ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟುವುದು ಪ್ರತಿಯೊಬ್ಬರ ಜವಾಬ್ದಾರಿ : ನ್ಯಾಯಾಧೀಶ ಬಮ್ಮಣಗಿ

IMG-20230822-WA0010
Published on

*

*-

ಕಲಬುರಗಿ,: ಅಪ್ರಾಪ್ತ ಮಕ್ಕಳ ಮೇಲೆ ಇಂದು ಹೆಚ್ಚುತ್ತಿರುವ ದೌರ್ಜನ್ಯ ಪ್ರಕರಣಗಳನ್ನು  ತಡೆಗಟ್ಟಲು ಪೋಷಕರು, ಶಿಕ್ಷಕರು, ಪೊಲೀಸ್ ಅಧಿಕಾರಿಗಳು ಹಾಗೂ ಇತರೆ ಮಕ್ಕಳ ಸಂಬಂಧಿತ ಇಲಾಖೆಯ ಅಧಿಕಾರಿಗಳ ಸಾಮೂಹಿಕ ಜವಾಬ್ದಾರಿಯಾಗಿದೆ. ಎಲ್ಲರು ಸಮನ್ವಯತೆಯಿಂದ ಕಾರ್ಯನಿರ್ವಹಿಸುವ ಮೂಲಕ ಇದರ ನಿಯಂತ್ರಣಕ್ಕೆ ಮುನ್ನುಡಿ ಬರೆಯಬೇಕಿದೆ ಎಂದು ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಯಮನಪ್ಪ ಬಮ್ಮಣಗಿ ಹೇಳಿದರು.

ನಗರದ ಪಿ.ಡಿ.ಎ. ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಹೆಚ್.ಕೆ.ಇ ಸಂಸ್ಥೆ ಹಾಗೂ ಜಿಲ್ಲೆಯ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ  “ಮಿಷನ್ ಸುರಕ್ಷಾ” ಅಭಿಯಾನ ಕಾರ್ಯಕ್ರಮದಡಿಯಲ್ಲಿ ಮಕ್ಕಳ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು ಜಾಗೃತಿ ಮತ್ತು ಅರಿವು ಕಾರ್ಯಕ್ರಮ ಭಾಗವಾಗಿ ಆಯೋಜಿಸಿದ ತರಬೇತಿದಾರರಿಗೆ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತ ಬಾಲಕಿ ಪೊಲೀಸರಿಗೆ ದೂರು ನೀಡಿದ ಬಳಿಕವೇ ಪ್ರಕರಣ ನ್ಯಾಯಾಲಯದ ಮೆಟ್ಟಿಲು ಹತ್ತುತ್ತದೆ. ಈ ನಡುವೆಯೇ ಸಂತ್ರಸ್ತ ಬಾಲಕಿಯ ಪಾಲಕರು ಮತ್ತು ಅತ್ಯಾಚಾರವೆಸಗಿದ ಆರೋಪಿ ನಡುವೆ ರಾಜಿ ಸಂಧಾನ ಸಾಧ್ಯತೆ ಹೆಚ್ಚಿರುತ್ತದೆ. ಅತ್ಯಾಚಾರಗೊಳ್ಳಗಾದ ಬಾಲಕಿ ನ್ಯಾಯಾಲಯದಲ್ಲಿ ಆರೋಪಿ ವಿರುದ್ಧ ಹೇಳಿಕೆ ನೀಡದೆ ಇರುವುದರಿಂದ ಬಹಳಷ್ಟು ಪೋಕ್ಸೋ ಅಡಿಯಲ್ಲಿ ದಾಖಲಾದ ಪ್ರಕರಣಗಳಲ್ಲಿ ಆರೋಪಿಗಳಿಗೆ ಶಿಕ್ಷೆಯಾಗುತ್ತಿಲ್ಲ. ಹೀಗಾಗಿ ಅತ್ಯಾಚಾರಗೊಳಗಾದ ಬಾಲಕಿ, ಪಾಲಕರು ಮತ್ತು ಪೊಲೀಸರು ಜವಾಬ್ದಾರಿಯುತವಾಗಿ ನ್ಯಾಯಾಲಯಕ್ಕೆ ಸಾಕ್ಷಾಧಾರ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದಾಗ ಮಾತ್ರ ಆರೋಪಿಗಳಿಗೆ ಶಿಕ್ಷೆ ವಿಧಿಸಲು ಸಾಧ್ಯವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net