

ಮಡಿಕೇರಿ: ಮಕ್ಕಳಿಗೆ ಶಾಲಾ ಶಿಕ್ಷಣದೊಂದಿಗೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸುವಿಕೆಯು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಟರಾಜ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕರ್ನಾಟಕ ಬಾಲವಿಕಾಸ ಅಕಾಡೆಮಿ ಧಾರವಾಡ ಹಾಗೂ ಮಹಿಳಾ ಮ್ತತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಹಯೋಗದೊಂದಿಗೆ ಶುಕ್ರವಾರ ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಮಕ್ಕಳ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಕ್ಕಳು ಶಿಕ್ಷಣಕ್ಕೆ ಮಾತ್ರ ಸೀಮಿತವಾಗಿರಬಾರದು. ಶಿಕ್ಷಣದ ಜತೆಗೆ ವಿವಿಧ ಚಟುವಟಿಕೆಗಳಲ್ಲಿ ಪಾಲ್ಗೊಂಡು ತಮ್ಮ ಪ್ರತಿಭೆ ಅನಾವರಣ ಮಾಡಬೇಕು. ಆಗಿದ್ದಲ್ಲಿ ಮಾತ್ರ ಮಕ್ಕಳ ಸರ್ವತೋಮುಖ ಬೆಳವಣಿಗೆ ಸಾಧ್ಯವಾಗುತ್ತದೆ ಎಂದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಕ್ಷೇತ್ರ ಸಂಪನ್ಮೂಲ ಅಧಿಕಾರಿ ಮಂಜುಳಾ ಮಾತನಾಡಿ, ಮಕ್ಕಳಿಗೆ ಬದುಕುವ ಹಕ್ಕು ಮತ್ತು ಉತ್ತಮ ಮಟ್ಟದ ಆರೋಗ್ಯ, ಬಾಲ್ಯದಲ್ಲಿ ಆರೈಕೆ ಮತ್ತು ಅಭಿವೃದ್ಧಿ, ಬಿಡುವು, ಮನರಂಜನೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ಪ್ರಮುಖ ಅಂಶವಾಗಿದೆ. ಇವುಗಳು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗಿರುತ್ತದೆ ಎಂದರು.
ಕಾರ್ಯಕ್ರಮವನ್ನು ಪುಟಾಣಿ ಮಕ್ಕಳ ಪ್ರಾರ್ಥನೆಯೊಂದಿಗೆ ಪ್ರಾರಂಭಿಸಲಾಯಿತು. ಜಿಲ್ಲೆಯ ವಿವಿಧೆಡೆಯಿಂದ ೧೦೦ ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಮಕ್ಕಳಿಗಾಗಿ ಕೊಡಗು ಜಿಲ್ಲೆಯ ಪಾರಂಪರಿಕ ಸಂಸ್ಕೃತಿ ಕುರಿತು ನೃತ್ಯ ಪ್ರದರ್ಶನ ಕಾರ್ಯಕ್ರಮ ಅಯೋಜಿಸಲಾಗಿತ್ತು. ಕಾರ್ಯಕ್ರಮದ ನಂತರ ವಿಜೇತರಿಗೆ ಪ್ರಸಂಶನ ಪತ್ರ ನೀಡಿ ಗೌರವಿಸಲಾಯಿತು
ಕಾರ್ಯಕ್ರಮದಲ್ಲಿ ಅಧೀಕ್ಷಕರಾದ ವಿಮಲ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸವಿತಾ ಹಾಗೂ ಪ್ರಥಮ ದರ್ಜೆ ಸಹಾಯಕ ಜಯಂತಿ ಹಾಗೂ ಇಲಾಖೆಯ ಸಿಬ್ಬಂದಿಗಳಾದ ಕೆ.ಎನ್.ಹರೀಶ್, ಪಿ.ಎನ್.ಕಾವ್ಯ, ಪಿ.ಬಿ.ನಿತಿನ್, ಕೇಶಿನಿ, ಶೈಲಜಾ, ಬಿ.ಕೃ?್ಣಪ್ಪ ಹಾಗೂ ಇತರರು ಇದ್ದರು. ಸಿ.ಎ.ಪೂಜಾ ನಿರೂಪಿಸಿದರು ಹಾಗೂ ವಂದಿಸಿದರು.