ಚಿಂಚೋಳಿ: ಕನ್ನಡ ರಾಜ್ಯೋತ್ಸವಕ್ಕೆ ಸಿದ್ಧತೆ ಮಾಡಿಕೊಳ್ಳಿ

PH 01
Published on

ಚಿಂಚೋಳಿ: ನ.1 ರಂದು ನಾಡ ಹಬ್ಬಕ್ಕೆ ತಾಲೂಕು ಮಟ್ಟದ ಅಧಿಕಾರಿಗಳು ಸಕಲ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಗ್ರೇಡ್ 2 ತಹಸೀಲ್ದಾರ್ ವೆಂಕಟೇಶ ದುಗ್ಗನ್ ಹೇಳಿದರು.

ತಹಸೀಲ್ದಾರ್ ಕಾರ್ಯಾಲಯದ ಸಭಾಂಗಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕು ಮಟ್ಟದ ಎಲ್ಲಾ ಕಚೇರಿಗಳಿಗೆ ದೀಪಾಲಂಕಾರ ಮಾಡಬೇಕು. ಕಡ್ಡಾಯವಾಗಿ ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಬೇಕು. ರಾಷ್ಟ್ರಧ್ವಜಾರೋಹಣ ನೇರವೇರಿಸಬೇಕು ಎಂದರು.

ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಮಿನಿ ವಿಧಾನಸೌಧ ವರೆಗೆ ತೆರೆದ ವಾಹನದಲ್ಲಿ ಭುವನೇಶ್ವರಿ ದೇವಿ ಭವ್ಯ ಮೆರವಣಿಗೆ ತಾಲೂಕು ಮಟ್ಟದ ಅಧಿಕಾರಿಗಳು, ವಿವಿಧ ಪಕ್ಷಗಳ ರಾಜಕೀಯ ಗಣ್ಯರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಮೆರವಣಿಗೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಲು ಮುಂದಾಗಬೇಕು. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಲಾಗುವುದು ಎಂದು ಮಾತನಾಡಿದರು.

ತಾ.ಪಂ. ಇಓ ಶಂಕರ ರಾಠೋಡ, ಧನರಾಜ್ ಬೋಮ್ಮಾ, ಸುರೇಶ್ ದೇಶಪಾಂಡೆ, ಶಿವಕುಮಾರ ಪೋಚಾಲಿ, ಶಂಕರಜೀ ಹಿಪ್ಪರಗಿ, ಶಾಮರಾವ ಕೊರವಿ, ವಿಠಲ ಕುಸಾಳೆ, ಉಲ್ಲಾಸಕುಮಾರ ಕೇರಳ್ಳಿ, ಝರಣಪ್ಪ ತಳವಾರ, ಬಸವರಾಜ ವಾಡಿ ಸೇರಿದಂತೆ ಅನೇಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net