ಬಾಲ್ಯ ವಿವಾಹ ತೆಡೆಗೆ ಕ್ರಮವಹಿಸಿ

Published on

ಯಲಬುರ್ಗಾ: ಬಾಲ್ಯವಿವಾಹ ಸಮಾಜಕ್ಕೆ ಸವಾಲಾಗಿದ್ದು, ಇದರ ಬಗ್ಗೆ ಪ್ರತಿಯೊಬ್ಬರೂ ಜಾಗೃತರಾಗಿ ಯುವಜನತೆ ಮತ್ತು ಪಾಲಕರಿಗೆ ಅರಿವು ಮೂಡಿಸಬೇಕು ಎಂದು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ವಿ.ಪಿ.ಶಿವಾನಂದ ಹೇಳಿದರು.

ಸಮೀಪದ ಬೇವೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿವಿಧ ಇಲಾಖೆಗಳಿಂದ ಬಾಲ್ಯವಿವಾಹ ನಿಷೇಧ ಕುರಿತು ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಶನಿವಾರ ಮಾತನಾಡಿದರು.

ಹಲವು ಕಾರಣಗಳಿಂದ ಬಾಲ್ಯವಿವಾಹಕ್ಕೆ ಮುಂದಾಗುತ್ತಾರೆ. ಇದರಿಂದ ಆಗುವ ಆರೋಗ್ಯ ಮತ್ತು ಸಮಾಜದ ಮೇಲಿನ ದುಷ್ಪರಿಣಾಮಗಳ ಬಗ್ಗೆ ಯೋಚಿಸುವುದಿಲ್ಲ. ಆದ್ದರಿಂದ ವಿದ್ಯಾರ್ಥಿಗಳು ಬಾಲ್ಯವಿವಾಹ ಶಿಕ್ಷಾರ್ಹ ಅಪರಾಧವೆಂದು ಪಾಲಕರಿಗೆ ಅರಿವು ಮೂಡಿಸಬೇಕು. ಇದನ್ನು ಮಾಡುವವರಿಗೆ ಮತ್ತು ಮಾಡಿಸುವವರಿಗೆ 1 ಲಕ್ಷ ರೂ.ವರೆಗೆ ದಂಡ ಮತ್ತು ಜೈಲುಶಿಕ್ಷೆ ವಿಧಿಸಲಾಗುತ್ತದೆ. ಕೊಪ್ಪಳವನ್ನು ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿಸಿ. ಬಾಲ್ಯವಿವಾಹ ಕಂಡುಬಂದಲ್ಲಿ 1098ಸಂಖ್ಯೆಗೆ ಕರೆಮಾಡಿ ಎಂದರು.

ಎಸ್.ಟಿ.ಎಸ್. ಕೃಷ್ಣಾಜೀ ಮಾತನಾಡಿ, ಕ್ಷಯರೋಗ ನಿರ್ಮೂಲನೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಕುರಿತು ವಿವರಿಸಿದರು. ಸಮುದಾಯ ಆರೋಗ್ಯಾಧಿಕಾರಿ ಮಂಜುಳಾ ಅವರು ಅಸಾಂಕ್ರಾಮಿಕ ರೋಗಗಳು, ಮಳೆಗಾಲದಲ್ಲಿ ಸೋಂಕಿತ ಸೊಳ್ಳೆಗಳಿಂದ ಹರಡುವ ಸಾಂಕ್ರಾಮಿಕ ರೋಗಗಳು, ತಾಯಿ ಮಕ್ಕಳ ಆರೋಗ್ಯ ರಕ್ಷಣೆ, ಕುಟುಂಬ ಕಲ್ಯಾಣ ಕಾರ್ಯಕ್ರಮ, ಕುಷ್ಠರೋಗ ನಿರ್ಮೂಲನೆ ಕುರಿತು ಮಾಹಿತಿ ನೀಡಿದರು. ಕಾಲೇಜಿನ ಪ್ರಾಚಾರ್ಯ ಗೋಪಾಲಕೃಷ್ಣ, ಸಹ ಉಪನ್ಯಾಸಕ ಎಚ್.ಎ.ಹಿರೇಮಠ, ಆಶಾ ಕಾರ್ಯಕರ್ತೆ ಅನ್ನಪೂರ್ಣಾ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net