ಅತ್ಯಾಚಾರಿಗಳನ್ನು ಗಲ್ಲಿಗೇರಿಸಲು ಆಗ್ರಹ

web 5
Published on

ಚಿಕ್ಕಮಗಳೂರು : ಉತ್ತರ ಪ್ರದೇಶದಲ್ಲಿ ಅಂಗನವಾಡಿ ಸಹಾಯಕಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವವರನ್ನು ಗಲ್ಲಿಗೇರಿಸುವಂತೆ ಒತ್ತಾಯಿಸಿ ಬಿಎಸ್​ಪಿ ಜಿಲ್ಲಾ ಸಹೋದರತ್ವ ಸಮಿತಿ ಕಾರ್ಯಕರ್ತರು ಗುರುವಾರ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

ಅಂಗನವಾಡಿ ಸಹಾಯಕಿ ಮೇಲೆ ನಡೆದಿರುವ ಸಾಮೂಹಿಕ ಅತ್ಯಾಚಾರ ಮತ್ತು ಬರ್ಬರ ಹತ್ಯೆ ದೇಶದ ಜನತೆಯನ್ನು ಬೆಚ್ಚಿ ಬೀಳಿಸಿದೆ. ಉತ್ತರ ಪ್ರದೇಶದಲ್ಲಿ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳು ನಿರಂತರವಾಗಿ ನಡೆಯುತ್ತಿರುವುದಕ್ಕೆ ಅಲ್ಲಿನ ಸರ್ಕಾರ ನಿಷ್ಕ್ರಿಯವಾಗಿರುವುದೇ ಕಾರಣ ಎಂದು ಆರೋಪಿಸಿದರು.

ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗದಿರುವುದರಿಂದ ಇಂಥ ಪ್ರಕರಣಗಳು ಹೆಚ್ಚುತ್ತಿವೆ. ಅಂಗನವಾಡಿ ಸಹಾಯಕಿಯನ್ನು ಹತ್ಯೆಗೈದಿರುವ ದೇವಾಲಯದ ಅರ್ಚಕ ಮತ್ತು ಆತನ ಸಹಚರರನ್ನು ಗಲ್ಲಿಗೇರಿಸಬೇಕು. ಉತ್ತರಪ್ರದೇಶ ಸರ್ಕಾರವನ್ನು ತಕ್ಷಣ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net