ಶಿಶು ಮರಣ ತಡೆಯಲು ಜಾಗೃತಿ ಅಗತ್ಯ

Child death
Published on

ಮಡಿಕೇರಿ:

ಶಿಶು ಮರಣ ತಡೆಯಲು ಹೆಚ್ಚಿನ ಜಾಗೃತಿ ಮೂಡಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆರೋಗ್ಯ ಇಲಾಖೆಗೆ ಸಂಬAಧಿಸಿದAತೆ ಶಿಶು ಮತ್ತು ತಾಯಿ ಮರಣ ನಿಯಂತ್ರಣ ಸಂಬAಧ ಗುರುವಾರ ನಡೆದ ಸಭೆಯಲ್ಲಿ ಮಾತನಾಡಿದರು.

ಶಿಶು ಮತ್ತು ತಾಯಿ ಆರೋಗ್ಯದ ಬಗ್ಗೆ ಪ್ರತಿಯೊಬ್ಬರಲ್ಲೂ ಅರಿವು ಇರಬೇಕು. ಉತ್ತಮ ಆರೋಗ್ಯವಿದ್ದಲ್ಲಿ ಕುಟುಂಬ ನಿರ್ವಹಣೆ ಚೆನ್ನಾಗಿರುತ್ತದೆ. ಇದರಿಂದ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಲಿದೆ. ಜಿಲ್ಲೆಯ ಹಾಡಿಗಳು ಸೇರಿದಂತೆ ಎಲ್ಲೆಡೆ ಆರೋಗ್ಯ ಮತ್ತು ಶುಚಿತ್ವ ಬಗ್ಗೆ ಜಾಗೃತಿ ಮೂಡಿಸಬೇಕು. 5 ವರ್ಷದೊಳಗಿನ ಮಕ್ಕಳಿಗೆ ಕಾಲಕಾಲಕ್ಕೆ ಚುಚ್ಚುಮದ್ದು ಕೊಡಿಸುವಂತಾಗಲು ಅರಿವು ಮೂಡಿಸಬೇಕು. ಹಾಗೆಯೇ ಗರ್ಭಿಣಿಯರು ಸಹ ಕಾಲ ಕಾಲಕ್ಕೆ ಆರೋಗ್ಯ ಪರಿಶೀಲಿಸಿಕೊಳ್ಳಬೇಕು ಎಂದರು.

ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಮಧುಸೂದನ್ ಮಾತನಾಡಿ ಜಿಲ್ಲೆಯಲ್ಲಿ ಕಳೆದ ಜುಲೈನಿಂದಅಕ್ಟೋಬರ್ ಅಂತ್ಯದವರೆಗೆ 5 ವರ್ಷದೊಳಗಿನ 15 ಶಿಶುಗಳು ವಿವಿಧ ಕಾರಣಗಳಿಂದ ಸಾವನ್ನಪ್ಪಿವೆ. ಈ 15 ಶಿಶುಗಳಲ್ಲಿ 7 ಪ್ರಕರಣಗಳು ಅವಧಿ ಪೂರ್ವ ಜನನ, ಅನುವಂಶೀಯ ಕಾರಣಗಳು ಹಾಗೂ ಜನನ ಸಂದರ್ಭದಲ್ಲಿ ರಕ್ತಸ್ರಾವ ಸಂಭವಿಸಿದ ಉಸಿರಾಟದ ತೊಂದರೆಯಿAದ ಸಾವು. ಉಳಿದಂತೆ ನಾಟಿ ಔಷಧಿ ಕುಡಿಸಿ, ಜ್ವರ, ಶೀತ, ಕೆಮ್ಮು ಬಂದು ಮಕ್ಕಳ ಸಾವು ಸಂಭವಿಸಿದೆ. ಗರ್ಭಿಣಿಯರು ಕಾಲ ಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳದಿರುವುದು ಹೀಗೆ ಹಲವು ಕಾರಣಗಳಿಂದ ಸಾವು ಸಂಭವಿಸಿದೆ. ಜಿಲ್ಲೆಯಲ್ಲಿ ಶೇ.87 ಕ್ಕೂ ಹೆಚ್ಚು ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಆಗುತ್ತಿದೆ ಎಂದು ಮಾಹಿತಿ ನೀಡಿದರು.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಶ್ರೀನಿವಾಸ್ ಮಾತನಾಡಿ ಜಿಲ್ಲಾ ಸರ್ವೇಕ್ಷಣಾ ಘಟಕದಿಂದ ಆರೋಗ್ಯ ಮತ್ತು ಪರಿಸರ ಶುಚಿತ್ವದ ಬಗ್ಗೆ ಹೆಚ್ಚಿನ ಅರಿವು ಮೂಡಿಸಲಾಗುತ್ತಿದೆ. ಜಿಲ್ಲೆಯಲ್ಲಿ ಜನವರಿಯಿಂದ ಇದುವರೆಗೆ ನಾಯಿ ಕಡಿತ ಪ್ರಕರಣಗಳು 4,356, ಹಾವು ಕಡಿತ ಪ್ರಕರಣಗಳು 297, ಅತಿಸಾರ ಬೇಧಿ 2,427 ಪ್ರಕರಣಗಳು, ಡೆಂಗ್ಯೂ 272, ಇಲಿಜ್ವರ 13, ಕಾಲರಾ ಮತ್ತು ಮಲೇರಿಯಾ ತಲಾ 3 ಪ್ರಕರಣಗಳು ವರದಿಯಾಗಿದ್ದು, ಎಲ್ಲರೂ ಸಹ ಗುಣಮುಖರಾಗಿದ್ದಾರೆ. ನಾಯಿ ಮತ್ತು ಹಾವು ಕಡಿತಕ್ಕೆ ಎಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಔಷಧಿ ದಾಸ್ತಾನು ಇದೆ. ಯಾವುದೇ ಪ್ರಾಣಿ ಕಚ್ಚಿದರೂ ಸಹ ಉದಾಸೀನ ಮಾಡದೆ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುವಂತಾಗಬೇಕು ಎಂದು ಸಲಹೆ ಮಾಡಿದರು.

ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಅವರು ಮಾಹಿತಿ ನೀಡಿ ಜಿಲೆಯಲ್ಲಿ ಜನವರಿಯಿಂದ ಇದುವರೆಗೆ 371 ಕ್ಷಯರೋಗ ಪ್ರಕರಣಗಳು ವರದಿಯಾಗಿದ್ದು, ಕಾಲ ಕಾಲಕ್ಕೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು. ಜಿಲ್ಲಾ ಸರ್ಜನ್ ಡಾ. ನಂಜುAಡಯ್ಯ, ತಾಲೂಕು ವೈದ್ಯಾಧಿಕಾರಿ ಡಾ.ಯತಿರಾಜು, ಡಾ.ಚೇತನ್, ಸ್ತಿçà ಆರೋಗ್ಯ ತಜ್ಞ ಡಾ.ಸೋಮಶೇಖರ್, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ.ರಂಗಧಾಮಪ್ಪ, ಪಶುಪಾಲನ ಇಲಾಖೆ ಉಪ ನಿರ್ದೇಶಕ ಲಿಂಗರಾಜು ದೊಡ್ಡಮನಿ, ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಗಾಯತ್ರಿ, ಆಹಾರ ಸುರಕ್ಷತೆ ವಿಭಾಗದ ಮಂಜುನಾಥ್, ಜಿ.ಪಂ.ಇಇ ನಾಯಕ್, ವಿವಿಧ ಇಲಾಖಾ ಅಧಿಕಾರಿಗಳು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net