ಮಕ್ಕಳು ಕೆಲಸ ಮಾಡುವ ಸ್ಥಳ ಪರಿಶೀಲಿಸಿ

Untitled design
ಸಿರವಾರದ ತಹಸಿಲ್ ಕಚೇರಿಯಲ್ಲಿ ತಾಲೂಕು ಮಟ್ಟದ ಟಾಸ್ಕ್‌ಫೋರ್ಸ್ ಸಭೆ ನಡೆಯಿತು. ತಹಸೀಲ್ದಾರ್ ರವಿ ಎಸ್.ಅಂಗಡಿ, ಜಿಲ್ಲಾ ಬಾಲ ಕಾರ್ಮಿಕ ಯೋಜನಾಧಿಕಾರಿ ಮಂಜುನಾಥ ರೆಡ್ಡಿ, ಕಾರ್ಮಿಕ ನಿರೀಕ್ಷಕ ಶಾಂತಮೂರ್ತಿ, ಕಂದಾಯ ನಿರೀಕ್ಷಕ ಶ್ರೀನಾಥ, ಅಧಿಕಾರಿಗಳಾದ ಹಂಪಯ್ಯ ಪಾಟೀಲ್, ಸುನೀತಾ ಸಜ್ಜನ ಇದ್ದರು.
Published on

ವಿಜಯವಾಣಿ ಸುದ್ದಿಜಾಲ ಸಿರವಾರ
ಪ್ರತಿಯೊಬ್ಬರೂ ಬಾಲ ಕಾರ್ಮಿಕ ಪದ್ದತಿ ನಿರ್ಮೂಲನೆಗೆ ಮುಂದಾಗಬೇಕು ಎಂದು ತಹಸೀಲ್ದಾರ್ ರವಿ ಎಸ್.ಅಂಗಡಿ ಹೇಳಿದರು.


ಪಟ್ಟಣದ ತಹಸಿಲ್ ಕಚೇರಿಯಲ್ಲಿ ಗುರುವಾರ ಆಯೋಜಿಸಿದ್ದ ತಾಲೂಕು ಮಟ್ಟದ ಟಾಸ್ಕ್‌ಫೋರ್ಸ್ ಸಭೆಯಲ್ಲಿ ಮಾತನಾಡಿದರು. ಮಕ್ಕಳು ಕೆಲಸ ಮಾಡುವ ಸ್ಥಳ ಪರಿಶೀಲನೆ ಮಾಡಬೇಕು. ಬಾಲ ಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಂಡ ಮಾಲೀಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ಪ್ರಕರಣ ದಾಖಲಿಸಬೇಕು ಎಂದರು.


ಜಿಲ್ಲಾ ಬಾಲ ಕಾರ್ಮಿಕ ಯೋಜನಾಧಿಕಾರಿ ಮಂಜುನಾಥ ರೆಡ್ಡಿ, ಕಾರ್ಮಿಕ ನಿರೀಕ್ಷಕ ಶಾಂತಮೂರ್ತಿ, ಕಂದಾಯ ನಿರೀಕ್ಷಕ ಶ್ರೀನಾಥ, ಅಧಿಕಾರಿಗಳಾದ ಹಂಪಯ್ಯ ಪಾಟೀಲ್, ಸುನೀತಾ ಸಜ್ಜನ, ಸಿಆರ್‌ಪಿ ನಾಗರಾಜ, ಗ್ರಾಮ ಲೆಕ್ಕಾಧಿಕಾರಿ ವಿಲ್ಸನ್, ಪ್ರಮುಖರಾದ ಲಕ್ಷ್ಮೀ, ಮುಕ್ಕಣ್ಣ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net