ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ

26mnv02
ಮಾನ್ವಿಯಲ್ಲಿ ಹಮ್ಮಿಕೊಂಡಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ವಕೀಲರ ಸಂಘದ ಅಧ್ಯಕ್ಷ ರವಿಕುಮಾರ ಪಾಟೀಲ್ ಮಾತನಾಡಿದರು. ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕ ಮಂಜುನಾಥ ರೆಡ್ಡಿ, ಕಿಶೋರ ಇತರರಿದ್ದರು.
Published on

ಮಾನ್ವಿ: ಪಾಲಕರು ಮಕ್ಕಳನ್ನು ಕೂಲಿ ಕೆಲಸಗಳಿಗೆ ಕಳಿಸುವುದು ಕಾನೂನು ಪ್ರಕಾರ ಅಪರಾಧ. ಅವರಿಗೆ ಶಿಕ್ಷಣ ಕೊಡಿಸಿದರೆ ಉತ್ತಮ ಜೀವನ ರೂಪಿಸಿಕೊಳ್ಳುತ್ತಾರೆ ಎಂದು ವಕೀಲರ ಸಂಘದ ಅಧ್ಯಕ್ಷ ರವಿಕುಮಾರ ಪಾಟೀಲ್ ಹೇಳಿದರು.

ಪಟ್ಟಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನೆ ಸೇರಿ ವಿವಿಧ ಇಲಾಖೆಗಳ ಸಹಯೋಗದಲ್ಲಿ ಎಸ್ಸಿಪಿ-ಟಿಎಸ್ಪಿ ಯೋಜನೆಯಡಿ ಬುಧವಾರ ಹಮ್ಮಿಕೊಂಡಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.

ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಂಡು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು ಎಂದರು. ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕ ಮಂಜುನಾಥ ರೆಡ್ಡಿ ಉಪನ್ಯಾಸ ನೀಡಿದರು. ಕಾರ್ಮಿಕ ಇಲಾಖೆ ಮಾನ್ವಿ ವೃತ್ತ ನಿರೀಕ್ಷಕ ಮಲ್ಲಪ್ಪ ದೊರೆ, ತಾಲೂಕು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಮನ್ಸೂರ್ ಅಹಮ್ಮದ್, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಚನ್ನಬಸವನಾಯಕ, ಪ್ರಮುಖರಾದ ವಿಶ್ವನಾಥ ಪಾಟೀಲ್ ವಕೀಲ, ಜಯಪ್ರಕಾಶ, ಪಿ.ರವಿಕುಮಾರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net