

ವಿಜಯವಾಣಿ ಸುದ್ದಿಜಾಲ ಧಾರವಾಡ
ಜಿಲ್ಲಾ ಬಾಲಭವನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ 9 ರಿಂದ 16 ವರ್ಷದೊಳಗಿನ ಮಕ್ಕಳಿಗೆ ಡಿ.ಸಿ ಕಾಂಪೌಂಡ ಹತ್ತಿರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರ ಕಚೇರಿಯ ಜಿಲ್ಲಾ ಬಾಲಭವನದಲ್ಲಿ ವಿವಿಧ ಕಲೆಗಳ ಪ್ರದರ್ಶನ ಸ್ಪರ್ಧೆ ಏರ್ಪಡಿಸಲಾಗಿದೆ.
ಆಸಕ್ತ ಮಕ್ಕಳು ಸೃಜನಾತ್ಮಕ ಪ್ರದರ್ಶನ ಕಲೆಗಳಾದ ಶಾಸ್ತ್ರೀಯ ನೃತ್ಯ, ಜಾನಪದ ನೃತ್ಯ, ಕರ್ನಾಟಕ ಶಾಸ್ತ್ರೀಯ ಸಂಗೀತ, ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ಸುಗಮ ಸಂಗೀತ ಸ್ಪರ್ಧೆ, ವಾದ್ಯ ಸಂಗೀತ, ತಬಲಾ, ಮೃದಂಗ, ಕೀಬೋರ್ಡ್, ಕೊಳಲು, ಡೊಳ್ಳು ಮತ್ತು ನಗಾರಿ, ವಿಜ್ಞಾನದಲ್ಲಿ ಸೃಜನಾತ್ಮಕ ಆವಿಷ್ಕಾರ, ಚಿತ್ರಕಲಾ ಸ್ಪರ್ಧೆಗಳಲ್ಲಿ ಭಾಗವಹಿಸಬಹುದು.
ಆಸಕ್ತರು ನ. 7ರೊಳಗೆ ಹೆಸರು ನೋಂದಾಯಿಸಬೇಕು. ಹೆಚ್ಚಿನ ಮಾಹಿತಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರ ಕಚೇರಿ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.