

ಸಿದ್ದಾಪುರ: 79ನೇ ಸ್ವಾತಂತ್ರೃ ದಿನಾಚರಣೆಯನ್ನು ಗ್ರಾಮ ಸೇರಿ ಸುತ್ತಲಿನ ಹಳ್ಳಿಗಳಲ್ಲಿ ಶುಕ್ರವಾರ ಸಡಗರದಿಂದ ಆಚರಿಸಲಾಯಿತು.
ಇದನ್ನೂ ಓದಿ:ಚುಡಾ ಕಚೇರಿಯಲ್ಲಿ ಧ್ವಜಾರೋಹಣ
ಗ್ರಾಮದ ಶರಣಬಸವೇಶ್ವರ ಹಿರಿಯ ಪ್ರಾಥಮಿಕ ಮತ್ತು ಪೌಢ ಶಾಲೆಯಲ್ಲಿ ಸಂಸ್ಥೆ ಅಧ್ಯಕ್ಷ ಬಸವರಾಜ ನೀರಗಂಟಿ ಧ್ವಜಾರೋಹಣ ನೆರವೇರಿಸಿದರು. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಅಧ್ಯಕ್ಷ ಮಲ್ಲಿಕಾರ್ಜುನ ಹೊಸಮನಿ, ಅಭಿನವ ವಿವಿಧೋದ್ದೇಶ ಸಹಕಾರ ಸಂಘದಲ್ಲಿ ಅಧ್ಯಕ್ಷ ಬಿ.ಬಸವರಾಜಪ್ಪ, ಗ್ರಾಪಂನಲ್ಲಿ ಅಧ್ಯಕ್ಷೆ ಶಿವಗಂಗಾ ಪಂಪಾಪತಿ ಭೋವಿ, ಕಸ್ತೂರಬಾ ಗಾಂಧಿ ಬಾಲಿಕಾ ವಸತಿ ಶಾಲೆಯಲ್ಲಿ ಮುಖ್ಯಶಿಕ್ಷಕ ಚಂದ್ರಶೇಖರ ಗಣವಾರಿ ಧ್ವಜಾರೋಹಣ ನೆರವೇರಿಸಿದರು. ಪುಟಾಣಿಗಳು ದೇಶ ಭಕ್ತರ ವೇಷ ತೊಟ್ಟು ಖುಷಿಪಟ್ಟರು.