ಮಕ್ಕಳ ಹಕ್ಕುಗಳ ಸಂಸತ್ತು: ಮಕ್ಕಳ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಲ್ಲಿ ಉತ್ತಮ ವೇದಿಕೆಗಳಾಗಿವೆ: ಬಿಇಓ ರೇಣುಕಪ್ಪ ಬುರಡಿ

09GDG01
Published on

ಗದಗ: ಮಕ್ಕಳು ತಮ್ಮ ಹಕ್ಕುಗಳನ್ನು ಮಕ್ಕಳ ಹಕ್ಕುಗಳ ಸಂಸತ್, ಶಾಲೆಗಳಲ್ಲಿ ಮಕ್ಕಳ ಸಂಸತ್ ಮಾಡಿಕೊಂಡು ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುತ್ತಾರೆ. ಹಾಗೆಯೇ ಮಕ್ಕಳಿಂದಲೇ ಮಕ್ಕಳ ಸಮಸ್ಯೆಗಳನ್ನು ಚರ್ಚಿಸಿ ಮಕ್ಕಳಿಂದಲೇ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತಂದು ತುರ್ತಾಗಿ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವುದಾಗಿದೆ ಎಂದು ಗದಗ ಶಹರ ಬಿ.ಇ.ಓ ರೇಣುಕಪ್ಪ ಬುರಡಿ ತಿಳಿಸಿದರು.

ಗದಗ ಶಹರದ ವಿದ್ಯಾದಾನ ಶಿಕ್ಷಣ ಸಮಿತಿಯ ಬಿಎಡ್ ಕಾಲೇಜಿನಲ್ಲಿ ಯುನಿಸೆಫ್, ಕರ್ನಾಟಕ ಮಕ್ಕಳ ಹಕ್ಕುಗಳ ನಿಗಾ ಕೇಂದ್ರ, ಚೈಲ್ಡ್ ರೈಟ್ಸ್ ಟ್ರಸ್ಟ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಡಿಡಿಪಿಐ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಆಸರೆ ಅಂಗವಿಕಲರ ಕ್ಷೇಮಾಭಿವೃದ್ಧಿ ಸಂಸ್ಥೆ ಶಿರಹಟ್ಟಿ, ಇವರ ಸಂಯುಕ್ತಾಶ್ರಯದಲ್ಲಿ ಗುರುವಾರದಂದು ಆಯೋಜಿಸಲಾದ ಜಿಲ್ಲಾ ಮಟ್ಟದ ಮಕ್ಕಳ ಹಕ್ಕುಗಳ ಸಂಸತ್ತು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಉದ್ಗಾಟನೆ ನೆರವೇರಿಸಿ ಮಾತನಾಡಿದರು.  ಇಂತಹ ಮಕ್ಕಳ ಹಕ್ಕುಗಳ ಸಂಸತ್ತು ಕಾರ್ಯಕ್ರಮಗಳು ಮಕ್ಕಳ ಪಾಲಿನ ಉತ್ತಮ ವೇದಿಕೆಗಳಾಗಿದ್ದು, ಈ ವೇದಿಕೆಯ ಮೂಲಕ ಮಕ್ಕಳ ತಮ್ಮ ಸಮಸ್ಯೆಗಳನ್ನು ಹಂಚಿಕೊಂಡು ರಾಜ್ದ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳುವಲ್ಲಿ ಸಹಕಾರಿಯಾಗಿದ್ದರ ಕಾರಣ ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಿ ಎಂದು ಮಕ್ಕಳಿಗೆ ತಿಳಿಸಿದರು.

ಗ್ರಾಮೀಣ ಬಿಇಓ ವಿವಿ ನಡುವಿನಮನಿ ಮಾತನಾಡಿ, ಸಮಸ್ಯೆಗಳು ಬಂದಾಗ ಮಕ್ಕಳ ಸಹಾಯವಾಣಿ 1098 ಕ್ಕೆ ಕರೆ ಮಾಡುವ ಮುಖಾಂತರ ಸಹಾಯ ಪಡೆದುಕೊಳ್ಳಬಹುದು ಆದರೆ ಅದನ್ನು ದುರುಪಯೋಗ ಪಡಿಸಿಕೊಳ್ಳಬಾರದು, ಮಕ್ಕಳಿಗಾಗಿ ಸಾಕಷ್ಟು ಅವಕಾಶಗಳಿದ್ದು, ಅವುಗಳನ್ನು ಕಾರ್ಯರೂಪಕ್ಕೆ ತರಬೇಕಾದರೆ ಇಂದು ನೀವು ಈ ಕಾರ್ಯಕ್ರಮದಲ್ಲಿ ಸಕ್ರಿಯೆಯಾಗಿ ಪಾಲ್ಗೊಂಡು ನಿಮ್ಮ ಸಮಸ್ಯೆಗಳನ್ನು ಚರ್ಚಿಸಿ ಮುಖ್ಯಮಂತ್ರಿಗಳೊಂದಿಗೆ ಹಂಚಿಕೊಳ್ಳಬೇಕೆಂದು ತಿಳಿಸಿದರು.    

