

ಹಾವೇರಿ: ಮದುವೆಯಾಗಿ 10 ವರ್ಷವಾದರೂ ಮಕ್ಕಳಾಗಲಿಲ್ಲವೆಂದು ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ದೇವಿಹೊಸೂರ ಗ್ರಾಮದಲ್ಲಿ ನಡೆದಿದೆ.
ರೋಶನಿಬೇಗಮ್ ಅಲ್ತಾಪಸಾಹೇಬ ಯರೇಶೀಮಿ (38) ಮೃತ ಮಹಿಳೆ.
ಇವರು ಮದುವೆಯಾಗಿ 10 ವರ್ಷ ಕಳೆದರೂ ಮಕ್ಕಳಾಗಲಿಲ್ಲವೆಂದು ಬೇಸರ ಮಾಡಿಕೊಂಡು ಮನೆಯಲ್ಲಿಯೆ ನೇಣು ಬಿಗಿದುಕೊಂಡಿದ್ದಾರೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.