ಮಕ್ಕಳ ಸಾಹಿತ್ಯ ಸಮ್ಮೇಳನ ಆಯೋಜನೆ ಚಿಂತನೆ

HLK PRATHIBE 26
Published on

ಹೊಳಲ್ಕೆರೆ: ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಅನೇಕ ಉತ್ತಮ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಜನರ ಮತ್ತು ಉಳ್ಳವರ ಸಹಕಾರ ಅಗತ್ಯ ಎಂದು ಅಧ್ಯಕ್ಷತೆ ವಹಿಸಿದ್ದ ಕಸಾಪ ತಾಲೂಕಾಧ್ಯಕ್ಷ ಎನ್.ಶಿವಮೂರ್ತಿ ಕೋರಿದರು.

ಕನ್ನಡ ಸಾಹಿತ್ಯ ಪರಿಷತ್ ಪಟ್ಟಣದ ಕನ್ನಡ ಭವನದಲ್ಲಿ ಶನಿವಾರ ಏರ್ಪಡಿಸಿದ್ದ ಮಕ್ಕಳ ಶ್ರಾವಣ ಕಾವ್ಯಗೋಷ್ಠಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವಿದ್ಯಾರ್ಥಿಗಳು, ಯುವ ಪೀಳಿಗೆ ಸಾಹಿತ್ಯ ಚಟುವಟಿಕೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಜ್ಞಾನಭಂಡಾರ ಹೆಚ್ಚಿಸಿಕೊಳ್ಳಬೇಕು ಎಂದ ಅವರು, ಮುಂದಿನ ದಿನದಲ್ಲಿ ಮಕ್ಕಳ ಸಾಹಿತ್ಯ ಸಮ್ಮೇಳನ ಆಯೋಜಿಸುವ ಚಿಂತನೆ ಇದೆ ಎಂದರು.

ಪುರಸಭೆ ಮುಖ್ಯಾಧಿಕಾರಿ ಎ.ವಾಸಿಂ, ಸರ್ಕಾರಿ ಆಸ್ಪತ್ರೆ ಆಡಳಿತಾಧಿಕಾರಿ ಡಾ.ವಿನಯ್, ಶಿಕ್ಷಕರಾದ ಟಿ.ಪಿ.ಉಮೇಶ್, ಸಿದ್ದವ್ವನಹಳ್ಳಿ ವೀರೇಶ್, ಬಿ.ಕೆ.ಆಚಾರ್, ಕೆ.ಎಸ್.ಪಾರ್ಥ, ಮಹಮದ್ ರಸೂಲ್, ಚಂದ್ರನಾಯ್ಕ, ಕಸಾಪ ಹೋಬಳಿ ಘಟಕದ ಅಧ್ಯಕ್ಷ ಆರ್.ಅಣ್ಣಪ್ಪ, ಸಂಘಟನ ಕಾರ್ಯದರ್ಶಿ ಪಿ.ಮನೋಹರ್, ಕಾರ್ಯದರ್ಶಿ ಆರ್.ರುದ್ರಪ್ಪ, ಜಾದು ಮೋಹನ್, ರಾ.ಸು.ತಿಮ್ಮಯ್ಯ, ಧರಣೇಂದ್ರಕುಮಾರ್, ಬಿ.ಜಿ.ಹಳ್ಳಿ ವೆಂಕಟೇಶ್ ಉಪಸ್ಥಿತರಿದ್ದರು.

ಗೀತಾ ಮತ್ತು ಸಂಗಡಿಗರು ಪ್ರಾರ್ಥಿಸಿದರು. ಆರ್.ರುದ್ರಪ್ಪ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಣೆ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net