ಮಕ್ಕಳ ರಕ್ಷಣಾ ಘಟಕದ ರಮೇಶ ಕಳ್ಳಿಮನಿ ಮಾತನಾಡಿ  ಮಕ್ಕಳ ಹಕ್ಕುಗಳು ಎಲ್ಲರಿಗೂ ತಿಳಿದಿರಬೇಕು ಬದುಕುವ ಹಕ್ಕು, ಅಭಿವೃದ್ಧಿ ಹೊಂದುವ ಹಕ್ಕು, ಭಾಗವಹಿಸುವ ಹಕ್ಕು, ರಕ್ಷಣೆ ಹೊಂದುವ ಹಕ್ಕುಗಳು ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಮಕ್ಕಳ ಹಕ್ಕುಗಳು ಉಪಯುಕ್ತವಾಗಿವೆÉ. ಯಾವುದೇ ಮಗು ಅಪೌಷ್ಟಿಕತೆಯಿಂದಾಗಲೀ, ಶಿಕ್ಷಣದಿಂದ ವಂಚಿತರಾಗಲೀ, ಅನಾರೋಗ್ಯದಿಂದ ಬಳಲುತ್ತಿರುವುದಾಗಲೀ ಮತ್ತು ಭಾಗವಹಿಸುವಿಕೆಯಿಂದ ವಂಚಿತರಾಗಬಾರದು. ಜಿಲ್ಲಾ ಮಕ್ಕಳ ಹಕ್ಕು ಸಂಸತ್ ಕಾರ್ಯಕ್ರಮದಿಂದ ಇಬ್ಬರು ಮಕ್ಕಳನ್ನು ಆಯ್ಕೆ ಮಾಡಿ ರಾಜ್ಯ ಮಟ್ಟದ ಮಕ್ಕಳ ಹಕ್ಕುಗಳ ಸಂಸತ್ ನಲ್ಲಿ ಮಕ್ಕಳ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬೇಕು ಎಂದು ತಿಳಿಸಿದರು.
ಆಸರೆ ಅಂಗವಿಕಲರ ಕ್ಷೇಮಾಭಿವೃದ್ಧಿ ಸಂಸ್ಥೆಯ ಶಶಿಧರ ಶಿರಸಂಗಿ ಪ್ರಾಸ್ತಾವಿಕವಾಗಿ ಮಾತನಾಡಿ, ಮಕ್ಕಳ ಸಮಸ್ಯೆಗಳು, ಮತ್ತು ಬೇಡಿಕೆಗಳನ್ನು ಸರ್ಕಾರ ತುರ್ತಾಗಿ ಪರಿಶೀಲಿಸಬೇಕಾಗಿದೆ. ಮಕ್ಕಳೇ ಅವರನ್ನು ಕಾಡುತ್ತಿರುವ ಸಮಸ್ಯೆಗಳನ್ನು ಗುರ್ತಿಸಿ ಪಟ್ಟಿಯನ್ನು ಸಿದ್ಧಪಡಿಸಿ, ಸರ್ಕಾರಕ್ಕೆ ತಲುಪಿಸಿ, ಅವುಗಳಿಗೆ ಸೂಕ್ತ ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳುವಂತೆ ಚರ್ಚಿಸಿ ಆಗ್ರಹಿಸಲು ಕರ್ನಾಟಕ ಮಕ್ಕಳ ಹಕ್ಕುಗಳ ನಿಗಾ ಕೇಂದ್ರವು ರಾಜ್ಯ ಮಟ್ಟದ ಮಕ್ಕಳ ಹಕ್ಕುಗಳ ಸಂಸತ್ ಹಾಗೂ ಮುಖ್ಯ ಮಂತ್ರಿಗಳೊಂದಿಗೆ ಮಕ್ಕಳ ಸಮಾಲೋಚನೆಯನ್ನು ರಾಜ್ಯಮಟ್ಟದಲ್ಲಿ ಆಯೋಜಿಸುತ್ತಿದೆ. ಈ ಹಿನ್ನೆಲೆಯಲ್ಲಿ ನಮ್ಮ ಜಿಲ್ಲೆಯಿಂದ ಇಬ್ಬರು ಮಕ್ಕಳನ್ನು ಜಿಲ್ಲಾ ಪ್ರತಿನಿಧಿಗಳನ್ನಾಗಿ ಆಯ್ಕೆ ಮಾಡಿ ರಾಜ್ಯ ಮಟ್ಟಕ್ಕೆ ಕಳುಹಿಸಬೇಕೆಂದು ಇಂತಹ ಕಾರ್ಯಕ್ರಮಗಳನ್ನ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಬಿಆರ್‍ಸಿ ಅಧಿಕಾರಿ ಪ್ರಕಾಶ ಮಂಗಳೂರು, ತಾಪ ಇಓ ಜಗದೀಶ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮಲ್ಲನಗೌಡ ಮಲ್ಲಾಪೂರ, ಸಿಆರ್‍ಟಿ ಪ್ರತಿನಿಧಿಗಳಾದ ಅಶ್ವಿನಿ ಹಿರೇಮಠ, ಉಮಾ ಬಾರ್ಕಿ, ಪ್ರದೀಪ ಗೊಡಚಪ್ಪನವರ, ವೀರೇಶ ಉಮನಾಬಾದಿ, ಭರಮಪ್ಪ ಬೋಳೂಟಗಿ, ಜಿಲ್ಲೆಯ ವಿವಿಧ ಶಾಲೆಗಳಿಂದ ಮಕ್ಕಳು ಹಾಗೂ ಶಿಕ್ಷಕರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net