ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ ಅಗತ್ಯ

MM 6-11 GURU
ವಿಜಯಪುರದ ಗುರುದೇವ ಇಂಟರನ್ಯಾಷನಲ್ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ವಿಜೇತರಾದ ವಿದ್ಯಾರ್ಥಿಗಳಗೆ ಪ್ರಶಸ್ತಿ ವಿತರಿಸಲಾಯಿತು. ಡಾ. ಉಮಾ ಭೋಸಲೆ, ಡಾ. ರವೀಂದ್ರ ಭೋಸಲೆ, ತಹಸೀನ್ ದಫೇದಾರ ಮತ್ತಿತರರಿದ್ದಾರೆ.
Published on

ವಿಜಯಪುರ: ವಿದ್ಯಾರ್ಥಿಗಳಲ್ಲಿ ಅಡಗಿದ ಸುಪ್ತ ಪ್ರತಿಭೆ ಅನಾವರಣಕ್ಕೆ ವೇದಿಕೆ ಕಲ್ಪಿಸಿದಾಗಲೇ ಅವರಲ್ಲಿನ ಅಗಾಧ ಜ್ಞಾನ ಬೆಳಕಿಗೆ ಬರಲಿದೆ ಎಂದು ರವೀಂದ್ರನಾಥ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಾ. ಉಮಾ ಭೋಸಲೆ ಹೇಳಿದರು.

ನಗರದ ಗುರುದೇವ ಇಂಟರ್‌ನ್ಯಾಷನಲ್ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಹಾಗೂ ಬಹುಮಾನ ವಿತರಿಸಿ ಅವರು ಮಾತನಾಡಿದರು.

ತಾಂತ್ರಿಕ ಯುಗದಲ್ಲಿ ವಿದ್ಯಾರ್ಥಿಗಳಲ್ಲಿ ಸಾಕಷ್ಟು ಪ್ರತಿಭೆ ಇರುತ್ತದೆ. ಅದನ್ನು ಒರೆಗೆ ಹಚ್ಚಿ ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಪ್ರೇರೇಪಿಸಬೇಕು ಎಂದು ಸಲಹೆ ನೀಡಿದರು.

ಸದ್ಯದ ವಿಜ್ಞಾನ ಯುಗದಲ್ಲಿ ಪ್ರತಿಯೊಬ್ಬರೂ ಜ್ಞಾನದ ಆಹಾರ ಹೆಚ್ಚಿಸಿಕೊಳ್ಳಲು ಶ್ರಮಿಸಬೇಕು. ನಮ್ಮ ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳಿಗೆ ಜ್ಞಾನದ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಪ್ರತಿ ವರ್ಗದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಂಡು ಜೀವನ ಮಾರ್ಗ ತಿಳಿಯುವತ್ತ ಗಮನ ಹರಿಸುವಂತೆ ಮಾಡಲಾಗುತ್ತಿದೆ ಎಂದರು.

ಸಂಸ್ಥೆ ಅಧ್ಯಕ್ಷ ಡಾ. ರವೀಂದ್ರ ಭೋಸಲೆ ಮಾತನಾಡಿ, ಮಕ್ಕಳಲ್ಲಿ ಕ್ರಿಯಾಶೀಲತೆ ಹೆಚ್ಚಿಸಲು ಸ್ಪರ್ಧೆ ಏರ್ಪಡಿಸಲಾಗಿದೆ. ಜತೆಗೆ ನಮ್ಮ ಶಾಲೆಯಲ್ಲಿ ಪ್ರತಿಯೊಂದು ಚಟುವಟಿಕೆಯನ್ನು ಕ್ರಿಯಾಶೀಲ ರೀತಿಯಲ್ಲಿ ಆಚರಿಸುತ್ತಿದ್ದು, ನಮ್ಮ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಮಿನಾಜ್ ಕೊಕಟನೂರ ಉತ್ತಮ ಮಾಡಲ್ ಮಾಡಿ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾಳೆ ಎಂದರು.

ಶಿಕ್ಷಕಿ ತಹಸೀನ್ ದಫೇದಾರ, ಶ್ವೇತಾ ಮೋಟಗಿ, ಸುಬಾನ ಕೋರಬು, ಪ್ರಶಾಂತ ಮಾಲಟಕರ, ಸಾಧಿಕಾ ಮುಶ್ರೀಫ್, ಅಹ್ಮದ ಬಾಗವಾನ, ಆಫ್ರೀನ್ ಕೋರಬು, ಸುಹಾಸಿನಿ ಕನ್ನೊಳ್ಳಿ, ಪ್ರಿಯಾಂಕಾ ಶಿರಮಗೊಂಡ, ಸ್ವಾತಿ ಜಾಧವ, ವಿದ್ಯಾರ್ಥಿಗಳು ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net