ನವೋದಯ ಶಾಲೆಗೆ ಮಕ್ಕಳ ಶೈಕ್ಷಣಿಕ ಪ್ರವಾಸ

navodaya school trip
ಶಿವಮೊಗ್ಗ ಹೊರವಲಯದ ಗಾಜನೂರಿನ ನವೋದಯ ವಿದ್ಯಾಲಯಕ್ಕೆ ಜಿಲ್ಲೆಮಟ್ಟದ ವಿವಿಧ ಬ್ಲಾಕ್‌ಗಳ ಗ್ರಾಮೀಣ ಭಾಗದ 5ನೇ ತರಗತಿಯ 130 ವಿದ್ಯಾರ್ಥಿಗಳು ಪ್ರವಾಸ ಕೈಗೊಂಡಿದ್ದರು.
Published on

ಶಿವಮೊಗ್ಗ: ಜಿಲ್ಲಾ ಮಟ್ಟದ ವಿವಿಧ ಬ್ಲಾಕ್‌ಗಳ ಗ್ರಾಮೀಣ ಭಾಗದ ಸರ್ಕಾರಿ ಶಾಲೆಯ 5ನೇ ತರಗತಿಯ 130 ವಿದ್ಯಾರ್ಥಿಗಳು ಪಿಎಂಶ್ರೀ ನವೋದಯ ಹಾಗೂ ಹಳೇ ವಿದ್ಯಾರ್ಥಿಗಳ ಸಂಘದ ಮಾರ್ಗದರ್ಶನದಲ್ಲಿ ಶಿವಮೊಗ್ಗ ಹೊರವಲಯದ ಗಾಜನೂರಿನ ನವೋದಯ ವಿದ್ಯಾಲಯಕ್ಕೆ ಪ್ರವಾಸ ಕೈಗೊಂಡಿದ್ದರು.

ವಿದ್ಯಾರ್ಥಿಗಳು ಕ್ಯಾಂಪಸ್ ನೋಟ, ಶಾಲೆಯ ವ್ಯವಸ್ಥೆಗಳು ಮತ್ತು ಸೌಲಭ್ಯಗಳನ್ನು ಪರಿಶೀಲಿಸಿದರು. ಅತ್ಯುತ್ತಮ ಶಿಕ್ಷಣದ ಕೇಂದ್ರ ಬಿಂದುವಾದ ಶಾಲೆಯ ಅನುಭವ ಪಡೆದು ಅಲ್ಲಿನ ಮಕ್ಕಳ ಜತೆ ಪರೀಕ್ಷೆ ತಯಾರಿ ಬಗ್ಗೆ ಸಂವಾದ ನಡೆಸಿದರು.

ಪ್ರಭಾರ ಪ್ರಾಚಾರ್ಯ ಜಾನ್ಸನ್ ಪಿ ಜೇಮ್ಸ್ ಮಾತನಾಡಿ, ನವೋದಯ ಶಾಲೆಯ ಮಕ್ಕಳು ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಬದುಕು ರೂಪಿಸಿಕೊಂಡಿದ್ದು ನೀವೆಲ್ಲರೂ ಪರೀಕ್ಷೆಗೆ ಉತ್ತಮ ತಯಾರಿ ನಡೆಸಿ ಮತ್ತು ನಮ್ಮ ನವೋದಯ ಶಾಲೆಗೆ ತೇರ್ಗಡೆ ಆಗಬೇಕು ಎಂದು ಆಶಿಸಿದರು.

ಮಕ್ಕಳ ಸಂವಾದ ಕಾರ್ಯಕ್ರಮದಲ್ಲಿ ನವೋದಯ ಪರೀಕ್ಷೆ ಬಗ್ಗೆ ತಯಾರಿ, ಸಮಯ ನಿರ್ವಹಣೆ, ಮಾನಸಿಕ ಸಾಮರ್ಥ್ಯ, ಗಣಿತ, ಕನ್ನಡ ವಿಷಯಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿ ನವೋದಯ ಶಾಲೆಯ 6ನೇ ತರಗತಿ ಮಕ್ಕಳಿಂದ ಪ್ರತ್ಯುತ್ತರ ಪಡೆದರು. ನವೋದಯ ಮತ್ತು ಮೊರಾರ್ಜಿ ಉಚಿತ ತರಬೇತಿ ಶಿಬಿರದ ಸಂಸ್ಥಾಪಕ ಪ್ರಕಾಶ್ ಜೋಯ್ಸ, ಶಿಬಿರದ ಸಹ ಸಂಸ್ಥಾಪ ಪುನೀತ್, ಡಾ. ಕೆ.ಎಂ.ಸುನಿಲ್ ಕುಮಾರ್, ಎಂ.ಪಿ.ನವೀನ್‌ಕುಮಾರ್, ಡಾ. ಕೆ.ಪಿ.ಸುನಿಲ್ಕುಮಾರ್, ಶಿವಮೂರ್ತಿ ಮತ್ತು ಶಿಬಿರದ ಶಿಕ್ಷಕರಾದ ರಂಗನಾಥ್, ಶಿವಕುಮಾರ್, ಇಮ್ರಾನ್, ಪ್ರದೀಪ್, ಪೂರ್ಣೇಶ್, ಲಕ್ಷ್ಮೀ, ಆಶಾ, ಶ್ರೀಧರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net