ಬಾಲ್ಯ ವಿವಾಹ ತಡೆಗೆ ಕಠಿಣ ಕ್ರಮ -ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

images (1)
Published on


ಮಂಗಳೂರು : ಬಾಲ್ಯ ವಿವಾಹದಲ್ಲಿ ದೇಶದಲ್ಲೇ ಕರ್ನಾಟಕ ರಾಜ್ಯ ಎರಡನೇ ಸ್ಥಾನದಲ್ಲಿರುವ ಬಗ್ಗೆ ಕೇಂದ್ರ ಸರ್ಕಾರ
ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದೆ. ಇದು ತಲೆತಗ್ಗಿಸುವ ವಿಚಾರ. ಬಾಲ್ಯ ವಿವಾಹ ತಡೆಯಲು ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.
ಮಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಾಲ್ಯವಿವಾಹ ತಡೆಗೆ ಇಲಾಖೆಗೆ ಸ್ಥಳೀಯಾಡಳಿತಗಳ ಸಹಕಾರ ಅಗತ್ಯ. ಶಾಲೆಗಳು, ಎಸ್‌ಡಿಎಂಸಿ, ಕಾನೂನು, ಆರೋಗ್ಯ, ಪೊಲೀಸ್ ಇಲಾಖೆ ಹಾಗೂ ಗ್ರಾಮ ಪಂಚಾಯಿತಿಗಳ ಸಹಕಾರ ಇದ್ದರೆ ಬಾಲ್ಯ ವಿವಾಹ ತಡೆಯಲು ಸಾಧ್ಯವಿದೆ ಎಂದರು.
ರಾಜ್ಯದಲ್ಲಿ ಬಳ್ಳಾರಿ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಬಾಲ್ಯ ವಿವಾಹ ಅಧಿಕವಾಗಿದೆ ಎನ್ನುವ ಮಾಹಿತಿ ಇದೆ. ಇದಕ್ಕೆ ಮೂಢ ನಂಬಿಕೆ ಕಾರಣವೇ ಅಥವಾ ಬೇರೇ ಕಾರಣವಿದೆಯೇ ಎಂಬುದು ಗೊತ್ತಾಗಿಲ್ಲ. ಬಾಲ್ಯ ವಿವಾಹ ತಡೆಗೆ ಜಿಲ್ಲಾ ಮಟ್ಟದ ಕಮಿಟಿಗಳಿದ್ದು, ಅದರಲ್ಲಿ ವಕೀಲರು, ಸಂಘ ಸಂಸ್ಥೆ ಮುಖ್ಯಸ್ಥರು ಸದಸ್ಯರಾಗಿದ್ದಾರೆ. ಪ್ರಕರಣ ಗಮನಕ್ಕೆ ಬಂದ ಕೂಡಲೇ ದೂರು ದಾಖಲು ಮಾಡುತ್ತೇವೆ ಎಂದು ಅವರು ತಿಳಿಸಿದರು.
......................

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net