ನಿದ್ದೆಯಿಂದ ಎದ್ದು ಬಂದ ಮಗು ಹೊಳೆಗೆ ಬಿದ್ದು ಸಾವು

sucide
Published on

ಕುಂದಾಪುರ: ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಎರಡು ವರ್ಷದ ಮಗು ನಿದ್ದೆಯಿಂದ ಎಚ್ಚೆತ್ತು ಮನೆ ಸಮೀಪದ ನದಿ ದಡದಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಆಯತಪ್ಪಿ ನೀರಿಗೆ ಬಿದ್ದು ಮೃತಪಟ್ಟಿರುವ ಘಟನೆ ಉಪ್ಪುಂದ ಗ್ರಾಮದ ಕರ್ಕಿಕಳಿ ಎಂಬಲ್ಲಿ ನಡೆದಿದೆ.

ಉಪ್ಪುಂದ ಗ್ರಾಮ ಕರ್ಕಿಕಳಿ ಚೌಕಿಮನೆ ವಿಶ್ವನಾಥ ಖಾರ್ವಿ ಎಂಬುವರ ಮಗ ಸರ್ವದ (2 ವರ್ಷ 1 ತಿಂಗಳು) ಮೃತಪಟ್ಟ ಮಗು. ಸೋಮವಾರ ಮಧ್ಯಾಹ್ನ ಮಗುವನ್ನು ಮನೆಯ ಕೋಣೆಯಲ್ಲಿ ಮಲಗಿಸಿ ಉಪ್ಪುಂದ ಪೇಟೆಗೆ ಹೋಗಿದ್ದರು. ಮಲಗಿದ್ದ ಮಗು ಎದ್ದು ಮನೆಯಿಂದ ಹೊರಗೆ ಬಂದು ಮನೆಯ ಸಮೀಪ ಹರಿಯುವ ಎಡಮಾವಿನ ಹೊಳೆಯ ದಡದಲ್ಲಿ ನಡೆದುಕೊಂಡು ಹೋಗುವಾಗ ಆಕಸ್ಮಿಕವಾಗಿ ಕಾಲು ಜಾರಿ ಹೊಳೆಗೆ ಬಿದ್ದಿದ್ದು, ಮೃತದೇಹವು ಎಡಮಾವಿನ ಹೊಳೆ ಸಮುದ್ರವನ್ನು ಸೇರುವ ಉಪ್ಪುಂದ-ಕರ್ಕಿಕಳಿ ಬ್ರೇಕ್ ವಾಟರ್ ಸಮೀಪ ನೀರಿನಲ್ಲಿ ಮಂಗಳವಾರ ದೊರೆತಿದೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net