ಸುಳ್ಯದಲ್ಲಿ ಮಕ್ಕಳ ದಸರಾ:ಸ್ಪರ್ಧಾ ಕಾರ್ಯಕ್ರಮಗಳಲ್ಲಿ ಚಿಣ್ಣರ ಕಲರವ

makkalu
Published on

ಸುಳ್ಯ: ಶ್ರೀ ಶಾರದಾಂಬಾ ದಸರಾ ಸೇವಾ ಟ್ರಸ್ಟ್, ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ, ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು, ಶ್ರೀ ಶಾರದಾಂಬಾ ಉತ್ಸವ ಸಮಿತಿ ಸುಳ್ಯ ವತಿಯಿಂದ 53ನೇ ವರ್ಷದ ಶ್ರೀ ಶಾರದಾಂಬಾ ಉತ್ಸವ ಸುಳ್ಯ ದಸರಾ ಕಾರ್ಯಕ್ರಮದಲ್ಲಿ ಮಕ್ಕಳ ದಸರಾ ಕಾರ್ಯಕ್ರಮ ನಡೆಯಿತು.

ಸುಳ್ಯ ಬಸ್ ನಿಲ್ದಾಣದಲ್ಲಿ ಶ್ರೀ ಶಾರದಾಂಬಾ ಉತ್ಸವ ಸಮಿತಿ ಗೌರವಾಧ್ಯಕ್ಷ ಕೃಷ್ಣ ಕಾಮತ್ ಅರಂಬೂರು ಬ್ಯಾಂಡ್ ಬಾರಿಸಿ ಮಕ್ಕಳ ದಸರಾಕ್ಕೆ ಚಾಲನೆ ನೀಡಿದರು. ಬಸ್ ನಿಲ್ದಾಣದಲ್ಲಿ ತಾಲೂಕಿನ ವಿವಿಧೆಡೆಯ ನೂರಾರು ಮಕ್ಕಳು ಸೇರಿ ಮೆರವಣಿಗೆಯ ಮೂಲಕ ಶ್ರೀ ಶಾರದಾಂಬಾ ಕಲಾವೇದಿಕೆಯವರೆಗೆ ಸಾಗಿ ಬಂದರು.

ಬೆಳಗ್ಗೆ ಶ್ರೀ ಶಾರದಾಂಬೆಯ ಸನ್ನಿಧಿಯಲ್ಲಿ ಪುಟಾಣಿ ಮಕ್ಕಳಿಗೆ ಅಕ್ಷರಾಭ್ಯಾಸ ನೆರವೇರಿತು. ಮಕ್ಕಳಿಗೆ ಭಾವಗೀತೆ, ಭಕ್ತಿಗೀತೆ, ಛದ್ಮವೇಷ ಸ್ಪರ್ಧೆ, ಸಮೂಹ ನೃತ್ಯ, ಜನಪದ ಗೀತೆ, ಭರತನಾಟ್ಯ, ಡ್ರಾಯಿಂಗ್, ಗೂಡುದೀಪ ಸ್ಪರ್ಧೆ, ಲಕ್ಕಿಗೇಮ್ ಸೇರಿದಂತೆ ವಿವಿಧ ಸ್ಪರ್ಧಾ ಕಾರ್ಯಕ್ರಮ ನಡೆಯಿತು. ನೂರಕ್ಕೂ ಅಧಿಕ ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net