ಚಿಕ್ಕಮರಳಿಯಲ್ಲಿ ಗ್ರಾಮದಲ್ಲಿ ಬೋನಿಗೆ ಬಿದ್ದ ಚಿರತೆ ಸೆರೆ

Ch
Published on

ಪಾಂಡವಪುರ: ತಾಲೂಕಿನ ಚಿಕ್ಕಮರಳಿಯಲ್ಲಿ ಜನರಿಗೆ ಕಾಟ ಕೊಡುತ್ತಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ.

ಗ್ರಾಮ ಹೊರವಲಯದಲ್ಲಿ ಅರಣ್ಯ ಸಿಬ್ಬಂದಿ ಇರಿಸಿದ್ದ ಬೋನಿಗೆ 6 ವರ್ಷದ ಗಂಡು ಚಿರತೆ ಸೆರೆಯಾಗಿದೆ. ಗ್ರಾಮಸ್ಥರ ದೂರಿನ ಮೇರೆಗೆ 2-3 ದಿನಗಳ ಹಿಂದೆ ಗ್ರಾಮ ಹೊರವಲಯದಲ್ಲಿ ಅರಣ್ಯ ಸಿಬ್ಬಂದಿ ನಾಯಿಯೊಂದಿಗೆ ಬೋನು ಇರಿಸಿದ್ದರು. ಮಂಗಳವಾರ ನಾಯಿ ತಿನ್ನಲು ಬಂದ ಚಿರತೆ ಬೋನಿನಲ್ಲಿ ಸೆರೆಯಾಗಿದೆ. ಸೆರೆಯಾದ ಚಿರತೆಯನ್ನು ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶಕ್ಕೆ ಬಿಡಲಾಗುವುದು ಎಂದು ವಲಯ ಅರಣ್ಯಾಧಿಕಾರಿ ಪುಟ್ಟಸ್ವಾಮಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net