ನಾಗರಿಕತೆ ಪ್ರಭಾವದಿಂದ ಮಕ್ಕಳ ಮುಗ್ಧತೆ ಮಾಯ : ಚಿಂತಕ ಲಕ್ಷ್ಮೀಶ ತೋಳ್ಪಾಡಿ ಪ್ರತಿಪಾದನೆ

New Project (14)
Published on

ಬಂಟ್ವಾಳ: ನಾಗರಿಕತೆ ಪ್ರಭಾವದಲ್ಲಿ ಮಕ್ಕಳು ಮುಗ್ಧತೆಯನ್ನು ಬಹುಬೇಗ ಕಳೆದುಕೊಳ್ಳುತ್ತಿದ್ದಾರೆ ಎಂದು ಚಿಂತಕ ಲಕ್ಷ್ಮೀಶ ತೋಳ್ಪಾಡಿ ಹೇಳಿದರು.

ಬಿ.ಸಿ.ರೋಡಿನ ಕನ್ನಡ ಭವನದಲ್ಲಿ ಅಭಿರುಚಿ ಜೋಡುಮಾರ್ಗ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಬಂಟ್ವಾಳ ವತಿಯಿಂದ ಶನಿವಾರ ಬೆಂಜನಪದವು ಸರ್ಕಾರಿ ಪದವಿಪೂರ್ವ ಕಾಲೇಜಿನ ಆಂಗ್ಲ ಭಾಷಾ ಉಪನ್ಯಾಸಕ ರಾಧೇಶ ತೋಳ್ಪಾಡಿ ಎಸ್. ರಚಿಸಿದ ಪುಟಾಣಿ ಕಿನ್ನರಿ ಕವಿತಾ ಎಂಬ ಮಕ್ಕಳ ಕವನ ಸಂಕಲನ ಲೋಕಾರ್ಪಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪುತ್ತೂರು ವಿವೇಕಾನಂದ ಕಾಲೇಜಿನ ಕನ್ನಡ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಡಾ.ಶ್ರೀಧರ ಎಚ್.ಜಿ. ಕೃತಿ ಲೋಕಾರ್ಪಣೆಗೊಳಿಸಿದರು. ಕವಿತೆಗಳಿಗೆ ರೇಖಾಚಿತ್ರ ರಚಿಸಿದ ಸಜೀಪಮೂಡ ಪ್ರೌಢಶಾಲಾ ವಿಭಾಗದ ಶಿಕ್ಷಕ ಬಾಲಕೃಷ್ಣ ಶೆಟ್ಟಿ ಅವರನ್ನು ಗೌರವಿಸಲಾಯಿತು. ಕೃತಿಕಾರ ರಾಧೇಶ ತೋಳ್ಪಾಡಿ ಕವನ ಸಂಕಲನದ ಕುರಿತು ತಿಳಿಸಿದರು.

ಬೆಳ್ತಂಗಡಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಆಂಗ್ಲ ಭಾಷಾ ಉಪನ್ಯಾಸಕ ಶೀನಾ ನಾಡೋಳಿ ಹಾಗೂ ಕೀರ್ತನಾ ಸಂಗೀತ ಶಾಲೆ ವಾಣಿಮಜಲಿನ ವಿದ್ಯಾರ್ಥಿಗಳು ಮಕ್ಕಳ ಕವಿತೆಗಳನ್ನು ಹಾಡಿದರು. ಬೆಂಜನಪದವು ಸರ್ಕಾರಿ ಪದವಿಪೂರ್ವ ಕಾಲೇಜಿನ ಪಂಜೆ ಸಾಹಿತ್ಯ ಸಂಘದ ವಿದ್ಯಾರ್ಥಿಗಳು ಸಹಕರಿಸಿದರು. ಅಭಿರುಚಿ ಜೋಡುಮಾರ್ಗ ಅಧ್ಯಕ್ಷ ದಾಮೋದರ್ ಸ್ವಾಗತಿಸಿದರು. ಹಿರಿಯ ರಂಗಕರ್ಮಿ ಮಹಾಬಲೇಶ್ವರ ಹೆಬ್ಬಾರ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net