ವಾಲ್ಮೀಕಿ ಬುಡಕಟ್ಟು ಆಶ್ರಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

IMG_20241114_155252
ಹನಗೋಡು ಹೋಬಳಿಯ ನೇರಳಕುಪ್ಪೆ ಸರ್ಕಾರಿ ವಾಲ್ಮೀಕಿ ಬುಡಕಟ್ಟು ಆಶ್ರಮ ಶಾಲೆಯಲ್ಲಿ ಗುರುವಾರ ಮಕ್ಕಳ ದಿನಾಚರಣೆ ಕಾರ್ಯಕ್ರಮ ಆಚರಿಸಲಾಯಿತು. ಚೇತನ್ ಕುಮಾರ್, ಕೆ.ಕೆ.ಸ್ವಾಮಿ, ಶೇಖರ್, ನವೀನ್, ಪ್ರತಿಭಾ, ದೀಪು ಇದ್ದರು.
Published on

ಹನಗೋಡು: ಸಮೀಪದ ನೇರಳಕುಪ್ಪೆ ಸರ್ಕಾರಿ ವಾಲ್ಮೀಕಿ ಬುಡಕಟ್ಟು ಆಶ್ರಮ ಶಾಲೆಯಲ್ಲಿ ದಿ.ಪಂಡಿತ್ ಜವಹರಲಾಲ್ ನೆಹರು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಗುರುವಾರ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಖ್ಯಶಿಕ್ಷಕ ಚೇತನ್‌ಕುಮಾರ್ ಮಾತನಾಡಿ, ದೇಶದ ಪ್ರಧಾನ ಮಂತ್ರಿ ಆಗಿದ್ದ ದಿ.ಪಂಡಿತ್ ಜವಹರಲಾಲ್ ನೆಹರೂ ಅವರು ಸ್ವತಂತ್ರ ಭಾರತದ ಪ್ರಥಮ ಪ್ರಧಾನಿಗಳಾಗಿ ದೇಶದ ಏಳಿಗೆಗೆ ಪಂಚ ವಾರ್ಷಿಕ ಯೋಜನೆಯಡಿ ಕೃಷಿ, ಕೈಗಾರಿಕೆ, ನೀರಾವರಿ ಶಿಕ್ಷಣ, ಆರೋಗ್ಯ ಸೇರಿದಂತೆ ಹಲವಾರು ಮಹತ್ವದ ಯೋಜನೆಗಳನ್ನು ಜಾರಿಗೊಳಿಸಿ ಧೀಮಂತ ನಾಯಕರಾಗಿದ್ದು ಅವರ ಆದರ್ಶಗಳನ್ನು ನಾವು ನಮ್ಮ ಜೀವನದಲ್ಲಿ ಪಾಲಿಸುವಂತೆ ಕರೆ ನೀಡಿದರು.

ಶಿಕ್ಷಕ ಕೆ.ಕೆ.ಸ್ವಾಮಿ ಮಾತನಾಡಿ, ನೆಹರು ಅವರು ಮಕ್ಕಳ ಮೇಲಿಟ್ಟಿದ್ದ ಪ್ರೀತಿ ಹಾಗೂ ದೇಶಕ್ಕೆ ನೀಡಿದ ಕೊಡುಗೆಗಳನ್ನು ಕುರಿತು ಹಾಗೂ ಅವರ ಜೀವನ ಸಾಧನೆಗಳ ಬಗ್ಗೆ ತಿಳಿಸಿದರು.

ಸಮಾರಂಭದಲ್ಲಿ ಶಿಕ್ಷಕರಾದ ಶೇಖರ್, ನವೀನ್, ಚೇತನ್, ಎಂ.ಪ್ರತಿಭಾ, ದೀಪು, ಪದ್ಮಾ ಸೇರಿದಂತೆ ವಿದ್ಯಾರ್ಥಿಗಳು ಹಾಗೂ ಅಡುಗೆ ಸಿಬ್ಬಂದಿ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net