ಶಾಲೆಗಳಲ್ಲಿ ಮಕ್ಕಳ ರಕ್ಷಣಾ ನೀತಿ ಅನುಷ್ಠಾನ ಕಡ್ಡಾಯ, ಪಾಂಡೆಯ ಸೂಚನೆ

child protection act workshop for head masters koppal ceo
ಕೊಪ್ಪಳದಲ್ಲಿ ಖಾಸಗಿ, ಅನುದಾನಿತ ಪ್ರೌಢಶಾಲೆಗಳಳ ಮುಖ್ಯ ಶಿಕ್ಷಕರಿಗೆ ಮಕ್ಕಳ ರಕ್ಷಣಾ ನೀತಿ ಅನುಷ್ಠಾನ ಕುರಿತು ಬುಧವಾರ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರವನ್ನು ಎಡಿಸಿ ಸಿದ್ರಾಮೇಶ್ವರ ಉದ್ಘಾಟಿಸಿದರು. ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸದಸ್ಯ ಶೇಖರಗೌಡ ರಾಮತ್ನಾಳ, ಎಎಸ್ಪಿ ಹೇಮಂತ್​ ಕುಮಾರ್​, ಯುನಿಸ್​ೆ ಪ್ರತಿನಿಧಿಗಳಾದ ಡಾ.ಕೆ.ರಾವೇಂದ್ರ ಭಟ್​, ಹರೀಶ ಜೋಗಿ ಇದ್ದರು.
Published on

ಕೊಪ್ಪಳ: ಜಿಲ್ಲೆಯ ಎಲ್ಲ ಶಾಲೆಗಳಲ್ಲಿ ಮಕ್ಕಳ ರಕ್ಷಣಾ ನೀತಿ ಹಾಗೂ ಮಕ್ಕಳ ಹಕ್ಕುಗಳ ಅನುಷ್ಠಾನ ಕಡ್ಡಾಯ ಎಂದು ಜಿಪಂ ಸಿಇಒ ರಾಹುಲ್​ ರತ್ನಂ ಪಾಂಡೆಯ ಸೂಚಿಸಿದರು.

ಜಿಲ್ಲಾಡಳಿತದಿಂದ ನಗರದ ಜಿಪಂ ಜೆ.ಎಚ್​.ಪಟೇಲ್​ ಸಭಾಂಗಣದಲ್ಲಿ ಖಾಸಗಿ, ಅನುದಾನಿತ ಪ್ರೌಢಶಾಲೆಗಳಳ ಮುಖ್ಯ ಶಿಕ್ಷಕರಿಗೆ ಮಕ್ಕಳ ರಕ್ಷಣಾ ನೀತಿ ಅನುಷ್ಠಾನ ಕುರಿತು ಬುಧವಾರ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರ ಉದ್ದೇಶಿಸಿ ಮಾತನಾಡಿದರು.

ಶಾಲಾ ಸಿಬ್ಬಂದಿ ನೇಮಕಾತಿಯಲ್ಲಿ ಪೊಲೀಸ್​ ಪರಿಶೀಲನಾ ವರದಿ ಪಡೆಯಿರಿ. ಸಿಸಿಟಿವಿ ಕ್ಯಾಮೆರಾ ಅಳವಡಿಸಿ. ಸಿಬ್ಬಂದಿಯಿಂದ ಬದ್ಧತಾ ಪತ್ರ ಪಡೆಯಿರಿ. ಮಕ್ಕಳ ಸಲಹಾ ಪೆಟ್ಟಿಗೆ ಅಳವಡಿಸಿ. ಮಕ್ಕಳ ದೂರು, ಸಲಹೆ ಪರಿಗಣಿಸಿ. ರಕ್ಷಣಾ ಸಮಿತಿ ರಚಿಸಿ. ವಾಹನಗಳಿಗೆ ಜಿಪಿಎಸ್​ ಅಳವಡಿಸಿ. ತಪ್ಪಿದರೆ ಕ್ರಮ ಕೈಗೊಳ್ಳಲಾಗುವುದೆಂದು ಎಚ್ಚರಿಸಿದರು.

ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಮಾತನಾಡಿ, ದೇಶದಲ್ಲಿ ನಮ್ಮ ರಾಜ್ಯದಲ್ಲಿ ಮೊದಲು ಮಕ್ಕಳ ಸುರಾ ನೀತಿ ಅಳವಡಿಸಲಾಗಿದೆ. ಮಕ್ಕಳು ತಮ್ಮ ಹಕ್ಕು ಅನುಭವಿಸಲು ಪೂರಕ ವಾತಾವರಣ ನಿರ್ಮಿಸಬೇಕು. ಇದರಲ್ಲಿ ನಮ್ಮೆಲ್ಲರ ಜವಾಬ್ದಾರಿ ಇದೆ. ತಾರತಮ್ಯ ತಡೆಯಬೇಕು. ಅವರ ಅಭಿಪ್ರಾಯ ಗೌರವಿಸಬೇಕು. ಕಾನೂನಿನ ಅನ್ವಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸದಸ್ಯ ಶೇಖರಗೌಡ ರಾಮತ್ನಾಳ ಮಾತನಾಡಿ, ಎಲ್ಲ ಸಂಸ್ಥೆಗಳು ಕಡ್ಡಾಯವಾಗಿ ಮಕ್ಕಳ ರಕ್ಷಣಾ ನೀತಿ ಪಾಲಿಸಬೇಕು. ಹಲ್ಲೆ, ಕಿರುಕುಳ, ದೌರ್ಜನ್ಯ ನಡೆದಲ್ಲಿ ಪೊಲೀಸರಿಗೆ ತಿಳಿಸಿ. ಅಪ್ರಾಪ್ತರ ಮೇಲೆ ಲೈಂಗಿಕ ಹಲ್ಲೆ, ಬಾಲ್ಯವಿವಾಹ ಬಗ್ಗೆ ಅರಿವು ಮೂಡಿಸಿ. ಶಾಲೆ ಮತ್ತು ಸಮುದಾಯದಲ್ಲಿ ಮಕ್ಕಳ ಹಕ್ಕುಗಳು ಮತ್ತು ಮಕ್ಕಳ ಪರವಾದ ಕಾನೂನುಗಳ ಕುರಿತು ಜಾಗೃತಿ ಮೂಡಿಸುವಂತೆ ತಿಳಿಸಿದರು.

ಎಎಸ್ಪಿ ಹೇಮಂತ್​ ಕುಮಾರ್​ ಮಾತನಾಡಿ, ಮಕ್ಕಳ ಸ್ನೇಹಿ ವಾತಾವರಣ ನಿರ್ಮಾಣ ಹಾಗೂ ಜನಸ್ನೇಹಿ ಪೊಲೀಸ್​ ಯೋಜನೆ ಅಂಗವಾಗಿ ಹಲವಾರು ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಎಲ್ಲ ಪೊಲೀಸ್​ ಠಾಣೆಗಳಲ್ಲಿ ಪ್ರತಿ ಗುರುವಾರ ತೆರೆದ ಮನೆ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ನಿಮ್ಮ ಹತ್ತಿರದ ಠಾಣೆಗೆ ಮಕ್ಕಳನ್ನು ಕರೆದೊಯ್ದು ಆತ್ಮವಿಶ್ವಾಸ ಮೂಡಿಸಿ. ಮಕ್ಕಳ ಅಭಿವೃದ್ಧಿಯಲ್ಲಿ ಶೈಕ್ಷಣಿಕ ಸಂಸ್ಥೆಗಳ ಪಾತ್ರ ಬಹುಮುಖ್ಯ. ಶಾಲೆ ದೇವಾಲಯವಿದ್ದಂತೆ. ಅಲ್ಲಿ ದೌರ್ಜನ್ಯ, ಕಿರುಕುಳ, ಹಲ್ಲೆ ನಡೆದರೆ ನಾವು ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಯುನಿಸ್​ೆ ಪ್ರಾದೇಶಿಕ ಸಂಯೋಜಕ ಡಾ.ಕೆ.ರಾವೇಂದ್ರ ಭಟ್​ ಮಕ್ಕಳ ರಕ್ಷಣಾ ನೀತಿ ಬಗ್ಗೆ ಹಾಗೂ ಜಿಲ್ಲಾ ವ್ಯವಸ್ಥಾಪಕ ಹರೀಶ ಜೋಗಿ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ ಕುರಿತು ಮಾಹಿತಿ ನೀಡಿದರು. ಡಿಡಿಪಿಐ ಶ್ರೀಶೈಲ ಬಿರಾದಾರ, ಡಿಡಿಪಿಯು ಜಗದೀಶ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಾಂತಸ್ವಾಮಿ ಪೂಜಾರ, ಮಕ್ಕಳ ರಕ್ಷಣಾ ಟಕದ ಸುಮಲತಾ ಆಕಳವಾಡಿ, ಶಿವಲೀಲಾ ವನ್ನೂರು, ಪ್ರತಿಭಾ, ಪ್ರಶಾಂತ ರಡ್ಡಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net