ಸೋಮವಾರಪೇಟೆ: ಬೆಂಗಳೂರಿನ ಚೈಲ್ಡ್ ರೈಟ್ಸ್ ಟ್ರಸ್ಟ್, ಡಾ.ಪದ್ಮಿನಿ ಮಕ್ಕಳ ಹಕ್ಕುಗಳ ಫೆಲೋಷಿಪ್-2024 ಮತ್ತು ನಾವು ಪ್ರತಿಷ್ಠಾನ ಇವರ ಸಹಯೋಗದೊಂದಿಗೆ ಬೇಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಜಾಗೃತಿ ಕಾರ್ಯಕ್ರಮ ಶುಕ್ರವಾರ ನಡೆಯಿತು.
ಎಲ್ಲ ಮಕ್ಕಳಿಗೂ ಸಂವಿಧಾನ ಅವರಿಗೆ ನೀಡಿರುವ ಹಕ್ಕುಗಳು ಸಿಗುವಂತೆ ಮಾಡುವುದು, ಮಕ್ಕಳ ಬದುಕು, ರಕ್ಷಣೆ, ಅಭಿವೃದ್ಧಿ ಹಾಗೂ ಭಾಗವಹಿಸುವ ಹಕ್ಕುಗಳ ಕುರಿತು ಚೈಲ್ಡ್ ರೈಟ್ಸ್ ಟ್ರಸ್ಟ್‌ನ ಫೆಲೋ ಸುಮನ್ ಮ್ಯಾಥ್ಯೂ ಮಾಹಿತಿ ನೀಡಿದರು. ನಂತರ ಮಕ್ಕಳೊಟ್ಟಿಗೆ ಸಂವಾದ ನಡೆಸಿದರು. ಸಂಸ್ಥೆಯ ಗೌತಮ್ ಕಿರಗಂದೂರು ಅವರು ಮಕ್ಕಳಿಗಾಗಿ ಇರುವ ಯೋಜನೆಗಳು ಮತ್ತು ಕಾಯ್ದೆಗಳು, ಮಕ್ಕಳ ಸಹಾಯವಾಣಿ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯಶಿಕ್ಷಕಿ ನಿರ್ಮಲಾ, ಸಹ ಶಿಕ್ಷಕರಾದ ಎಂ.ಕೆ. ಸುಜಾತಾ, ಪುಷ್ಪಾ, ತೆರೇಸಾ ಅಲ್ಮೆಡಾ, ಪವಿತ್ರಾ ಇದ್ದರು.
ಸೋಮವಾರಪೇಟೆ ಸಮೀಪದ ಬೇಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಮಕ್ಕಳ ಜಾಗೃತಿ ಕಾರ್ಯಕ್ರಮದಲ್ಲಿ ಚೈಲ್ಡ್ ರೈಟ್ಸ್ ಟ್ರಸ್ಟ್‌ನ ಫೆಲೋ ಸುಮನ್ ಮ್ಯಾಥ್ಯೂ ಮಾಹಿತಿ ನೀಡಿದರು. ಗೌತಮ್, ನಿರ್ಮಲಾ ಇದ್ದರು.