ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರ ಸಹಕಾರ ಅಗತ್ಯ

child labors prohibition day
Published on

ಕಾರವಾರ: ಬಾಲ ಕಾರ್ಮಿಕ ಪದ್ದತಿಯ ನಿರ್ಮೂಲನೆಗೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದು

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿವ್ಯಶ್ರೀ ಸಿ. ಎಮ್ ಹೇಳಿದರು.

ಅವರು ಗುರುವಾರ ಶಿವಾಜಿ ಶಿಕ್ಷಣ ಸಂಸ್ಥೆಯಲ್ಲಿ, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯತ, ಕಾರ್ಮಿಕ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ(ರಿ), ಶಿವಾಜಿ ಶಿಕ್ಷಣ ಸಂಸ್ಥೆ ಹಾಗೂ ಅಂಗ ಸಂಸ್ಥೆಗಳು, ಹಾಗೂ ಜಿಲ್ಲಾ

ನ್ಯಾಯಾವಾದಿಗಳ ಸಂಘ ಇವರುಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆನ್ನು ಉದ್ಘಾಟಿಸಿ

ಮಾತನಾಡಿರು.

ಭಾರತದಲ್ಲಿ ಬಾಲ ಕಾರ್ಮಿಕ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ , ಬಡತನ, ಶಿಕ್ಷಣದ ಕೊರತೆ, ಜನ ಸಂಖ್ಯಾ ಸ್ಫೋಟ ಮುಂತಾದ ಕಾರಣಗಳಿಂದ ಬಾಲ ಕಾರ್ಮಿಕ ವ್ಯವಸ್ಥೆ ಇಂದಿಗೂ ಜಾರಿಯಲ್ಲಿದ್ದು, ಇದನ್ನು ಬುಡ ಸಮೇತ ನಿರ್ಮೂಲನೆ ಮಾಡಲು ಪ್ರತಿಯೊಬ್ಬರು ಕೈ

ಜೋಡಿಸಬೇಕು ಎಂದರು.

ಮಕ್ಕಳಿಗೆ ಶಿಕ್ಷಣದ ಅವಶ್ಯಕತೆ ತುಂಬಾ ಅಗತ್ಯವಾಗಿದೆ ಶಿಕ್ಷಣವು ಜೀವನದ ಪಾಠ ಕಲಿಸುವುದರ ಜೊತೆಗೆ ಉತ್ತಮ ಸಮಾಜದ ಅಭಿವೃದ್ಧಿ ಸಹಕರಿಯಾಗಿದೆ. ಪ್ರತಿಯೊಬ್ಬರೂ ತಾಯಿ ಗರ್ಭ ಧರಿಸಿನಿಂದಲೂ ಅಂತ್ಯ ಸಂಸ್ಕಾರ ಮುಗಿಯುವವರೆಗೆ ಕಾನೂನಿನ ಚೌಕಟ್ಟಿಗೆ ಒಳಪಟ್ಟಿರುತ್ತಾನೆ.

ಆದರಿಂದ ಕಾನೂನು ಮತ್ತು ಹಕ್ಕುಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಭಿಕ್ಷಾಟಣೆಯಲ್ಲಿ ತೊಡಗಿರುವ ಮಕ್ಕಳಿಗೆ ಪ್ರೋತ್ಸಾಹ ನೀಡಬಾರದು ಎಂದರು.

ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿ, ಬಾಲ ಕಾರ್ಮಿಕರನ್ನು ರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿ . ಬಡತನ, ಅನಕ್ಷರತೆ, ಹಾಗೂ ಹಣದ ಆಸೆ ಆಮಿಷಗಳಿಗೆ ಒಳಗಾಗಿ ಮಗುವಿನ ಜೀವನವನ್ನೇ ಹಾಳು ಮಾಡಲಾಗುತ್ತಿದೆ. ಯಾವುದೇ ಮಗು

ಕೂಡ ಶಿಕ್ಷಣದಿಂದ ವಂಚಿತರಾಗಬಾರದೆಂದು ಸರ್ಕಾರ ಅನೇಕ ಯೋಜನೆ ಜಾರಿಗೆ ತಂದಿದೆ ಅದನ್ನು ಸದುಪಯೋಗ ಪಡೆದುಕೊಂಡು ಶಿಕ್ಷಣ ಪಡೆದುಕೊಳ್ಳಿ ಎಂದರು.

