

ಮಸ್ಕಿ: ವಿದ್ಯಾರ್ಥಿಗಳು ಓದಿನ ಜತೆಗೆ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ದೈಹಿಕ ಸದೃಢತೆ ಮತ್ತು ಮಾನಸಿಕ ಆರೋಗ್ಯವಂತರಾಗಬೇಕು ಎಂದು ಶಾಸಕ ಆರ್.ಬಸನಗೌಡ ತುರ್ವಿಹಾಳ ಹೇಳಿದರು.
ತಾಲೂಕಿನ ಅಡವಿಭಾವಿ ತಾಂಡಾದ ಸರ್ಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಆಯೋಜಿಸಿದ್ದ ವಲಯ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.
ಇದನ್ನು ಓದಿ: ಕ್ರೀಡಾಕೂಟದಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳಿ; ಡಾ. ಮನೋಜ
ಗ್ರಾಮೀಣ ಕ್ರೀಡೆಗಳಿಗೆ ಆದ್ಯತೆ ನೀಡಬೇಕು. ಮಕ್ಕಳ ಆಸಕ್ತಿ ಗುರುತಿಸಿ ಅವರಿಗೆ ಪ್ರೋತ್ಸಾಹ ನೀಡಬೇಕು. ಗ್ರಾಮೀಣ ಭಾಗದ ಕ್ರೀಡಾ ಪ್ರತಿಭೆಗಳು ಉತ್ತಮ ಸಾಧನೆ ಮಾಡುವ ಮೂಲಕ ರಾಷ್ಟ್ರ ಮಟ್ಟದಲ್ಲಿ ತಾಲೂಕಿನ ಹೆಸರು ತರಬೇಕು ಎಂದರು.
ಕ್ರೀಡಾಕೂಟದಲ್ಲಿ ಮಾರಲದಿನ್ನಿ, ಮೆದಿಕಿನಾಳ, ತಲೇಖಾನ್ ಪಂಚಾಯಿತಿ ವ್ಯಾಪ್ತಿಯ ಕ್ರೀಡಾಪಟುಗಳು ಭಾಗವಹಿಸಿದ್ದರು. ಪ್ರಮುಖರಾದ ಜಾಂಪಣ್ಣ, ನಾಗರಾಜ, ಕುಪ್ಪಣ್ಣ, ಲೋಕಪ್ಪ, ಆರ್.ಟಿ ನಾಯ್ಕ, ರಾಮಣ್ಣ, ಅಮರೇಶ, ದೈಹಿಕ ಶಿಕ್ಷಕ ಸಿ.ಎ.ಮೇಟಿ, ವೀರೇಶ ಇತರರು ಇದ್ದರು.