ಮಕ್ಕಳ ಆರೋಗ್ಯಕ್ಕಾಗಿ ಪೌಷ್ಟಿಕ ಆಹಾರ ವಿತರಣೆ

21 MANVI 01
ಮಾನ್ವಿ ಪೋತ್ನಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಣ ಅಭಿಯಾನದಡಿ ವಿದ್ಯಾರ್ಥಿಗಳಿಗೆ ತರಕಾರಿ, ಹಣ್ಣು, ಹಾಗೂ ಪೌಷ್ಟಿಕ ಆಹಾರದ ಮಾಹಿತಿ ನೀಡಲಾಯಿತು. ಶಿಕ್ಷಕಿಯರಾದ ಆಯೀಷಾ, ದೀಪಾ, ಲಕ್ಷ್ಮೀ, ನೀಲಗಂಗಮ್ಮ, ಲಕ್ಷ್ಮವ್ವ, ವಿಜಯಲಕ್ಷ್ಮೀ, ತಾರಾ, ಸುಮಾ, ಪಾರ್ವತಿ, ಶಶಿಕಲಾ ಇನ್ನಿತರರು ಇದ್ದರು.
Published on

ಮಾನ್ವಿ: ಗ್ರಾಮೀಣ ಮಕ್ಕಳಲ್ಲಿನ ಅಪೌಷ್ಟಿಕ ಹೊಗಲಾಡಿಸಿ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಮಕ್ಕಳಿಗೆ ಪೌಷ್ಟಿಕ ಆಹಾರವನ್ನು ಶಾಲೆಗಳಲ್ಲಿ ನೀಡಲಾಗುತ್ತಿದೆ ಎಂದು ಮುಖ್ಯಶಿಕ್ಷಕ ಕೆ. ಗುಂಡಯ್ಯನಾಯಕ ಹೇಳಿದರು.

ತಾಲೂಕಿನ ಪೋತ್ನಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಪೋಷಣ ಪಕ್ವಾಡ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಅಗತ್ಯವಾದ ಪೌಷ್ಟಿಕ ಆಹಾರವನ್ನು ಸರ್ಕಾರದಿಂದ ಮಕ್ಕಳಿಗೆ ನೀಡಲಾಗುತ್ತಿದೆ.

ಆಹಾರದಲ್ಲಿ ಪೌಷ್ಟಿಕ, ಶುಚಿತ್ವಕ್ಕೆ ಆದ್ಯತೆ ನೀಡಲಾಗುತ್ತಿದೆ. ಅಂಗನವಾಡಿ ಮಕ್ಕಳಿಗೆ, ಗರ್ಭಿಣಿ, ಬಾಣಂತಿಯರಿಗೆ ಪೌಷ್ಟಿಕ ಆಹಾರವನ್ನು ನೀಡುವುದಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net