ಮಕ್ಕಳ ಸಾಹಿತ್ಯ ಸಮ್ಮೇಳನ ಸ್ಮರಣ ಸಂಚಿಕೆ ಬಿಡುಗಡೆ

Btw_Literature
Published on

ಬಂಟ್ವಾಳ: ಮಕ್ಕಳ ಸಾಹಿತ್ಯ ಸಮ್ಮೇಳನ, ಮಕ್ಕಳ ಕಲಾಲೋಕ ಬಂಟ್ವಾಳ ಹಾಗೂ ದ.ಕ. ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ಕಡೇಶಿವಾಲಯ ಜಂಟಿ ಆಶ್ರಯದಲ್ಲಿ ನಡೆಯುವ 17ನೇ ಮಕ್ಕಳ ಸಾಹಿತ್ಯ ಸಮ್ಮೇಳನ ಸ್ಮರಣ ಸಂಚಿಕೆ ಲಹರಿ ಬಿಡುಗಡೆ ಕಾರ್ಯಕ್ರಮ ಕಡೇಶಿವಾಲಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಸಂಜೆ ನಡೆಯಿತು.

ಬಂಟ್ವಾಳದ ಎಸ್.ವಿ.ಎಸ್. ಟೆಂಪಲ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ.ಎನ್.ಗಂಗಾಧರ ಆಳ್ವ ಕೃತಿ ಬಿಡುಗಡೆಗೊಳಿಸಿದರು.

ಸ್ಮರಣ ಸಂಚಿಕೆಯ ಗೌರವ ಸಂಪಾದಕ, ಸಂಚಯಗಿರಿ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಡಾ.ತುಕಾರಾಂ ಪೂಜಾರಿ ಮಾತನಾಡಿದರು. ಮಕ್ಕಳ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷ ಕಿಟ್ಟಣ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಸಾಹಿತಿ ವಿಂದ್ಯಾ ಎಸ್.ರೈ ಅವರನ್ನು ಸನ್ಮಾನಿಸಲಾಯಿತು.

ಕಡೇಶಿವಾಲಯ ಗ್ರಾ.ಪಂ. ಅಧ್ಯಕ್ಷೆ ಭಾರತಿ ಎಸ್.ರಾವ್, ಮಕ್ಕಳ ಕಲಾಲೋಕದ ಅಧ್ಯಕ್ಷ ರಮೇಶ್ ಎಂ.ಬಾಯಾರ್ ಉಪಸ್ಥಿತರಿದ್ದರು.

ಸ್ಮರಣ ಸಂಚಿಕೆಯ ಸಂಪಾದಕ, ಸ್ವಾಗತ ಸಮಿತಿಯ ಸಂಚಾಲಕ ಮಾಧವ ರೈ ಸ್ವಾಗತಿಸಿದರು. ದಿವ್ಯಾ ಜಿ. ಸನ್ಮಾನಪತ್ರ ವಾಚಿಸಿದರು. ಮುಖ್ಯಶಿಕ್ಷಕ ಬಾಬು ಪೂಜಾರಿ ವಂದಿಸಿದರು. ಪ್ರೇಮಾ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net