

ಬೆಳ್ವೆ: ಬೆಳ್ವೆ ಸರ್ಕಾರಿ ಹಿರಿಯ ಪ್ರಾರ್ಥಮಿಕ ಶಾಲಾ ಆರಂಭೋತ್ಸವದ ಪ್ರಯುಕ್ತ ಶಾಲೆಯನ್ನು ತಳಿರು ತೋರಣ, ಬಲೂನ್‌ಗಳಿಂದ ಅಲಂಕರಿಸಲಾಗಿತ್ತು. ಶೈಕ್ಷಣಿಕ ಸಾಲಿನಲ್ಲಿ ಶಾಲೆಗೆ ದಾಖಲಾತಿಗೊಂಡ ಮಕ್ಕಳನ್ನು ಮೆರವಣಿಗೆಯಲ್ಲಿ ಕರೆ ತಂದು ಗುಲಾಬಿ ಹೂವು, ಬಲೂನ್, ಸಿಹಿ ನೀಡಿ ಸ್ವಾಗತಿಸಲಾಯಿತು.
ಹಳೇ ವಿದ್ಯಾರ್ಥಿ ಸಂಘ ಅಧ್ಯಕ್ಷ ಜಯಂತ್ ಬೆಳ್ವೆ, ಉಪಾಧ್ಯಕ್ಷೆ ಚಂದ್ರಿಕಾ ಬೆಳ್ವೆ ಹಾಗೂ ಸದಸ್ಯರು, ಎಸ್‌ಡಿಎಂಸಿ ಅಧ್ಯಕ್ಷ ರವಿಚಂದ್ರ ನಾಯ್ಕ ಹಾಗೂ ಸದಸ್ಯರು, ಮುಖ್ಯ ಶಿಕ್ಷಕಿ ಜಯಶ್ರೀ, ಸಹ ಶಿಕ್ಷಕ ವೃಂದ, ಹಳೇ ವಿದ್ಯಾರ್ಥಿಗಳು, ಪಾಲಕರು ಉಪಸ್ಥಿತರಿದ್ದರು.