ಮಕ್ಕಳು ಪಠ್ಯದ ಜತೆ ಕ್ರೀಡಾಸಕ್ತಿ ಬೆಳೆಸಿಕೊಳ್ಳಿ

ಮಳವಳ್ಳಿ ತಾಲೂಕಿನ ಪಂಡಿತಹಳ್ಳಿ ಸೇಂಟ್ ಜೋಸೆಫ್ ಶಾಲೆಯ ಆವರಣದಲ್ಲಿ ಮಂಗಳವಾರ ಆಯೋಜಿಸಿದ್ದ ಹಿರಿಯ ಪ್ರಾಥಮಿಕ ಶಾಲಾ ಹಂತದ ಬಿ.ಜಿ.ಪುರ ಹೋಬಳಿ ಮಟ್ಟದ ಕ್ರೀಡಾಕೂಟವನ್ನು ಕ್ಷೇತ್ರ ಸಮನ್ವಯಾಧಿಕಾರಿ ಶ್ರೀನಿವಾಸ್ ಉದ್ಘಾಟಿಸಿದರು. ನಾಗರಾಜು, ಸಿ.ಪಿ.ರಾಜು, ರವೀಂದ್ರ ಕುಮಾರ್, ಮಲ್ಲಿಕಾರ್ಜುನಯ್ಯ, ಶಿವಶಂಕರ್, ನಾಗೇಶ್, ಫಾದರ್ ಹಾರ್ವಿನ್ ಡಿಸೋಜ, ಇದ್ದರು.
ಮಳವಳ್ಳಿ ತಾಲೂಕಿನ ಪಂಡಿತಹಳ್ಳಿ ಸೇಂಟ್ ಜೋಸೆಫ್ ಶಾಲೆಯ ಆವರಣದಲ್ಲಿ ಮಂಗಳವಾರ ಆಯೋಜಿಸಿದ್ದ ಹಿರಿಯ ಪ್ರಾಥಮಿಕ ಶಾಲಾ ಹಂತದ ಬಿ.ಜಿ.ಪುರ ಹೋಬಳಿ ಮಟ್ಟದ ಕ್ರೀಡಾಕೂಟವನ್ನು ಕ್ಷೇತ್ರ ಸಮನ್ವಯಾಧಿಕಾರಿ ಶ್ರೀನಿವಾಸ್ ಉದ್ಘಾಟಿಸಿದರು. ನಾಗರಾಜು, ಸಿ.ಪಿ.ರಾಜು, ರವೀಂದ್ರ ಕುಮಾರ್, ಮಲ್ಲಿಕಾರ್ಜುನಯ್ಯ, ಶಿವಶಂಕರ್, ನಾಗೇಶ್, ಫಾದರ್ ಹಾರ್ವಿನ್ ಡಿಸೋಜ, ಇದ್ದರು.
Published on

ಮಳವಳ್ಳಿ: ಕ್ರೀಡೆ ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಸದೃಢಗೊಳಿಸುವುದರಿಂದ ಮಕ್ಕಳು ಕಲಿಕೆಯ ಜತೆಗೆ ಕ್ರೀಡಾಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ಕ್ಷೇತ್ರ ಸಮನ್ವಯಾಧಿಕಾರಿ ಶ್ರೀನಿವಾಸ್ ಸಲಹೆ ನೀಡಿದರು.

ತಾಲೂಕಿನ ಪಂಡಿತಹಳ್ಳಿ ಗ್ರಾಮದ ಸೇಂಟ್ ಜೋಸೆಫ್ ಶಾಲೆಯ ಆವರಣದಲ್ಲಿ ಮಂಗಳವಾರ ಆಯೋಜಿಸಿದ್ದ ಹಿರಿಯ ಪ್ರಾಥಮಿಕ ಶಾಲಾ ಹಂತದ ಬಿ.ಜಿ.ಪುರ ಹೋಬಳಿ ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.

ಆರೋಗ್ಯವಂತ ಯುವ ಸಮೂಹದಿಂದ ದೇಶದ ಕ್ರೀಡಾ ಚಟುವಟಿಕೆಯಲ್ಲಿ ಮೇರು ಸ್ಥಾನವನ್ನು ಗಳಿಸುವುದರ ಜತೆಗೆ ವಿಶ್ವಮಟ್ಟದಲ್ಲಿ ದೇಶದ ಕೀರ್ತಿಯನ್ನು ಹೆಚ್ಚಿಸಬಹುದು ಎಂದರು.

ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ನಾಯಕತ್ವ ಗುಣವನ್ನು ಬೆಳೆಸಿಕೊಂಡು ಜೀವನದಲ್ಲಿ ಸಮಸ್ಯೆಗಳು ತಲೆದೂರಿದಾಗ ಅವುಗಳನ್ನು ಪರಿಹರಿಸಿಕೊಳ್ಳಲು ಕ್ರೀಡೆ ಸಹಕಾರಿ ಆಗಲಿದೆ. ಶಾಲೆಗಳಲ್ಲಿ ಶಿಕ್ಷಕರು ಪಠ್ಯಚಟುವಟಿಕೆ ಜತೆಗೆ ಕ್ರೀಡೆಗಳಿಗೂ ಹೆಚ್ಚು ಒತ್ತು ನೀಡಬೇಕು ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಶಿಕ್ಷಣ ಸಂಯೋಜಕ ದಯಾನಂದ್, ಶಾಲಾ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳಲ್ಲಿ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ವೃದ್ಧಿಸಲು ಇಂತಹ ಕ್ರೀಡೆಗಳನ್ನು ಹಮ್ಮಿಕೊಳ್ಳುತ್ತಿದೆ. ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸಿ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮೂಲಕ ಆತ್ಮಸ್ಥೈರ್ಯ ವೃದ್ಧಿಸಿಕೊಂಡು ಮುನ್ನಡೆದಾಗ ಯಶಸ್ಸು ನಿಮ್ಮನ್ನು ಅರಸಿ ಬರುತ್ತದೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಎರಡು ದಿನಗಳ ಕಾಲ ನಡೆಯುವ ಕ್ರೀಡಾಕೂಟದಲ್ಲಿ ಮಂಗಳವಾರ ಬಾಲಕರ ವಿಭಾಗದಲ್ಲಿ ಅಥ್ಲೆಟಿಕ್ಸ್ ಮತ್ತು ಗುಂಪು ಆಟಗಳು ನಡೆದವು. ಕ್ರೀಡೆ ಯಲ್ಲಿ ಭಾಗವಹಿಸಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಪಂಡಿತಹಳ್ಳಿ ಗ್ರಾಪಂ ಅಧ್ಯಕ್ಷ ನಾಗರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಪಿ.ರಾಜು, ಪಿಎಸಿಎಸ್ ಅಧ್ಯಕ್ಷ ರವೀಂದ್ರ ಕುಮಾರ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನಯ್ಯ, ಗೌರವಾಧ್ಯಕ್ಷ ಶಿವಶಂಕರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾಗೇಶ್, ಪ್ರಾಂಶುಪಾಲ ಫಾದರ್ ಹಾರ್ವಿನ್ ಡಿಸೋಜ, ದೈಹಿಕ ಶಿಕ್ಷಣ ಪರಿವೀಕ್ಷಕಿ ನಾಗರತ್ನಮ್ಮ, ಮುಖ್ಯ ಶಿಕ್ಷಕರ ಸಂಘದ ವಿಭಾಗೀಯ ಮಟ್ಟದ ಕಾರ್ಯದರ್ಶಿ ಬಸವರಾಜು, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ರವೀಂದ್ರ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net