

ಹುಬ್ಬಳ್ಳಿ: ಮಹಾನಗರ ಪಾಲಿಕೆ ಆಟೋ ಟಿಪ್ಪರ್ ಅಪಘಾತದಲ್ಲಿ ಬಾಲಕಿ ಮೃತಪಟ್ಟ ಘಟನೆ ಇಲ್ಲಿಯ ಸೋನಿಯಾಗಾಂಧಿನಗರದಲ್ಲಿ ಸೋಮವಾರ ಸಂಭವಿಸಿದೆ. ಹಮೀದಾಬಾನು ಕಬಾಡೆ ಮೃತ ಬಾಲಕಿ. ರಸ್ತೆಯಲ್ಲಿ ಹೋಗುತ್ತಿದ್ದ ಮಗುವಿಗೆ ಪಾಲಿಕೆಯ ಕಸದ ಟಿಪ್ಪರ್ ಡಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ. ಗಂಭೀರವಾಗಿ ಗಾಯಗೊಂಡ ಮಗು ಸ್ಥಳದಲ್ಲಿಯೇ ಮೃತಪಟ್ಟಿದೆ. ದಕ್ಷಿಣ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ. ಮಗು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.