ಮಕ್ಕಳ ಆರೋಗ್ಯದತ್ತ ಇರಲಿ ಕಾಳಜಿ

11Anand3
ನಗರದ ಕೆಎಲ್‌ಇ ವೇಣುಧ್ವನಿ 90.4 ಎಫ್‌ಎಂ ಏರ್ಪಡಿಸಿದ್ದ ನೇರ ೆನ್-ಇನ್ ಪ್ರಸಾರ ಕಾರ್ಯಕ್ರಮದಲ್ಲಿ ಕೆಎಲ್‌ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆಯ ಚಿಕ್ಕಮಕ್ಕಳ ವೈದ್ಯೆ ಡಾ.ಸೋನಾಲಿ ಬಿಜ್ಜರಗ್ಗಿ ಮಾತನಾಡಿದರು. ಮನಿಷಾ ಪಿ.ಎಸ್., ಮಂಜುನಾಥ ಪೈ ಇದ್ದರು.
Published on

ಬೆಳಗಾವಿ: ಚಿಕ್ಕ ಮಕ್ಕಳ ಆರೋಗ್ಯ ಸೂಕ್ಷ್ಮವಾಗಿರುತ್ತದೆ. ಸ್ವಲ್ಪ ವ್ಯತ್ಯಾಸವಾದರೂ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಆದ್ದರಿಂದ ಪಾಲಕರು ಅವರ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕು ಎಂದು ನಗರದ ಕೆಎಲ್‌ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆಯ ಚಿಕ್ಕಮಕ್ಕಳ ವೈದ್ಯೆ ಡಾ.ಸೋನಾಲಿ ಬಿಜ್ಜರಗ್ಗಿ ಸಲಹೆ ನೀಡಿದರು.

ನಗರದ ಕೆಎಲ್‌ಇ ವೇಣುಧ್ವನಿ 90.4 ಎಫ್‌ಎಂ, ಕೆಎಲ್‌ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಹಾಗೂ ಕೆಎಲ್‌ಇ ಜವಾಹರಲಾಲ್ ನೆಹರು ವೈದ್ಯಕೀಯ ಮಹಾವಿದ್ಯಾಲಯದ ಸಹಯೋಗದಲ್ಲಿ ಶುಕ್ರವಾರ ಏರ್ಪಡಿಸಿದ್ದ ನೇರ ೆನ್-ಇನ್ ಪ್ರಸಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಚಿಕ್ಕಮಕ್ಕಳಲ್ಲಿ ಕಂಡುಬರುವ ಸಾಮಾನ್ಯ ರೋಗ ಮತ್ತು ಅದರ ಲಕ್ಷಣ, ಪತ್ತೆ ಹಚ್ಚುವ ಬಗೆ ಕುರಿತು ವಿವರಿಸಿದರು. ಕೇಳುಗರ ಪ್ರಶ್ನೆಗಳಿಗೆ ಉತ್ತರಿಸಿದರು. ಕಾರ್ಯಕ್ರಮ ನಿರ್ವಾಹಕಿ ಮನಿಷಾ ಪಿ.ಎಸ್., ಮಂಜುನಾಥ ಪೈ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net