ಸೂರ್ಲಬ್ಬಿ ಶಾಲೆಯ ಮಕ್ಕಳಿಂದ ಗಣೇಶ ಮೂರ್ತಿ ತಯಾರಿಕೆ

28adarshkdga3
Published on

ಮಡಿಕೇರಿ: ಸೋಮವಾರಪೇಟೆ ತಾಲೂಕಿನ ಮಾದಾಪುರ ಸಮೀಪದ ಪಶ್ಚಿಮಘಟ್ಟ ಸೆರಗಿನಲ್ಲಿರುವ ಸೂರ್ಲಬ್ಬಿ ಸರ್ಕಾರಿ ಪ್ರೌಢಶಾಲೆ ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಪ್ರಾಥಮಿಕ ಶಾಲೆಯ ಮಕ್ಕಳು ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ತಯಾರಿಕೆ ಮಾಡುವ ಮೂಲಕ ಪರಿಸರ ಪ್ರೀತಿಗೆ ಪಾತ್ರರಾಗಿದ್ದಾರೆ.


ಸರ್ಕಾರಿ ಪ್ರೌಢಶಾಲೆಯ ರಾಷ್ಟ್ರೀಯ ಹಸಿರು ಪಡೆಯ ನಿಸರ್ಗ ಇಕೋ ಕ್ಲಬ್ ಹಾಗೂ ಪ್ರಾಥಮಿಕ ಶಾಲೆಯ ಇಕೋ ಕ್ಲಬ್‌ನ ಸಂಯುಕ್ತಾಶ್ರಯದಲ್ಲಿ ವಿದ್ಯಾರ್ಥಿಗಳು ಪ್ರೌಢಶಾಲಾ ಇಕೋ ಕ್ಲಬ್‌ನ ಉಸ್ತುವಾರಿ ಶಿಕ್ಷಕಿ ಕೆ.ಯಶೋಧರವರ ಮಾರ್ಗದರ್ಶನದಲ್ಲಿ ವಿವಿಧ ನಮೂನೆಯ ಮಣ್ಣಿನ ಗಣೇಶ ವಿಗ್ರಹಗಳನ್ನು ತಯಾರಿಸಿ ಪೋಷಕರ ಪ್ರೀತಿಗೆ ಪಾತ್ರರಾಗಿದ್ದಾರೆ. ಮಕ್ಕಳು ತಯಾರಿಸಿದ ಗಣೇಶ ವಿಗ್ರಹಗಳನ್ನು ವಿವಿಧ ಹೂವುಗಳಿಂದ ಅಲಂಕರಿಸಿ ಇಟ್ಟಿದ್ದು ಗಮನ ಸೆಳೆಯಿತು.


ಪರಿಸರ ಸ್ನೇಹಿ ಗಣೇಶೋತ್ಸವದ ಅಭಿಯಾನಕ್ಕೆ ಪ್ರೌಢಶಾಲಾ ಪ್ರಭಾರ ಮುಖ್ಯೋಪಾಧ್ಯಾಯ ರವೀಂದ್ರ ತಿಮ್ಮಪ್ಪ ಅಂಟರದಾನಿ ಚಾಲನೆ ನೀಡಿದರು. ಇಕೋ ಕ್ಲಬ್‌ನ ಶಿಕ್ಷಕಿ ಕೆ.ಯಶೋಧ, ಪರಿಸರ ಸ್ನೇಹಿ ಗಣೇಶೋತ್ಸವದಲ್ಲಿ ಮಣ್ಣಿನ ಗಣೇಶ ಮೂರ್ತಿಯ ತಯಾರಿಕೆಯ ಮಹತ್ವ ಕುರಿತು ವಿವರಿಸಿದರು.


ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಬಿ.ಎಂ.ಸುಂದರಿ, ಪ್ರೌಢಶಾಲಾ ಶಿಕ್ಷಕರಾದ ಕೆ.ಎ.ಅಮೀನಾ, ಕೆ.ವಿಶ್ವನಾಥ, ಕೆ.ಜಿ.ಶೋಭಾ, ತಾಹಿರಾ, ಪ್ರಾಥಮಿಕ ಶಾಲಾ ಶಿಕ್ಷಕರಾದ ಎಂ.ಟಿ.ಪೂವಯ್ಯ, ಕೆ.ಎಂ.ವಿಜಯಲಕ್ಷ್ಮಿ, ಎಂ.ಎಂ.ದೀಪಿಕಾ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net