

ಮಂಡ್ಯ: ಹಾಲು ಉತ್ಪಾದಕರ ಸಹಕಾರ ಸಂಘಗಳು ರೈತರ ಆರ್ಥಿಕ ಚಟುವಟಿಕೆಗಳಿಗೆ ಸಹಕಾರಿಯಾಗಿವೆ. ರೈತರು ಕೃಷಿಯ ಜತೆಯಲ್ಲಿ ಹೈನುಗಾರಿಕೆ ಮಾಡುವ ಮೂಲಕ ಆರ್ಥಿಕವಾಗಿ ಅಭಿವೃದ್ದಿ ಹೊಂದಬೇಕು ಎಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಸಲಹೆ ನೀಡಿದರು.
ಪಾಂಡವಪುರ ತಾಲೂಕು ಚಿನಕುರಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಆವರಣದಲ್ಲಿ ಆಯೋಜಿಸಿದ್ದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ರೈತರು ಹೈನುಗಾರಿಕೆಯಲ್ಲಿ ಹೆಚ್ಚು ತೊಡಗಿಸಿಕೊಂಡು ಆರ್ಥಿಕ ಸಬಲರಾಗಬೇಕು. ಚಿನಕುರಳಿ ಡೇರಿ ಆಡಳಿತ ಮಂಡಳಿ ಸದಸ್ಯರು ಹಾಗೂ ಉತ್ಪಾದಕರು ಉತ್ತಮವಾದ ರೀತಿಯಲ್ಲಿ ಸಂಘವನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದಾರೆ ಎಂದರು.
ಜಿಪಂ ಮಾಜಿ ಸದಸ್ಯ ಸಿ.ಅಶೋಕ್, ತಾಪಂ ಮಾಜಿ ಸದಸ್ಯ ಸಿ.ಎಸ್.ಗೋಪಾಲಗೌಡ, ಲಾರಿ ಮಾಲೀಕರ ಸಂಘದ ಅಧ್ಯಕ್ಷ ಸಿ.ಶಿವಕುಮಾರ್, ಡೇರಿ ಅಧ್ಯಕ್ಷ ಸಿ.ಎಂ.ರಮೇಶ್, ಉಪಾಧ್ಯಕ್ಷ ಸಿ.ಎಸ್.ರಮೇಶ್, ವಿಎಸ್‌ಎಸ್‌ಎನ್‌ಬಿ ಅಧ್ಯಕ್ಷ ಮಂಜುನಾಥ್, ಮಾಜಿ ಅಧ್ಯಕ್ಷರಾದ ಮೊಗ್ಗಣ್ಣಗೌಡ, ವಾಸುದೇವಯ್ಯ, ಗ್ರಾಪಂ ಮಾಜಿ ಅಧ್ಯಕ್ಷ ಪಾಪಣ್ಣ, ಸದಸ್ಯ ಸಿ.ಎ.ಲೋಕೇಶ್, ಮಾಜಿ ಸದಸ್ಯ ಸಿ.ಡಿ.ಮಹದೇವು, ಪುರಸಭೆ ಸದಸ್ಯ ಶಿವಣ್ಣ ಇತರರಿದ್ದರು.