ಮಕ್ಕಳು ಶಿಕ್ಷಣದಿಂದ ವಂಚಿತರಾಗದಿರಲಿ

27 nrp 1
ಎನ್.ಆರ್.ಪುರದಲ್ಲಿ ನಡೆದ ಮಕ್ಕಳ ಬೇಸಿಗೆ ಶಿಬಿರ ಹಾಗೂ ವಿಶ್ವ ತಂಬಾಕು ನಿಷೇಧ ದಿನ ಕಾರ್ಯಕ್ರಮವನ್ನು ನ್ಯಾಯಾಧೀಶ ದಾಸರಿ ಕ್ರಾಂತಿಕಿರಣ್ ಉದ್ಘಾಟಿಸಿದರು. ನಿರಂಜನ್ ಗೌಡ, ಎಸ್.ಎಸ್.ಸಂತೋಷ್ ಕುಮಾರ್, ಫಾ.ಜೋಬೀಶ್, ಫಾ.ಅಭಿನವ್ ಇದ್ದರು.
Published on

ಎನ್.ಆರ್.ಪುರ: ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂದು ನ್ಯಾಯಾಧೀಶ ದಾಸರಿ ಕ್ರಾಂತಿ ಕಿರಣ್ ಸಲಹೆ ನೀಡಿದರು.
ಸೋಷಿಯಲ್ ವೆಲ್ಫೇರ್ ಸೊಸೈಟಿ, ತಾಲೂಕು ವಕೀಲರ ಸಂಘ, ಕಾನೂನು ಸೇವಾ ಸಮಿತಿ ಆಶ್ರಯದಲ್ಲಿ ಆಯೋಜಿಸಿದ್ದ ಮಕ್ಕಳ ಬೇಸಿಗೆ ಶಿಬಿರ ಹಾಗೂ ತಂಬಾಕು ನಿಷೇಧ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳಿಗಾಗಿ ಹಲವು ಕಾನೂನುಗಳಿದ್ದು, ಬಾಲ್ಯವಿವಾಹ ತಡೆ ಕಾಯ್ದೆ, ಪೋಕ್ಸೋ ಕಾಯ್ದೆ ಗಳಿವೆ ಎಂದು ಮಾಹಿತಿ ನೀಡಿದರು.
ಪಿಎಸ್‌ಐ ನಿರಂಜನ ಗೌಡ ಮಾತನಾಡಿ, ಹೆಣ್ಣು ಮಕ್ಕಳ ರಕ್ಷಣೆಗಾಗಿ ಹಲವು ಕಾನೂನುಗಳನ್ನು ರೂಪಿಸಲಾಗಿದೆ. ಮಕ್ಕಳಿಗೆ ಸಮಸ್ಯೆ ಉಂಟಾದರೆ ಮಕ್ಕಳ ಹೆಲ್ಪ್ ಲೈನ್ 1098 ಕ್ಕೆ ಕರೆ ಮಾಡಿ ಎಂದು ಸಲಹೆ ನೀಡಿದರು.
ತಾಲೂಕು ವಕೀಲರ ಸಂಘದ ಅಧ್ಯಕ್ಷ ಸಂತೋಷ ಕುಮಾರ್ ಮಾತನಾಡಿ, ವಿಶ್ವದಾದ್ಯಂತ ಮೇ 31ರಂದು ತಂಬಾಕು ನಿಷೇಧ ದಿನ ಆಚರಿಸಲಾಗುತ್ತದೆ. ಯುವಜನರು ಹೆಚ್ಚಾಗಿ ತಂಬಾಕು ಬಳಸುತ್ತಿದ್ದಾರೆ. ತಂಬಾಕು ಸೇವನೆಯಿಂದ ಜೀವಕ್ಕೆ ಅಪಾಯವಿದೆ. ತಂಬಾಕಿನ ಕೈಗೆ ನಿಮ್ಮ ಜೀವ ನೀಡಬಾರದು ಎಂದರು.
ಸೋಷಿಯಲ್ ವೆಲ್ಫೇರ್ ಸೊಸೈಟಿ ನಿರ್ದೇಶಕ ಫಾ.ಜೋಬೀಶ್, ಸಹಾಯಕ ನಿರ್ದೇಶಕ ಫಾ.ಅಭಿನವ್, ಮಹಿಳಾ ಸಾಂತ್ವಾನ ಕೇಂದ್ರದ ಆಪ್ತ ಸಮಾಲೋಚಕಿ ಶಶಿಕಲಾ, ಸಂಪನ್ಮೂಲ ವ್ಯಕ್ತಿ ಶಿಕ್ಷಕ ಸುಭಾಷ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net