ಮೆಣಸಿನಕಾಯಿ ಮೇಳಕ್ಕೆ ಉತ್ತಮ ಪ್ರತಿಕ್ರಿಯೆ

IMG_20240202_121629_194-2.jpg
Published on

ಹುಬ್ಬಳ್ಳಿ: ಬೆಳೆಗಾರರು ಹಾಗೂ ಗ್ರಾಹಕರಿಗೆ ಅನುಕೂಲವಾಗುವ ದಿಸೆಯಲ್ಲಿ ಮೆಣಸಿನಕಾಯಿ ಮೇಳ ಆಯೋಜಿಸಲಾಗಿದ್ದು, ಮಧ್ಯವರ್ತಿಗಳಿಲ್ಲದೇ ರೈತರು ನೇರವಾಗಿ ವಹಿವಾಟು ನಡೆಸಬಹುದಾಗಿದೆ ಎಂದು ಕಾಮಿರ್ಕ ಸಚಿವ ಸಂತೋಷ ಲಾಡ್ ಅಭಿಪ್ರಾಯಪಟ್ಟರು.

ಇಲ್ಲಿಯ ಮೂರುಸಾವಿರ ಮಠ ಮೈದಾನದಲ್ಲಿ ಕರ್ನಾಟಕ ರಾಜ್ಯ ಸಾಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿ, ತೋಟಗಾರಿಕೆ ಇಲಾಖೆ, ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ, ಸಂಶಿಯ ಅಮರಶಿವ ರೈತ ಉತ್ಪಾದಕ ಸಂಸ್ಥೆ ಹಾಗೂ ಉಳುವಾಯೋಗಿ ರೈತ ಉತ್ಪಾದಕ ಸಂಸ್ಥೆ ಇವುಗಳ ಸಂಯುಕ್ತಾಶ್ರಯದಲ್ಲಿ ಮೂರು ದಿನಗಳ ವರೆಗೆ ಆಯೋಜಿಸಿರುವ 12ನೇ ಒಣ ಮೆಣಸಿನಕಾಯಿ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶ್ರೀಮಠದ ಆವರಣದಲ್ಲಿ ಫೆ. 4ರ ವರೆಗೆ ಮೇಳ ನಡೆಯಲಿದೆ. ಧಾರವಾಡ ಸೇರಿ ಅಕ್ಕಪಕ್ಕ ಜಿಲ್ಲೆಗಳಿಂದಲೂ ರೈತರು ಮೆಣಸಿನಕಾಯಿ ತಂದಿದ್ದಾರೆ. ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net