ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಪರಿಣಾಮಕಾರಿ ಕ್ರಮ ವಹಿಸಿ

9 Dwd 5
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ತಹಸೀಲ್ದಾರ್ ಅಧ್ಯಕ್ಷತೆಯಲ್ಲಿ ಪ್ರತಿ 3 ತಿಂಗಳಿಗೊಮ್ಮೆ ಕಡ್ಡಾಯವಾಗಿ ತಾಲೂಕು ಟಾಸ್ಕ್ ಫೋರ್ಸ್

ಸಮಿತಿಗಳ ಸಭೆಗಳು ಜರುಗಬೇಕು ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಅಧ್ಯಕ್ಷೆ ಹಾಗೂ ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.

ತಮ್ಮ ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘದ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಾರ್ಮಿಕ ಇಲಾಖೆ ಹಾಗೂ ತಾಲೂಕು ಟಾಸ್ಕ್ ಫೋರ್ಸ್ ಸಮಿತಿಗಳ ಬಾಲ ಹಾಗೂ ಕಿಶೋರ ಕಾರ್ಮಿಕರ ರಕ್ಷಣೆ ಹಾಗೂ ಪುನರ್ವಸತಿ ಕಾರ್ಯ ತೃಪ್ತಿಕರವಾಗಿಲ್ಲ. ಬಾಲ ಕಾರ್ಮಿಕರು ಇರಬಹುದಾದ ಕೈಗಾರಿಕೆ, ಇಟ್ಟಿಗೆ ಭಟ್ಟಿ, ಹೋಟೆಲ್, ಗ್ಯಾರೇಜ್‌ಗಳಲ್ಲಿ ಅನಿರೀಕ್ಷಿತ ಭೇಟಿ, ದಾಳಿ ಹೆಚ್ಚಾಗಬೇಕು. ದುಡಿಸಿಕೊಳ್ಳುವ ಮಾಲೀಕರು ಮತ್ತು ಕೆಲಸಕ್ಕೆ ಕಳುಹಿಸುವ ಪಾಲಕರ ಮೇಲೂ ಕ್ರಮ ಜರುಗಿಸಬೇಕು. ಮಕ್ಕಳು ಶಾಲೆಗಳಿಗೆ ಗೈರಾಗುತ್ತಿರುವುದು ಬಾಲಕಾರ್ಮಿಕರ ಸಂಖ್ಯೆ ಹೆಚ್ಚಳಕ್ಕೆ ಕಾರಣ. ಕಾರ್ಮಿಕ ಇಲಾಖೆ ಅಧಿಕಾರಿಗಳು ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಗೈರಾದ ಮಕ್ಕಳ ಮಾಹಿತಿ ಪಡೆದು, ಅವರ ಮನೆಗಳಿಗೆ ಭೇಟಿ ಮಾಡಿ ಸಮೀಕ್ಷಾ ವರದಿ ಸಲ್ಲಿಸಬೇಕು ಎಂದರು.

ಡಿಸಿಪಿ ಸಿ.ಆರ್. ರವೀಶ, ಎಸ್‌ಪಿ ಡಾ. ಗೋಪಾಲ ಬ್ಯಾಕೋಡ ವೇದಿಕೆಯಲ್ಲಿದ್ದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ನಗರಾಭಿವೃದ್ಧಿ ಕೋಶ, ಹೆಸ್ಕಾಂ ಹಾಗೂ ಶಿಕ್ಷಣ ಇಲಾಖೆ ಅಽಕಾರಿಗಳಿದ್ದರು. ಕಾರ್ಮಿಕ ಅಧಿಕಾರಿ ಅಕ್ಬರ್ ಮುಲ್ಲಾ ನಿರ್ವಹಿಸಿದರು. ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕ ಬಸವರಾಜ ಪಂಚಾಕ್ಷರಿಮಠ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net