ಕಾರ್ಮಿಕ ನಿರೀಕ್ಷಕ ಡಿ. ಎಂ ವೆಂಕಟೇಶ್ ಬಾಬು, ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಕಾಯ್ದೆ ಕುರಿತು ಉಪನ್ಯಾಸ ನೀಡಿ, ಶಾಲೆಯಿಂದ ಹೊರಗುಳಿದ ಮಕ್ಕಳೆಲ್ಲ ಬಾಲ ಕಾರ್ಮಿಕರೇ ಇದಕ್ಕೆ ಮೂಲ ಕಾರಣ ಬಡತನ. ಶಿಕ್ಷಣ ಪಡೆದು ಕೊಳ್ಳುವುದು ಪ್ರತಿಯೊಬ್ಬರ ಹಕ್ಕು ಅದನ್ನು ಯಾರು ಕಸಿದುಕೊಳ್ಳಲು ಸಾಧ್ಯವಿಲ್ಲ. ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದೆಂದು ಸರ್ಕಾರ ಉಚಿತ ಶಿಕ್ಷಣ, ಬಟ್ಟೆ, ಪುಸ್ತಕ, ಊಟ ಮುಂತಾದ ಸೌಲಭ್ಯವನ್ನು ಕಲ್ಪಿಸುವುದರ ಜೊತೆಗೆ ತಂದೆ ತಾಯಿಗಳಿಗೆ ಆಧಾರವಾಗುವ ಯೋಜನೆಗಳನ್ನು ಜಾರಿಗೆ ತಂದಿದೆ, ಬಾಲ ಕಾರ್ಮಿಕರು ಕಂಡು

ಬಂದಲ್ಲಿ ಸಾರ್ವಜನಿಕರು 1098 ಗೆ ಮಾಹಿತಿ ನೀಡಬೇಕು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ನ ಯೋಜನಾ ನಿರ್ದೇಶಕ ಕರೀಂ ಅಸದಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ವಿರೂಪಾಕ್ಷ ಗೌಡ ಪಾಟೇಲ್, ಶಹರ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಕುಮಾರ ಕಾಂಬಳೆ, ಜಿಲ್ಲಾ ನ್ಯಾಯಾವಾದಿಗಳ ಸಂಘದ ಅಧ್ಯಕ್ಷ ಸಂತೋಷ್ ಭಾಗವತ, ಶಿವಾಜಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎ.ಸಿ ಗಾಂವಕರ, ಶಿವಾಜಿ ಶಿಕ್ಷಣ ಸಂಸ್ಥೆ ಹಾಗೂ ಅಂಗ ಸಂಸ್ಥೆಗಳ ಅಧ್ಯಕ್ಷ ಕೆ.ಪಿ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ಲಲಿತಾ ಸಾತೇನಹಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು, ಶಿವಾಜಿ ಬಾಲ ಮಂದಿರದ ಮುಖ್ಯೋಪಧ್ಯಾಯನಿ ರಾಜೇಶ್ವರಿ ನಾಯ್ಕ ನಿರೂಪಿಸಿದರು. ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೇಗಳಲ್ಲಿನ ವಿಜೇತರಿಗೆ ಬಹುಮಾನ ವಿತರಣೆ, ಬಾಲ ಮತ್ತು ಕಿಶೋರ ಕಾರ್ಮಿಕ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದವರಿಗೆ ಸನ್ಮಾನ, ನಿಶ್ಚಿತ ಠೇವಣಿ ಪತ್ರ ವಿತರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net