

ವಿಜಯವಾಣಿ ಸುದ್ದಿಜಾಲ ಧಾರವಾಡ
ಮಕ್ಕಳಲ್ಲಿ ಅದ್ಭುತವಾದ ಪ್ರತಿಭೆ ಇರುತ್ತದೆ. ಅದಕ್ಕೆ ಪಾಲಕರು ಪ್ರೋತ್ಸಾಹ, ಶಿಕ್ಷಕರು ಸೂಕ್ತ ಮಾರ್ಗದರ್ಶನ ನೀಡಿದರೆ ಒಳ್ಳೆಯ ಪ್ರತಿಭೆ ಹೊರಹೊಮ್ಮಲು ಸಾಧ್ಯ. ಮಕ್ಕಳಿಗಾಗಿ ಆಸ್ತಿ ಮಾಡದೇ ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ ಎಂದು ಸಾಹಿತಿ ಡಾ. ಬಸು ಬೇವಿನಗಿಡದ ಹೇಳಿದರು.
ನಗರದ ಲಿಂಗಾಯತ ವಿದ್ಯಾಭಿವೃದ್ಧಿ ಸಂಸ್ಥೆಯ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ 2024-25ನೇ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನ ಸಮಾರಂಭದಲ್ಲಿ ಅವರು ಮಾತನಾಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ ಸಿಂದಗಿ ಮಾತನಾಡಿ, ಪಾಲಕರು ಮತ್ತು ಶಿಕ್ಷಕರು ತಮ್ಮ ಕರ್ತವ್ಯಗಳನ್ನು ಸರಿಯಾಗಿ ಮಾಡಿದರೆ ಮಕ್ಕಳ ಸರ್ವತೋಮುಖ ಬೆಳವಣಿಗೆ ಸಾಧ್ಯ. ಈ ದಿಸೆಯಲ್ಲಿ ಪಾಲಕರ ಜವಾಬ್ದಾರಿ ಬಹಳಷ್ಟಿದೆ ಎಂದರು.
ಸಂಸ್ಥೆ ಗೌರವ ಕಾರ್ಯದರ್ಶಿ ಚಂದ್ರಕಾಂತ ಮಟ್ಟಿ ಅಧ್ಯಕ್ಷತೆ ವಹಿಸಿದ್ದರು. ಶಿವಾನಂದ ಹೂಗಾರ, ಶಿಕ್ಷಕರಾದ ಜಿ.ಯು.ಅಮರಗೋಳ, ರೇಣುಕಾ ವಾಕೋಡೆ, ಎಂ.ಜಿ.ಲತಾ, ಅರ್ಚನಾ ಹಿರೇಮಠ, ಎಸ್.ಡಿ.ಪಾಟೀಲ, ಚೈತ್ರಾ ಸಂಗೊಳ್ಳಿ, ಕಚೇರಿ ಅಧೀಕ್ಷಕ ಶಿವಲಿಂಗ ನೀಲಗುಂದ, ಮಹಾಂತೇಶ ಕ್ವಾಟಿ, ಸೋಮಶೇಖರ ಕರಡಿಗುಡ್ಡ, ಮೃತ್ಯುಂಜಯ ಅಮರಗೋಳ, ಮಕ್ಕಳು, ಪಾಲಕರು, ಇತರರು ಇದ್ದರು.
ಅರ್ಚನಾ ಹಿರೇಮಠ ನಿರೂಪಿಸಿದರು.