಿ ಅಧ್ಯಕ್ಷೆ ಲಕ್ಷ್ಮೀ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಂಭುಗೌಡ, ಮುಖ್ಯಶಿಕ್ಷಕ ದೇವರಾಜು ಇತರರಿದ್ದರು.

ಇದೇ ವೇಳೆ ವಿದ್ಯಾರ್ಥಿಗಳು ಸಾಂಸ್ಕೃತಿಕ ನೃತ್ಯ ಪ್ರದರ್ಶನ ನೀಡಿದರು. ಕ್ರೀಡೆಯಲ್ಲಿ ವಿಜೇತರಾದರಿಗೆ ಗಣ್ಯರು ಬಹುಮಾನ ವಿತರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net