ವೃದ್ಧನಿಂದ ಬಾಲಕಿಗೆ ಲೈಂಗಿಕ ಕಿರುಕುಳ

child rape
Published on

ಕಾಸರಗೋಡು: ಅಸೌಖ್ಯ ಪೀಡಿತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಪೆರ್ಲ ಇಡಿಯಡ್ಕ ನಿವಾಸಿ ಆಲಿಕುಞಿ(62) ಎಂಬಾತನ ವಿರುದ್ಧ ಬದಿಯಡ್ಕ ಠಾಣೆ ಪೊಲೀಸರು ಪೋಕ್ಸೋ ಅನ್ವಯ ಕೇಸು ದಾಖಲಿಸಿಕೊಂಡಿದ್ದಾರೆ.

ಬದಿಯಡ್ಕ ಪೊಲೀಸ್ ಠಾಣೆ ವ್ಯಾಪ್ತಿಯ ಕ್ವಾರ್ಟಸ್ ಒಂದರಲ್ಲಿ ವಾಸಿಸುತ್ತಿರುವ 15ರ ಹರೆಯದ ಬಾಲಕಿಗೆ ಈತ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಲಭಿಸಿದ ದೂರಿನನ್ವಯ ಈ ಕೇಸು ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net