ಯರಿಯೂರು ಗ್ರಾಪಂಗೆ ಚಿನ್ನಸ್ವಾಮಿ ಉಪಾಧ್ಯಕ್ಷ

Oplus_131072
ಯಳಂದೂರು ತಾಲೂಕಿನ ಯರಿಯೂರು ಗ್ರಾಪಂ ನೂತನ ಉಪಾಧ್ಯಕ್ಷರಾಗಿ ಮಂಗಳವಾರ ಆಯ್ಕೆಯಾದ ಚಿನ್ನಸ್ವಾಮಿ ಅವರನ್ನು ಗ್ರಾಪಂ ಅಧ್ಯಕ್ಷೆ ಲಾವಣ್ಯಾ ಕುಮಾರ್ ಹಾಗೂ ಸದಸ್ಯರು ಅಭಿನಂದಿಸಿದರು. ಜಿಪಂ ಮಾಜಿ ಉಪಾಧ್ಯಕ್ಷ ಜೆ. ಯೋಗೇಶ್ ಸೇರಿದಂತೆ ಅನೇಕರು ಇದ್ದರು.
Published on

ಯಳಂದೂರು: ಯರಿಯೂರು ಗ್ರಾಪಂ ಉಪಾಧ್ಯಕ್ಷ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ ಚಿನ್ನಸ್ವಾಮಿ ಅವಿರೋಧವಾಗಿ ಆಯ್ಕೆಯಾದರು.

ನಾರಾಯಣಸ್ವಾಮಿ ರಾಜೀನಾಮೆ ನೀಡಿದ್ದ ಹಿನ್ನೆಲೆಯಲ್ಲಿ ಮಂಗಳವಾರ ಚುನಾವಣೆ ನಿಗದಿಯಾಗಿತ್ತು. 18 ಸದಸ್ಯರಿರುವ ಈ ಪಂಚಾಯಿತಿಯಲ್ಲಿ ಚಿನ್ನಸ್ವಾಮಿ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಹಾಗಾಗಿ ಅವಿರೋಧವಾಗಿ ಆಯ್ಕೆ ಘೋಷಣೆ ಮಾಡಲಾಯಿತು. ಪಂಚಾಯತ್ ರಾಜ್ ನೀರಾವರಿ ವಿಭಾಗದ ಎಇಇ ಚಂದ್ರಶೇಖರ ಮೂರ್ತಿ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು.

ನೂತನ ಉಪಾಧ್ಯಕ್ಷ ಚಿನ್ನಸ್ವಾಮಿ ಮಾತನಾಡಿ, ನಮ್ಮ ಪಂಚಾಯಿತಿ ತಾಲೂಕಿನ ಪ್ರತಿಷ್ಠಿತ ಪಂಚಾಯಿತಿಗಳಲ್ಲಿ ಒಂದಾಗಿದೆ. ಯರಿಯೂರು, ಚಾಮಲಾಪುರ ಹಾಗೂ ಗಣಿಗನೂರು ಗ್ರಾಮಗಳನ್ನೊಳಗೊಂಡ ದೊಡ್ಡ ಪಂಚಾಯಿತಿಯಾಗಿದೆ. ಇಲ್ಲಿನ ಮೂಲ ಸಮಸ್ಯೆಗಳ ನಿವಾರಣೆಗೆ ನಾನು ಪ್ರಥಮ ಆದ್ಯತೆ ನೀಡುತ್ತೇನೆ. ಇಲ್ಲಿನ ರಸ್ತೆ, ಚರಂಡಿ, ಬೀದಿ ದೀಪ ನಿರ್ವಹಣೆಗೆ ಒತ್ತು ನೀಡುವೆ. ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಸಾರ್ವಜನಿಕರ ದೂರುಗಳಿಗೆ ಸ್ಪಂದಿಸುತ್ತೇನೆ. ನರೇಗಾ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಂಡು ಪಂಚಾಯಿತಿಯ ಅಭಿವೃದ್ಧಿಗೆ ಪ್ರಾಮಾಣಿವಾಗಿ ಯತ್ನಿಸುತ್ತೇನೆ ಎಂದರು.

ಜಿಪಂ ಮಾಜಿ ಉಪಾಧ್ಯಕ್ಷ ಜೆ.ಯೋಗೇಶ್ ಗ್ರಾಪಂ ಅಧ್ಯಕ್ಷೆ ಲಾವಣ್ಯಾಕುಮಾರ್ ಸದಸ್ಯರಾದ ಆರ್.ನಾರಾಯಣಸ್ವಾಮಿ, ಮಹೇಶ್, ಶೈಲಜಾ, ದೊಡ್ಡಮ್ಮ, ಮಹದೇವಯ್ಯ, ಲಕ್ಷ್ಮೀ, ವೈ.ಎಂ. ಪ್ರವೀಣ್‌ಕುಮಾರ್, ಕಪ್ಪಣ್ಣ, ಎನ್.ಆಶಾ, ಪಿ.ಮಹದೇಶ, ಪದ್ಮಾ, ಸಿ.ರಮೇಶ, ಜಿ.ಸಿ.ರಾಜೇಶ, ಕೆಂಪಮ್ಮ, ರತ್ನಮ್ಮ, ಶಾಂತಿ, ಚಂದ್ರಮ್ಮ, ತಾಪಂ ಮಾಜಿ ಸದಸ್ಯ ವೈ.ಕೆ.ಮೋಳೆ ನಾಗರಾಜು, ಕಸಾಪ ಅಧ್ಯಕ್ಷ ಯರಿಯೂರು ನಾಗೇಂದ್ರ, ಮುಖಂಡರಾದ ಜಯಣ್ಣ, ಮಹೇಶ್, ನಾರಾಯಣ, ವೈ.ಬಿ.ಮಹದೇವಸ್ವಾಮಿ, ನಟರಾಜು, ಮಹದೇವಶೆಟ್ಟಿ, ರಂಗಸ್ವಾಮಿ, ಕೃಷ್ಣಮೂರ್ತಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net