ಕುಂದಾಪುರ: ತಾನು ದಿನಪತ್ರಿಕೆಯೊಂದರ ವರದಿಗಾರನೆಂದು ಹೇಳಿಕೊಂಡು ಬಾಲಕರನ್ನು ಪುಸಲಾಯಿಸಿ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಚಂದ್ರ ಕೆ. ಹೆಮ್ಮಾಡಿ ಎಂಬಾತ ಅಪರಾಧಿ ಎಂದು ಪ್ರಕರಣದ ವಿಚಾರಣೆ ನಡೆಸಿದ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಯಾದವ್ ವನಮಾಲಾ ಆನಂದರಾವ್ ತೀರ್ಪು ಪ್ರಕಟಿಸಿದ್ದಾರೆ. ಈತನ ವಿರುದ್ಧ ಒಟ್ಟು 21 ಪೋಕ್ಸೊ ಪ್ರಕರಣ ದಾಖಲಾಗಿದ್ದು, ಒಂದು ಪ್ರಕರಣ ವಿಚಾರಣೆ ಪೂರ್ಣಗೊಂಡಿದ್ದು, 10 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಲಾಗಿದೆ.