ಜಿಪಿಪಿ ವಿದ್ಯಾಸಂಸ್ಥೆಯಲ್ಲಿ ಮಕ್ಕಳ ಸಾಂಸ್ಕೃತಿಕ ಉತ್ಸವ

8 bannur 1
ಬನ್ನೂರಿನ ಸಮೀಪದ ಮಲಿಯೂರು ಜಿಪಿಪಿ ವಿದ್ಯಾಸಂಸ್ಥೆಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಮಕ್ಕಳ ಸಾಂಸ್ಕೃತಿಕ ಉತ್ಸವದ ಕಾರ್ಯಕ್ರಮದಲ್ಲಿ ಎನ್.ಎಂ.ಮಂಚು, ಜಿ.ಪಿ.ಪ್ರಸನ್ನ, ಪುಟ್ಟಸ್ವಾಮಿ, ಬಿ.ಎಲ್.ವೆಂಕಟೇಶ್‌ಮೂರ್ತಿ, ನಂಜುಂಡಯ್ಯ, ಕೆಂಪೇಗೌಡ ಭಾಗವಹಿಸಿದ್ದರು.
Published on

ಬನ್ನೂರು: ಪಟ್ಟಣದ ಸಮೀಪದ ಮಲಿಯೂರು ಜಿಪಿಪಿ ವಿದ್ಯಾಸಂಸ್ಥೆಯಲ್ಲಿ ಮಕ್ಕಳ ಸಾಂಸ್ಕೃತಿಕ ಉತ್ಸವದ ಕಾರ್ಯಕ್ರಮವನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು.

ವಿವಿಧ ವೇಶಭೂಷಣ ತೊಟ್ಟ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ ಸೇರಿದಂತೆ ಕರಾಟೆ ಮತ್ತು ಯೋಗ ಪ್ರದರ್ಶನ ನಡೆಸಿಕೊಟ್ಟರು. ವಿದ್ಯಾಸಂಸ್ಥೆ ಕಾರ್ಯದರ್ಶಿ ಜಿ.ಪಿ.ಪ್ರಸನ್ನ ಮಾತನಾಡಿ, ಮಕ್ಕಳಿಗೆ ಬಾಲ್ಯದಲ್ಲಿ ಉತ್ತಮ ಶಿಕ್ಷಣ ನೀಡುವುದರಿಂದ ಮುಂದಿನ ದಿನಗಳಲ್ಲಿ ಅವರು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ ಎಂದು ಹೇಳಿದರು.

ಪಾಲಕರು ತಮ್ಮ ಮಕ್ಕಳ ಕಲಿಕೆಯಲ್ಲಿ ಹೆಚ್ಚಿನ ಆಸಕ್ತಿ ತೋರುವ ಮೂಲಕ ಮಕ್ಕಳು ಶಾಲೆಯ ಕಲಿಕೆಯಲ್ಲಿ ಹೇಗಿದ್ದಾರೆ ಎನ್ನುವುದನ್ನು ತಿಳಿದು, ಶಿಕ್ಷಕರು ನೀಡುವ ಮಾಹಿತಿ ಪಡೆದು ಅದರಂತೆ ಮಕ್ಕಳ ಕಲಿಕೆಗೆ ಸಹಕರಿಸಬೇಕು. ಇದರಿಂದ ಮಕ್ಕಳಿಗೆ ಉಜ್ವಲ ಭವಿಷ್ಯ ನೀಡಬಹುದು ಎಂದು ತಿಳಿಸಿದರು.
ನಿವೃತ್ತ ಪ್ರಾಂಶುಪಾಲ ಎನ್.ಎಂ.ಮಂಚು ಮಾತನಾಡಿ, ಸಾಂಸ್ಕೃತಿಕ ಉತ್ಸವದಂತ ಕಾರ್ಯಕ್ರಮಗಳು ಮಕ್ಕಳಿಗೆ ಉತ್ತಮ ವೇದಿಕೆಯನ್ನು ಕಲ್ಪಿಸಿಕೊಡುತ್ತದೆ. ಇದರಿಂದ ಮಕ್ಕಳಿಗೆ ತಮ್ಮ ಸಾಮರ್ಥ್ಯದ ಅರಿವಾಗಿ ಮುಂದಿನ ದಿನದಲ್ಲಿ ಮತ್ತಷ್ಟು ಮಾನಸಿಕವಾಗಿ ಸದೃಢರಾಗಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.

ನಿವೃತ್ತ ಮುಖ್ಯಶಿಕ್ಷಕ ಬಿ.ಎಲ್.ವೆಂಕಟೇಶ್‌ಮೂರ್ತಿ ಮಾತನಾಡಿದರು. ಮಲಿಯೂರು ಗ್ರಾಮ ಪಂಚಾಯಿತಿ ಪಿಡಿಒ ಸಿ.ಪುಟ್ಟಸ್ವಾಮಿ, ನಿವೃತ್ತ ಮುಖ್ಯೋಪಾದ್ಯಾಯ ಬಿ.ಎಲ್.ವೆಂಕಟೇಶ್‌ಮೂರ್ತಿ, ನಂಜುಂಡಯ್ಯ, ಕೆಂಪೇಗೌಡ, ಮಂಜುಳಾ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net